ಇ ಸಮಾಚಾರ ಡಿಜಿಟಲ್ ನ್ಯೂಸ್ (esamachara digital news) ಭಟ್ಕಳ(Bhatkal) :  ಹೆಂಡತಿ ಸಾವಿನಿಂದ ಬೇಸರಗೊಂಡಿದ್ದ ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡ ಘಟನೆ ತಾಲೂಕಿನ  ಹೊನ್ನೆಗದ್ದೆಯಲ್ಲಿ ನಡೆದಿದೆ.

ಮಂಜುನಾಥ ಈರಪ್ಪ ನಾಯ್ಕ ಮೃತ ದುರ್ದೈವಿ ಎಂದು ಗುರುತಿಸಲಾಗಿದೆ. ಮೇಸ್ತ್ರಿ ಕೆಲಸ ಮಾಡುತ್ತಿದ್ದ ಇವರು ತಮ್ಮ ಹೆಂಡತಿ ನಿಧನದ ಬಳಿಕ  ಮನಸ್ಸಿಗೆ ಹಚ್ಚಿಕೊಂಡಿದ್ದರು ಎಂದು ಕುಟುಂಬದವರು ತಿಳಿಸಿದ್ದಾರೆ.ಇದರಿಂದಲೇ ನೊಂದು  ಸಮೀಪದ ಅರಣ್ಯ ಪ್ರದೇಶದಲ್ಲಿರುವ ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಈ ಸಂಬಂಧ ಮೃತರ ಮಗ ಪಾಂಡುರಂಗ ನಾಯ್ಕ ಭಟ್ಕಳ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ. ಘಟನೆ ಸಂಬಂಧ  ಪೊಲೀಸರು ತನಿಖೆ ನಡೆಸಿದ್ದಾರೆ.

ಇದನ್ನು ಓದಿ : ದನ ಮೇಯಿಸುತ್ತಿದ್ದ ರೈತನ ಮೇಲೆ ಕರಡಿಗಳ ದಾಳಿ.

ರಾಜ್ಯದ ಕರಾವಳಿ ಜಿಲ್ಲೆಗಳಿಗೆ ರೆಡ್ ಅಲರ್ಟ್. ಸಮುದ್ರಕ್ಕೆಇಳಿಯದಂತೆ ಎಚ್ಚರಿಕೆ.

ಕಾರವಾರದ ಯೋಧನಿಗೆ ತವರೂರಲ್ಲಿ ಅಂತಿಮ ವಿದಾಯ. ನೌಕಾಪಡೆಯಿಂದ ಗೌರವ.

ಅಂಗನವಾಡಿ, ಶಾಲೆ, ಪದವಿಪೂರ್ವ ಕಾಲೇಜುಗಳಿಗೆ ರಜೆ – ಜಿಲ್ಲಾಧಿಕಾರಿ ಆದೇಶ