ಉಡುಪಿ(Udupi) : ವ್ಯಕ್ತಿಯೋರ್ವನ ಕತ್ತು ಸೀಳಿ ಕೊಲೆ ಮಾಡಿದ ಹೃದಯವಿದ್ರಾವಕ ಘಟನೆ ಮಣಿಪಾಲದಲ್ಲಿ(Manipal) ಅನಂತ ಕಲ್ಯಾಣ ನಗರದಲ್ಲಿ ನಡೆದಿದೆ.
ಮಣಿಪಾಲ್ ಹೋಟೆಲ್ ನಲ್ಲಿ ಅಡುಗೆ ಕೆಲಸ ಮಾಡುತ್ತಿದ್ದ ಶ್ರೀಧರ್ (30) ಎಂಬಾತನೆ ಕೊಲೆಯಾದ ದುರ್ದೈವಿ. ಉತ್ತರ ಕನ್ನಡ(Uttarakannada) ಜಿಲ್ಲೆ ಹೊನ್ನಾವರದ(Honnavar) ಕಾಸರಕೋಡು ನಿವಾಸಿ (Kasarakodu native)ಎಂದು ಹೇಳಲಾಗಿದೆ. ದುಷ್ಕರ್ಮಿಗಳು ಬಿಯರ್ ಬಾಟಲಿ ಒಡೆದು ಕತ್ತಿಗೆ ಚುಚ್ಚಿ ಕೊಲೆ ಮಾಡಿದ್ದಾರೆ.
ಸ್ಥಳಕ್ಕೆ ಎಸ್ ಪಿ ಡಾ. ಅರುಣ್ ಕುಮಾರ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮಣಿಪಾಲ ಪೊಲೀಸರು (Manipal Police) ಪ್ರಕರಣ ದಾಖಲಿಸಿಕೊಂಡಿದ್ದಾರೆ. ಶ್ವಾನ ದಳ (Dog Squd) ಮತ್ತು ಎಫ್ ಎಸ್ ಎಲ್ (FSL) ತಜ್ಞರು ಸ್ಥಳಕ್ಕೆ ಆಗಮಿಸಿದ್ದಾರೆ. ತಡರಾತ್ರಿ ಅಥವಾ ಮುಂಜಾನೆ ವೇಳೆ ಕೃತ್ಯ ನಡೆದಿರುವ ಸಾಧ್ಯತೆ ಇದೆ. ಕಾರಿನಲ್ಲಿ ಬಂದಿದ್ದ ದುಷ್ಕರ್ಮಿಗಳು ಕೃತ್ಯ ನಡೆಸಿರುವ ಬಗ್ಗೆ ಮಾಹಿತಿ ಲಭ್ಯವಾಗಿದ್ದು, ಪೊಲೀಸರು ಸ್ಥಳೀಯರು ಹಾಗೂ ಸಹೋದ್ಯೋಗಿಗಳ ವಿಚಾರಣೆ ನಡೆಸಿದ್ದಾರೆ.
ಇದನ್ನು ಓದಿ : ಡಿ.ಉಮಾಪತಿಗೆ ವಡ್ಡರ್ಸೆ ರಘುರಾಮ ಶೆಟ್ಟಿ ಸಾಮಾಜಿಕ ನ್ಯಾಯ ಪತ್ರಿಕೋದ್ಯಮ ಪ್ರಶಸ್ತಿ