ಕಾರವಾರ :ದೇಶದ ಪ್ರಧಾನಮಂತ್ರಿಯಾಗಿ ಮೂರನೇ ಬಾರಿಗೆ ಹೆಮ್ಮೆಯ ನರೇಂದ್ರ ಮೋದಿಜಿಯವರು ಪ್ರಮಾಣವಚನ ಸ್ವೀಕರಿಸುತ್ತಿದ್ದಂತೆ ಉತ್ತರಕನ್ನಡ ಜಿಲ್ಲೆಯಲ್ಲಿ ಸಂಭ್ರಮ ಮುಗಿಲು ಮುಟ್ಟಿದೆ.
ಕಾರವಾರ ಬಿಜೆಪಿಯ ನಗರ ಮತ್ತು ಗ್ರಾಮೀಣ ಮಂಡಲ ವತಿಯಿಂದ ದೇವಾಲಯದಲ್ಲಿ ಪೂಜೆ ಸಲ್ಲಿಸಲಾಯಿತು. ಸದಾಶಿವಘಡದ ಮಹಾಮಾಯ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಿ ಸಿಹಿ ಹಂಚಿ ಸಂಭ್ರವಿಸಿದರು.
ಕಾರವಾರ ನಗರದಲ್ಲಿ ಸಿದ್ದಿ ವಿನಾಯಕ ದೇವರಿಗೆ ವಿಶೇಷ ಪೂಜೆ ಸಲ್ಲಿಸಿ ನಗರದಲ್ಲಿ ಸಿಹಿ ಹಂಚಿದ ಬಿಜೆಪಿ ಕಾರ್ಯಕರ್ತರು ಸಂತಸ ಪಟ್ಟರು.
ಭಟ್ಕಳದಲ್ಲಿ ಮೋದಿ ಅಭಿಮಾನಿಯೊಬ್ಬರು ಚನ್ನಪಟ್ಟಣ ಹನುಮಂತ ದೇವರಿಗೆ ನರೇಂದ್ರ ಮೋದಿ ಅವರ ಹೆಸರಲ್ಲಿ ಹೂವಿನ ಪೂಜೆ ನೇರವರಿಸಿದರು.
ಇತಿಹಾಸಕ್ಕೆ ಸರಿಹೊಂದುವಂತೆ ನರೇಂದ್ರ ಮೋದಿಜಿ 3ನೇ ಬಾರಿಗೆ ಪ್ರಧಾನಿಯಾಗಿ ಅಧಿಕಾರ ಸ್ವೀಕರಿಸುತ್ತಿರುವ ಹಿನ್ನೆಲೆಯಲ್ಲಿ ಬಿಜೆಪಿ ಭಟ್ಕಳ ಮಂಡಲ ವತಿಯಿಂದ ಶ್ರೀ ