ಇ ಸಮಾಚಾರ ಡಿಜಿಟಲ್ ನ್ಯೂಸ್ (esamachara digital news) ಬೆಂಗಳೂರು(Bangalore) : ಕೊಲೆ ಪ್ರಕರಣವೊಂದರಲ್ಲಿ ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿ(Congress MLA Vinay Kulakarni) ಸೇರಿದಂತೆ 16 ಆರೋಪಿಗಳಿಗೆ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯವು(Special Court) ಶಿಕ್ಷೆಯ ಪ್ರಮಾಣವನ್ನು ಪ್ರಕಟಿಸಿದೆ.
ಧಾರವಾಡ ಜಿಲ್ಲಾ ಪಂಚಾಯತ್ ಸದಸ್ಯ(Dharwad ZP Member) ಯೋಗೇಶ್ ಗೌಡ ಕೊಲೆ ಪ್ರಕರಣದಲ್ಲಿ ದೋಷಿಗಳೆಂದು ಸಾಬೀತಾಗಿರುವ ಹಿನ್ನಲೆಯಲ್ಲಿ ಶಿಕ್ಷೆ ಪ್ರಕಟಿಸಲಾಗಿದೆ. ಹತ್ತು ವರ್ಷಗಳ ಸುದೀರ್ಘ ಕಾನೂನು ಹೋರಾಟದ ನಂತರ ನ್ಯಾಯಾಧೀಶರಾದ ಸಂತೋಷ್ ಗಜಾನನ ಭಟ್ ಅವರು ಶಾಸಕ ವಿನಯ್ ಕುಲಕರ್ಣಿ ಸೇರಿದಂತೆ 16 ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ (Life Imprisonment) ಪ್ರಕಟಿಸಿ ಮಹತ್ವದ ತೀರ್ಪು ನೀಡಿದ್ದಾರೆ
ಜೊತೆಗೆ ಅಪರಾಧಿಗಳು ಮೃತರಾಗಿರುವ ಯೋಗೇಶ್ ಗೌಡ ಮಕ್ಕಳಿಗೆ 16 ಲಕ್ಷ ರೂಪಾಯಿ ಪರಿಹಾರ ನೀಡುವಂತೆ ನ್ಯಾಯಾಲಯ ಸೂಚಿಸಿದೆ.
ಶಿಕ್ಷೆಯ ಪ್ರಮಾಣ ಪ್ರಕಟಿಸುವ ಸಂದರ್ಭದಲ್ಲಿ ಶಾಸಕ ವಿನಯ್ ಕುಲಕರ್ಣಿ (MLA Vinay Kulakarni) ನಾನು ಇಪ್ಪತ್ತೇಳು ವರ್ಷಗಳಿಂದ ರಾಜಕೀಯದಲ್ಲಿದ್ದೇನೆ, ಯಾರಿಗೂ ನೋವು ಮಾಡಿಲ್ಲ. ನನಗೆ ಮದುವೆ ವಯಸ್ಸಿನ ಇಬ್ಬರು ಹೆಣ್ಣು ಮಕ್ಕಳಿದ್ದಾರೆ ಮತ್ತು ನಾನು 3,500 ಹಸುಗಳನ್ನು ಸಾಕುತ್ತಿರುವ ಕೃಷಿಕ ಹಾಗಾಗಿ ಶಿಕ್ಷೆ ಪ್ರಮಾಣ ಕಡಿಮೆ ಮಾಡುವಂತೆ ನ್ಯಾಯಾಧೀಶರಲ್ಲಿ ಮನವಿ ಮಾಡಿದ್ದರು.
