ಬೆಂಗಳೂರು : ರಾಜ್ಯದಲ್ಲಿ ಜೂನ್ 9ರವರೆಗೆ ಭಾರಿ ಮಳೆಯಾಗುವ ನಿರೀಕ್ಷೆ ಇದ್ದು, ಉತ್ತರಕನ್ನಡ, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆ ಸೇರಿ ಉತ್ತರ ಒಳನಾಡಿನ ಧಾರವಾಡ, ಗದಗ, ಹಾವೇರಿ, ಕೊಪ್ಪಳ, ರಾಯಚೂರು, ಬಳ್ಳಾರಿ, ಚಿತ್ರದುರ್ಗ, ಶಿವಮೊಗ್ಗ, ತುಮಕೂರಿಗೆ ಯಲ್ಲೋ ಅಲರ್ಟ್ (yellow alert) ಘೋಷಿಸಲಾಗಿದೆ.
ಆರಂಭದಲ್ಲಿ ಮುಂಗಾರು (Monsoon) ಚುರುಕುಗೊಂಡಿದೆ. ಆದರೆ ನಿನ್ನೆ ಶಿರಾಲಿಯಲ್ಲಿ 35.6 ಡಿಗ್ರಿ ಸೆಲ್ಸಿಯಸ್ ಅತ್ಯಂತ ಗರಿಷ್ಠ ಉಷ್ಣಾಂಶ ದಾಖಲಾಗಿದೆ, ಆದರೆ ಗೋಕರ್ಣ, ಕುಮಟಾ, ಕದ್ರಾ, ಕಾರವಾರ, ಅಂಕೋಲಾ, ಹೊನ್ನಾವರ, ಸಿದ್ದಾಪುರ ಸೇರಿ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಅಧಿಕ ಮಳೆಯಾಗಿದ್ದು
ಕರಾವಳಿಯಲ್ಲಿ ಇನ್ನೂ ಎರಡು ದಿನ ಹೆಚ್ಚಿನ ಮಳೆಯಾಗುವ ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ. ಜೂ.9 ರ ವರೆಗೂ ದಕ್ಷಿಣ ಒಳನಾಡಿನ ಭಾಗದಲ್ಲಿ ಅಧಿಕ ಮಳೆಯಾಗಲಿದ್ದು 40 ರಿಂದ 50 ಕಿಲೋಮೀಟರ್ ವೇಗದಲ್ಲಿ ಗಾಳಿ ಬೀಸಲಿದೆ. ಗುಡುಗು ಸಹಿತ ಮಳೆಯಾಗುವ ಸೂಚನೆಯನ್ನ ಹವಾಮಾನ ಇಲಾಖೆ ನೀಡಿದೆ.