ಮಂಗಳೂರು Manglore : ರಾಜ್ಯದ ಕರಾವಳಿಯಲ್ಲಿ ಕಳೆದ ಕೆಲ ದಿನಗಳಿಂದ ಬಾರೀ ಮಳೆಯಾಗುತ್ತಿದೆ.  ಭಾರತೀಯ ಹವಾಮಾನ ಇಲಾಖೆ ಬಾರೀ ಮಳೆಯಾಗುವ ಸಾಧ್ಯತೆಯ ಹಿನ್ನೆಲೆಯಲ್ಲಿ ಜೂನ್‌ 27 ರಂದು ರೆಡ್‌ ಅಲರ್ಟ್‌ (Red Alert) ಘೋಷಣೆ ಮಾಡಿದೆ.

ಮುನ್ನೆಚ್ಚರಿಕಾ ಕ್ರಮವಾಗಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಾಳೆ (june 27) ಶಾಲೆಗಳಿಗೆ ರಜೆ ( School Holiday) ಘೋಷಣೆ ಮಾಡಿ ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ.

ದಕ್ಷಿಣಕನ್ನಡ ಜಿಲ್ಲೆಯ ಎಲ್ಲಾ ಅಂಗನವಾಡಿ, ಸರಕಾರಿ, ಅನುದಾನಿತ ಮತ್ತು ಖಾಸಗಿ ಪ್ರಾಥಮಿಕ ಹಾಗೂ ಪ್ರೌಢ ಶಾಲೆಗಳಿಗೆ ರಜೆ ಘೋಷಿಸಲಾಗಿದೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬುಧವಾರ ಅತ್ಯಧಿಕ ಪ್ರಮಾಣದಲ್ಲಿ  ಮಳೆ ಬಿದ್ದಿದೆ. ನಿರಂತರವಾಗಿ ಸುರಿದ ಮಳೆಯಿಂದಾಗಿ ತಗ್ಗು ಪ್ರದೇಶಗಳು ಜಲಾವ್ರತವಾಗಿ ಮನೆಗಳಿಗೆ ನೀರು ನುಗ್ಗಿದೆ. ಅಲ್ಲದೇ ನಾಳೆಯೂ ಮಳೆ ಮುಂದುವರಿಯುವ ಬಗ್ಗೆ  ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆಯನ್ನು ನೀಡಿದೆ. ಹೀಗಾಗಿ ದಕ್ಷಿಣ ಕನ್ನಡ ಜಿಲ್ಲಾಡಳಿತ ರೆಡ್‌ಅಲರ್ಟ್‌ ಘೋಷಿಸಿದೆ.