ಬೆಂಗಳೂರು: ಅಶ್ಲೀಲ ವಿಡಿಯೋ ಕೇಸ್ ನಲ್ಲಿ ನಾಪತ್ತೆಯಾಗಿದ್ದ ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅವರನ್ನ ಎಸ್ಐಟಿ ಬಲೆಗೆ ಕೆಡವಿದೆ.

ಅತ್ಯಾಚಾರ ಹಾಗೂ ಲೈಂಗಿಕ ದೌರ್ಜನ್ಯ ಕೇಸ್‌ನಲ್ಲಿ ಆರೋಪಿಯಾಗಿರುವ  ಪ್ರಜ್ವಲ್ ರೇವಣ್ಣ  ಬೆಂಗಳೂರು ಏರ್‌ಪೋರ್ಟ್‌ಗೆ ಆಗಮಿಸುತ್ತಿದ್ದಂತೆ  ಎಸ್‌ಐಟಿ ಅಧಿಕಾರಿಗಳು ಬಂಧಿಸಿದ್ದಾರೆ.

ಏಪ್ರಿಲ್ 26ರಿಂದ ವಿದೇಶಗಳಲ್ಲೇ ತಲೆಮರೆಸಿಕೊಂಡಿದ್ದ ಪ್ರಜ್ವಲ್ ರೇವಣ್ಣ ಗುರುವಾರ ಮದ್ಯರಾತ್ರಿ 12:50ರ ಸಮಯದಲ್ಲಿ ಲುಫ್ತಾನ್ನ ವಿಮಾನದಲ್ಲಿ ದೇವನಹಳ್ಳಿಯ ಕೆಂಪೇಗೌಡ ಏರ್‌ಪೋರ್ಟ್ ಗೆ ಬಂದಿಳಿದಾಗ ಮೊದಲು ಇಮಿಗ್ರೇಶನ್ ಅಧಿಕಾರಿಗಳು ತಮ್ಮ ವಶಕ್ಕೆ ಪಡೆದುಕೊಂಡರು ಬಳಿಕ ಎಸ್‌ಐಟಿಗೆ ಹಸ್ತಾಂತರಿಸಿದ್ದಾರೆ.

ಪ್ರಜ್ವಲ್ ವಿರುದ್ಧ ಲುಕ್ ಔಟ್ ಜಾರಿ ಮಾಡಿರುವ ಹಿನ್ನೆಲೆಯಲ್ಲಿ ವಿಮಾನ ನಿಲ್ದಾಣದ ಸಿಬ್ಬಂದಿ ಗುರುತಿಸಿ ಎಸ್‌ಐಟಿ ಪೊಲೀಸರ ವಶಕ್ಕೆ ಒಪ್ಪಿಸಿದ್ದಾರೆ.

ಬೆಂಗಳೂರು ಎಸ್‌ಐಟಿ ಪೊಲೀಸರು ಕೂಡ ವಿಮಾನ ನಿಲ್ದಾಣದೊಳಗೆ ಹೋಗಿ ಸಿಐಎಸ್‌ಎಫ್ ಪೊಲೀಸರ ನೆರವಿನಿಂದ ಪ್ರಜ್ವಲ್ ರೇವಣ್ಣರನ್ನು ಬಂಧಿಸಿದ್ದಾರೆ. ಬಳಿಕ ಪ್ರಜ್ವಲ್‌ರನ್ನು ಸಿಐಡಿ ಕಚೇರಿಗೆ ಕರೆದೊಯ್ದಿದ್ದಾರೆ.

ಪ್ರಜ್ವಲ್ ಆಗಮನ ವಿಚಾರ ತಿಳಿಯುತ್ತಿದ್ದಂತೆ ವಿವಿಧ ಸಂಘಟನೆಗಳ ಕಾರ್ಯಕರ್ತರು ಹಾಸನದಲ್ಲಿ ಪ್ರತಿಭಟನೆ ನಡೆಸಿದ್ದರು.