ಶಾಸಕ ಸ್ಥಾನ ರದ್ದು: ಕಾಯ್ದೆ, 1951 ರ (The Representation of the People Act, 1951) ಪ್ರಕಾರ ಕೊಲೆ ಕೇಸ್‌ನಲ್ಲಿ(Murder Case) ಶಾಸಕರೊಬ್ಬರು ಅಪರಾಧಿ ಎಂದು ಸಾಬೀತಾಗಿ ಕೋರ್ಟ್ ಶಿಕ್ಷೆ ಘೋಷಿಸಿದ ತಕ್ಷಣವೇ ಶಾಸಕ ಸ್ಥಾನ ಅಧಿಕೃತವಾಗಿ ರದ್ದಾಗುತ್ತದೆ. ಕ್ರಿಮಿನಲ್ ಪ್ರಕರಣದಲ್ಲಿ(Criminal Case) ದೋಷಿ ಎಂದು ಸಾಬೀತಾಗಿ, ಅವರಿಗೆ ನ್ಯಾಯಾಲಯವು ಕನಿಷ್ಠ 2 ವರ್ಷ ಅಥವಾ ಅದಕ್ಕಿಂತ ಹೆಚ್ಚು ಅವಧಿಯ ಜೈಲು ಶಿಕ್ಷೆ ವಿಧಿಸಿದರೆ, ಅವರು ತಕ್ಷಣವೇ ಯಾವುದೇ ಶಾಸಕನಿರಲಿ ಅಥವಾ ಸಂಸದರಿರಲಿ ತಮ್ಮ ಸ್ಥಾನದಿಂದ ಅನರ್ಹಗೊಳ್ಳುತ್ತಾರೆ.
ಕೇವಲ ಶಾಸಕ ಸ್ಥಾನ ರದ್ದಾಗುವುದು ಮಾತ್ರವಲ್ಲ, ಅವರು ಜೈಲು ಶಿಕ್ಷೆ ಅನುಭವಿಸಿ ಬಿಡುಗಡೆಯಾದ ದಿನದಿಂದ ಮುಂದಿನ 6 ವರ್ಷಗಳ ಕಾಲ ಯಾವುದೇ ಚುನಾವಣೆಗೆ ಸ್ಪರ್ಧಿಸುವಂತಿಲ್ಲ.
ವಿನಯ್ ಕುಲಕರ್ಣಿ ಮುಂದೇನು ಮಾಡಬಹುದು?: ಜನಪ್ರತಿನಿಧಿ ನ್ಯಾಯಾಲಯವು ಶಿಕ್ಷೆ ಪ್ರಕಟಿಸಿದ ತಕ್ಷಣವೇ ಶಾಸಕರು ಹೈಕೋರ್ಟ್(Highcourt) ಅಥವಾ ಸುಪ್ರೀಂ ಕೋರ್ಟ್‌ಗೆ ಮೇಲ್ಮನವಿ(Supreme Court appeal) ಸಲ್ಲಿಸಬಹುದು. ಮೇಲಿನ ನ್ಯಾಯಾಲಯವು ಕೇವಲ ಅವರ ಜೈಲು ಶಿಕ್ಷೆಯ ಮೇಲಷ್ಟೇ ಅಲ್ಲದೇ, ಅವರ ಮೇಲಿನ ಅಪರಾಧ ನಿರ್ಣಯದ ಮೇಲೂ ತಡೆಯಾಜ್ಞೆ ನೀಡಿದರೆ ಮಾತ್ರ ಅವರ ಶಾಸಕ ಸ್ಥಾನ ಮರಳಿ ಸಿಗುತ್ತದೆ. ಕೇವಲ ಜಾಮೀನು ಸಿಕ್ಕರೆ ಸ್ಥಾನ ಉಳಿಸಿಕೊಳ್ಳಲು ಸಾಧ್ಯವಿಲ್ಲ.
ಇದನ್ನು ಓದಿ : ಮುರ್ಡೇಶ್ವರದಲ್ಲಿ ಸರ್ಕಾರಿ ಬಸ್ ಗೆ ಬೆಂಕಿ. ಪ್ರಯಾಣಿಕರು ಸೇಪ್. ಆಟೋ ಚಾಲಕನ ಸಾಹಸ.
ಭಟ್ಕಳ ಪೊಲೀಸರ ಕಾರ್ಯಾಚರಣೆ. ನಕಲಿ ದಾಖಲೆ ಕೊಟ್ಟು ಜಾಮೀನು ಕೊಡಿಸುತ್ತಿದ್ದ ಆಸಾಮಿ ಬಂಧನ.
ರಾಷ್ಟ್ರೀಯ ಹೆದ್ದಾರಿಯಲ್ಲಿ ಟ್ಯಾಂಕರ್ ಗೆ ಬೆಂಕಿ. ಸ್ಥಳದಲ್ಲಿ ಆತಂಕ. ವಾಹನ ಸಂಚಾರ ಅಸ್ತವ್ಯಸ್ತ.

