ಇ ಸಮಾಚಾರ ಡಿಜಿಟಲ್ ನ್ಯೂಸ್ (esamachara digital news): ಅಂಕೋಲಾ(Ankola) : ತಾಲೂಕಿನ ರಾಷ್ಟ್ರೀಯ ಹೆದ್ದಾರಿ 52ರ(NH 52) ಅಡ್ಲೂರ್ ಬಳಿ ಜಿಪ್ಸಂ ಲವಣ ತುಂಬಿದ ಲಾರಿಯೊಂದು ಚಾಲಕನ ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ಪಲ್ಟಿಯಾದ ಘಟನೆ ನಡೆದಿದೆ.
ಕೇರಳದಿಂದ ಕೊಪ್ಪಳ ಕಡೆಗೆ(Keral to koppala) ಜಿಪ್ಸಂ ಹೊತ್ತು ಸಾಗುತ್ತಿದ್ದ ಲಾರಿ ಅಡ್ಲೂರ್ ಬಳಿ ಬರುತ್ತಿದ್ದಂತೆ, ಚಾಲಕನ ಅತೀ ವೇಗದ ಚಾಲನೆಯಿಂದಾಗಿ ನಿಯಂತ್ರಣ ಕಳೆದುಕೊಂಡು ರಸ್ತೆ ಬದಿಯ ವಿದ್ಯುತ್ ಕಂಬಕ್ಕೆ(Electric Pole) ಡಿಕ್ಕಿ ಹೊಡೆದು ಉರುಳಿ ಬಿದ್ದಿದೆ. ಅಪಘಾತದ ತೀವ್ರತೆಗೆ ಲಾರಿ ಸಂಪೂರ್ಣ ಪಲ್ಟಿಯಾಗಿದ್ದರೂ, ಅದೃಷ್ಟವಶಾತ್ ಚಾಲಕ ಮತ್ತು ಕ್ಲೀನರ್ ಪ್ರಾಣಾಪಾಯವಿಲ್ಲದೇ ಬಚಾವ್ ಆಗಿದ್ದಾರೆ.
ಲಾರಿ ಪಲ್ಟಿಯಾದ ರಭಸಕ್ಕೆ ಅದಲ್ಲಿದ್ದ ಜಿಪ್ಸಂ ಗೊಬ್ಬರವು ಘಟನಾ ಸ್ಥಳದ ಸುತ್ತಲೂ ಸುಮಾರು 50 ಮೀಟರ್‌ಗಿಂತಲೂ ಅಧಿಕ ಪ್ರದೇಶದಲ್ಲಿ ಸಂಪೂರ್ಣವಾಗಿ ಹರಡಿಕೊಂಡಿದೆ. ಮಳೆ ಬಂದರೆ ಈ ಜಿಪ್ಸಂ ಪಕ್ಕದಲ್ಲೇ ಇರುವ ಸಾರ್ವಜನಿಕ ಕುಡಿಯುವ ನೀರಿನ ಬಾವಿಗೆ ಸೇರುವ ಸಾಧ್ಯತೆ ಹೆಚ್ಚಾಗಿದೆ. ಹೀಗಾಗಿ ಬಾವಿಯ ನೀರು ಕಲುಷಿತಗೊಂಡು ಕುಡಿಯುವ ನೀರು ಹಾಳಾಗುವ ಸಾಧ್ಯತೆ ಇದೆ ಎಂದು ಸ್ಥಳೀಯ ನಿವಾಸಿಗಳು ಆತಂಕ ವ್ಯಕ್ತಪಡಿಸಿದ್ದಾರೆ.
ಅಂಕೋಲಾ ಪೊಲೀಸ್ ಠಾಣೆಯಲ್ಲಿ(Ankola Police Station) ಪ್ರಕರಣ ದಾಖಲಾಗಿದ್ದು, ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಸಾರ್ವಜನಿಕರ ಕುಡಿಯುವ ನೀರಿನ ಮೂಲಕ್ಕೆ ತೊಂದರೆಯಾಗುವ ಸಾಧ್ಯತೆ ಇದ್ದಿದರಿಂದ ಹರಡಿರುವ ಜಿಪ್ಸಂ ಅನ್ನು ತಕ್ಷಣವೇ ತೆರವುಗೊಳಿಸಬೇಕೆಂದು ಸ್ಥಳೀಯರು ಆಗ್ರಹಿಸಿದ್ದಾರೆ.
Lorry Overturns/ ಅಂಕೋಲಾದಲ್ಲಿ ಲಾರಿ ಪಲ್ಟಿ; ಮಾಲಿನ್ಯ ಭೀತಿ. ಸ್ಥಳೀಯರಲ್ಲಿ ಆತಂಕ
