ಇ ಸಮಾಚಾರ ಡಿಜಿಟಲ್ ನ್ಯೂಸ್ (esamachara  digital news): ಭಟ್ಕಳ(Bhatkal) :  ಬಕ್ರೀದ್ ಹಬ್ಬದ ವೇಳೆಯಲ್ಲಿ, ಸಾರ್ವಜನಿಕ ಹಿತದೃಷ್ಟಿಯಿಂದ ಮತ್ತು ಕಾನೂನು ಸುವ್ಯವಸ್ಥೆ ಕಾಪಾಡುವ ಕುರಿತಂತೆ ಭಟ್ಕಳದಲ್ಲಿ ‌ಮದ್ಯ ಮಾರಾಟ ಮತ್ತು ಸಾಗಾಟ ನಿಷೇಧಿಸಿ ಜಿಲ್ಲಾಧಿಕಾರಿ ಆದೇಶಿಸಿದ್ದಾರೆ.

ಮೇ 28  ರಂದು ಬೆಳಿಗ್ಗೆ 5 ಗಂಟೆಯಿಂದ ಮೇ 29  ರ ಮಧ್ಯರಾತ್ರಿ 12 ಗಂಟೆಯವರೆಗೆ ಭಟ್ಕಳ ಶಹರ ಪೋಲಿಸ್ ಠಾಣಾ ವ್ಯಾಪ್ತಿಯಲ್ಲಿರುವ ಎಲ್ಲಾ ರೀತಿಯ ಮದ್ಯ ಮಾರಾಟ ಮತ್ತು ಸಾಗಾಟ ನಿಷೇಧಿಸಿಲಾಗಿದ್ದು,  ಮದ್ಯದ ಅಂಗಡಿಗಳನ್ನು ಬಂದ್ ಮಾಡುವಂತೆ ಜಿಲ್ಲಾಧಿಕಾರಿ ಕೆ. ಲಕ್ಷ್ಮೀ ಪ್ರಿಯಾ ಆದೇಶಿಸಿದ್ದಾರೆ.

ಮೇ 25ರಿಂದ ಭಟ್ಕಳ ಪಟ್ಟಣ ಮತ್ತು ಜಾಲಿ ಪಟ್ಟಣ ವ್ಯಾಪ್ತಿಯಲ್ಲಿ 144 ನಿಷೇದಾಜ್ಞೆ ಜಾರಿಯಲ್ಲಿತ್ತು. ಅಲ್ಲದೇ ಮೇ 27ರವರೆಗೆ  ಮದ್ಯ ನಿಷೇಧಿಸಲಾಗಿತ್ತು.
ಇದನ್ನು ಓದಿ : ಕೆಲಸಕ್ಕೆ ಹೋಗಿ ಬರುವುದಾಗಿ ಹೇಳಿ ಹೋಗಿದ್ದ ವ್ಯಕ್ತಿ ನಾಪತ್ತೆ. ತಂದೆಯಿಂದ ದೂರು‌ ದಾಖಲು.