ಇ ಸಮಾಚಾರ ಡಿಜಿಟಲ್ ನ್ಯೂಸ್ (esamachara digital news)ಉಡುಪಿ (Udupi) : ಮಲ್ಪೆ ಬಂದರು(Malpe Bunder) ಘಟನೆಗೆ ಸಂಬಂಧಿಸಿದಂತೆ ಬಂಧಿತರಾದ ಮೂವರ ಬಿಡುಗಡೆಗೆ ಹೈಕೋರ್ಟ್ (Highcourt) ಆದೇಶ ನೀಡಿದೆ.

ಮೀನು ಕದ್ದ(Fish Theft) ಆರೋಪದಲ್ಲಿ ದಲಿತ ಮಹಿಳೆಯನ್ನು ಮರಕ್ಕೆ ಕಟ್ಟಿ ಹಾಕಿ ಹಲ್ಲೆ ನಡೆಸಿರುವ ಪ್ರಕರಣದಲ್ಲಿ ಮೂವರು ಬಂಧಿತರಾಗಿದ್ದರು. ಪ್ರಕರಣದಲ್ಲಿ ಲಕ್ಷ್ಮೀ, ಶಿಲ್ಪಾ ಮತ್ತು ಸುಂದರ್ ಎಂಬವರನ್ನು ಬಂಧಿಸಲಾಗಿತ್ತು.

ಪ್ರಕರಣದ ಆರೋಪಿಗಳನ್ನು ಬಂಧಿಸಿರುವ ಕ್ರಮವನ್ನು ಪ್ರಶ್ನಿಸಿ ಹೈಕೋರ್ಟ್‌ಗೆ ಊರ್ಮಿಳಾ ಪುಲ್ಲಟ್ ರಿಟ್ ಅರ್ಜಿಯನ್ನು ಸಲ್ಲಿಸಿದ್ದರು. ಈ ಕುರಿತು ವಿಚಾರಣೆ ನಡೆಸಿದ ಹೈಕೋರ್ಟ್, ಪ್ರಕರಣದ ಬಂಧಿತ ಆರೋಪಿಗಳಾದ ಲಕ್ಷ್ಮೀ, ಶಿಲ್ಪಾ ಮತ್ತು ಸುಂದರ್ ಎಂಬವರನ್ನು ಬಿಡುಗಡೆಗೊಳಿಸುವಂತೆ ಆದೇಶ ನೀಡಿದೆ.

ಉಡುಪಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದಲ್ಲಿ ಪ್ರಕರಣದ ಬಂಧಿತ ಐವರು ಆರೋಪಿಗಳ ಜಾಮೀನು ಅರ್ಜಿ ವಿಚಾರಣೆ ಗುರುವಾರ ನಡೆಯಿತು.

ಸರಕಾರಿ ಅಭಿಯೋಜಕ ಜಯರಾಮ ಶೆಟ್ಟಿ ಜಾಮೀನು ಅರ್ಜಿಗೆ ಆಕ್ಷೇಪಣೆ ಸಲ್ಲಿಸಿದ್ದು, ಆರೋಪಿಗಳ ಪರ ಹಿರಿಯ ವಕೀಲ ಶಾಂತಾರಾಮ್ ಶೆಟ್ಟಿ ವಾದ ಮಂಡಿಸಿದ್ದರು. ಈ ಮಧ್ಯೆ ಹೈಕೋರ್ಟ್ ಮೂವರು ಆರೋಪಿಗಳ ಬಿಡುಗಡೆಗೆ ಆದೇಶ ನೀಡಿತ್ತು. ಆದುದರಿಂದ ಉಳಿದ ಇಬ್ಬರು ಆರೋಪಿಗಳಿಗೆ ಸಂಬಂಧಿಸಿದ ಜಾಮೀನು ಅರ್ಜಿಯ ವಿಚಾರಣೆಯನ್ನು ಮಾ.29ಕ್ಕೆ ಮುಂದೂಡಿ ನ್ಯಾಯಾಲಯ ಆದೇಶಿಸಿದೆ.

ಮಾ.18ರಂದು ಮಲ್ಪೆ ಬಂದರಿನಲ್ಲಿ ಮೀನು ಕದ್ದ ಆರೋಪದಲ್ಲಿ ವಿಜಯನಗರ ಮೂಲದ ಲಕ್ಕಿ ಬಾಯಿ ಎಂಬವರನ್ನು ಮರಕ್ಕೆ ಕಟ್ಟಿ ಹಲ್ಲೆ ನಡೆಸಲಾಗಿತ್ತು. ಈ ಸಂಬಂಧ ಹಲವರನ್ನು ಮಲ್ಪೆ ಪೊಲೀಸರು ಬಂಧಿಸಿದ್ದರು. 

ಬಂಧನ ಖಂಡಿಸಿ ಪ್ರತಿಭಟನೆ ಸಭೆ ನಡೆದು ಆಕ್ರೋಶ ವ್ಯಕ್ತವಾಗಿತ್ತು. ಆರೋಪಿಗಳನ್ನು ಬಿಡುಗಡೆ ಮಾಡುವಂತೆ ಒತ್ತಾಯ ಮಾಡಲಾಗಿತ್ತು.

ಇದನ್ನು ಓದಿ : ಒಳ ಮೀಸಲಾತಿ ಸಂಬಂಧದ ಮಧ್ಯಂತರ ವರದಿ ಮುಖ್ಯಮಂತ್ರಿಗೆ ಸಲ್ಲಿಕೆ.

ಬಿಜೆಪಿ ಶಿಸ್ತು ಸಮಿತಿ ಕ್ರಮ. ಶಾಸಕ ಯತ್ನಾಳಗೆ ಶಾಕ್. ಇನ್ನೂ ಹಲವರಿಗೆ ಪುಕುಪುಕು.