ಭಟ್ಕಳ : ತಾಲೂಕಿನ ಶ್ರೀ ಮಾರಿಕಾಂಬ ದೇವಿ ಜಾತ್ರೆ ಸಂದರ್ಭದಲ್ಲಿ ಮದ್ಯದ ಅಂಗಡಿ, ವೈನ್ ಶಾಪ್ ಮತ್ತು ಬಾರ್ ಗಳನ್ನು ಬಂದ್ ಮಾಡಲು ಜಿಲ್ಲಾಧಿಕಾರಿ ಅದೇಶಿಸಿದ್ದಾರೆ.
ಜುಲೈ 31ರಿಂದ ಎರಡು ದಿನಗಳ ಕಾಲ ಭಟ್ಕಳದಲ್ಲಿ ಶ್ರೀ ಮಾರಿಕಾಂಬ ದೇವಿ ಜಾತ್ರೆ ನಡೆಯಲಿದೆ. ಭಟ್ಕಳ ತಾಲೂಕು ಮತೀಯ ಹಾಗೂ ರಾಜಕೀಯ ದೃಷ್ಟಿಯಿಂದ ಅತೀ ಸೂಕ್ಷ್ಮ ಪ್ರದೇಶವಾಗಿದ್ದು, ಜಾತ್ರಾ ಸಮಯದಲ್ಲಿ ಕಾನೂನು ಸುವ್ಯಸ್ಥೆಗೆ ಧಕ್ಕೆ ಉಂಟಾಗುವ ಸಂಭವ ಇರುವ ಕಾರಣಕ್ಕೆ ಯಾವುದೇ ರೀತಿಯ ಅಹಿತಕರ ಘಟನೆ ನಡೆಯದಂತೆ ಕಾನೂನು ಸುವ್ಯವಸ್ಥೆ ಕಾಪಾಡುವ ದೃಷ್ಟಿಯಿಂದ ದಿನಾಂಕ:31-07-2024 ರಂದು ಬೆಳಿಗ್ಗೆ 5-00 ಗಂಟೆಯಿಂದ ದಿನಾಂಕ: 01-08-2024 ರಂದು ಮಧ್ಯರಾತ್ರಿ 12 ಗಂಟೆಯವರೆಗೆ (ಎರಡು ದಿವಸ) ಭಟ್ಕಳ ತಾಲೂಕಿನಾದ್ಯಂತ ಬರುವ ಎಲ್ಲಾ ಮದ್ಯದ ಅಂಗಡಿ, ವೈನ್ ಶಾಪ್ ಮತ್ತು ಬಾರ್ ಗಳನ್ನು ಬಂದ್ ಮಾಡುವಂತೆ ಮತ್ತು ಎಲ್ಲಾ ರೀತಿಯ ಮದ್ಯದ ಮಾರಾಟ / ಸಾಗಾಟ ನಿಷೇಧಿಸುವಂತೆ ಆದೇಶಿಸಲಾಗಿದೆ.
ಕಾರಣ ಉತ್ತರ ಕನ್ನಡ ಜಿಲ್ಲೆಯ ಭಟ್ಕಳ ತಾಲೂಕಿನಲ್ಲಿ ನಡೆಯುವ ಶ್ರೀ ಮಾರಿಕಾಂಬ ಜಾತ್ರಾ ಸಂದರ್ಭದಲ್ಲಿ ಕಾನೂನು ಮತ್ತು ಸುವ್ಯವಸ್ಥೆಯನ್ನು ಕಾಪಾಡುವ ದೃಷ್ಟಿಯಿಂದ ಭಟ್ಕಳ ತಾಲೂಕಿನಾದ್ಯಂತ ಎಲ್ಲಾ ರೀತಿಯ ಮದ್ಯದ ಅಂಗಡಿ ವೈನ್ ಶಾಪ್ ಮತ್ತು ಬಾರ್ ಗಳನ್ನು ಬಂದ್ ಮಾಡಿ ಜಿಲ್ಲಾಧಿಕಾರಿಗಳು ಆದೇಶ ಮಾಡಿದ್ದಾರೆ. ಹೀಗಾಗಿ ಭಟ್ಕಳ ತಾಲೂಕಿನಾದ್ಯಂತ ಮದ್ಯ ಸಾಗಾಟ ಹಾಗೂ ಮಾರಾಟವನ್ನು ನಿಷೇಧವಿರುತ್ತದೆ.