ಇ ಸಮಾಚಾರ ಡಿಜಿಟಲ್ ನ್ಯೂಸ್ (esamachara digital news) ಅಂಕೋಲಾ(Ankola) : ತಾನು ಪ್ರೀತಿಸುತ್ತಿದ್ದ(Love) ಯುವತಿ ಮದುವೆಗೆ(Marriage) ಒಪ್ಪದ ಕಾರಣದಿಂದ ಯುವಕನೋರ್ವ ಮನನೊಂದು ನೇಣಿಗೆ ಶರಣಾದ ಘಟನೆ ತಾಲೂಕಿನ ಅಸ್ಲಗದ್ದೆ ಗ್ರಾಮದಲ್ಲಿ ನಡೆದಿದೆ.
ಪವನ್ ಭಟ್ (24) ಮೃತ ಯುವಕನಾಗಿದ್ದಾನೆ. ಪೌರೋಹಿತ್ಯ ವೃತ್ತಿ ಮಾಡಿಕೊಂಡು ಜೀವನ ಸಾಗಿಸುತ್ತಿದ್ದ ಪವನ್ ಅದೇ ಗ್ರಾಮದ ಯುವತಿಯೋರ್ವಳನ್ನು ಪ್ರೀತಿಸುತ್ತಿದ್ದ(Love) ಎನ್ನಲಾಗಿದೆ. ತಾನು ಪ್ರೀತಿಸುತ್ತಿದ್ದ ಯುವತಿಯನ್ನೆ ವಿವಾಹವಾಗುವ ಮನಸ್ಸು ಮಾಡಿದ್ದ. ಹೀಗಾಗಿ ಆಕೆಯನ್ನ ಒತ್ತಾಯಿಸಿದ್ದ. ಆದರೆ ಯುವತಿ ಮದುವೆಯಾಗಲು ನಿರಾಕರಿಸಿದ್ದಳು ಎಂದು ಹೇಳಲಾಗುತ್ತಿದೆ.
ಇದರಿಂದ ಮನನೊಂದು ಪವನ್ ಆತ್ಮಹತ್ಯೆಗೆ ಶರಣಾಗಿದ್ದಾನೆ ಎಂದು ತಿಳಿದುಬಂದಿದೆ. ಘಟನೆಯ ಮಾಹಿತಿ ಪಡೆದ ಅಂಕೋಲಾ ಪೊಲೀಸರು(Ankola Police) ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಿದ್ದಾರೆ.
ಇದನ್ನು ಓದಿ : ಗೋವಾ ನೈಟ್ ಕ್ಲಬ್ ದುರಂತ. ಆರೋಪಿಗಳಿಗೆ ಮರಣದಂಡನೆ ವಿಧಿಸುವಂತೆ ಆಗ್ರಹ.
ರಾಜ್ಯದಲ್ಲಿ ಸಿಎಂ ಆಗಿ ಇತಿಹಾಸ ಸೃಷ್ಟಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ
