ನವದೆಹಲಿ: 18ನೇ ಲೋಕಸಭೆಯ ಮೊದಲ ಅಧಿವೇಶನದಲ್ಲಿ ನೂತನ ಸಂಸದರು ಪ್ರಮಾಣ ವಚನ ಸ್ವೀಕರಿಸಿದರು.
ಪ್ರಧಾನಿ ನರೇಂದ್ರ ಮೋದಿ ಹಿಂದಿಯಲ್ಲಿ, ಕೇಂದ್ರ ಸಚಿವ ಎಚ್. ಡಿ. ಕುಮಾರಸ್ವಾಮಿ ಕನ್ನಡದಲ್ಲಿ ಹಾಗೂ ಉತ್ತರಕನ್ನಡ ನೂತನ ಸಂಸದರಾದ ವಿಶ್ವೇಶ್ವರ ಹೆಗಡೆ ಕಾಗೇರಿ ಸಂಸ್ಕೃತದಲ್ಲಿ ಪ್ರಮಾಣ ವಚನ ಸ್ವೀಕರಿಸಿದರು.
ಮಂಡ್ಯ ಸಂಸದರಾಗಿರುವ ಜೆಡಿಎಸ್ ನಾಯಕ ಕುಮಾರಸ್ವಾಮಿ ಕನ್ನಡದಲ್ಲಿ ಪ್ರಮಾಣ ವಚನ ಸ್ವೀಕರಿಸಿರುವುದು ಎಲ್ಲರ ಮೆಚ್ಚುಗೆಗೆ ಪಾತ್ರವಾಗಿದೆ.
ಲೋಕಸಭೆಗೆ ಆಯ್ಕೆಯಾದ ಉತ್ತರಕನ್ನಡ ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ ಅವರು ಸಂಸ್ಕೃತದಲ್ಲಿ ಪ್ರಮಾಣ ವಚನ ಸ್ವೀಕರಿಸಿದರು.
ರಾಜ್ಯದ ಬಹುತೇಕ ಸಂಸದರು ಕನ್ನಡದಲ್ಲಿಯೇ ಪ್ರಮಾಣ ಮಾಡಿದರು. ಎಲ್ಲರೂ ದೇವರ ಮೇಲೆ ಪ್ರಮಾಣ ಮಾಡಿದರು. ಮಂಗಳೂರು ಕ್ಷೇತ್ರದ ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ ಕನ್ನಡದಲ್ಲಿ ಪ್ರಮಾಣ ವಚನ ಸ್ವೀಕರಿಸಿ ತುಳುವಿನಲ್ಲಿ ಎಲ್ಲರಿಗೂ ವಂದನೆಗಳನ್ನ ಸಲ್ಲಿಸಿ ಗಮನ ಸೆಳೆದರು.
ಪ್ರಧಾನಿ ನರೇಂದ್ರ ಮೋದಿ ಪ್ರಮಾಣ ವಚನದ ಸಂದರ್ಭದಲ್ಲಿ ಭಾರತ್ ಮಾತಾಕಿ ಜೈ ಘೋಷಣೆ ಮೊಳಗಿದ್ದು ವಿಶೇಷವಾಗಿತ್ತು.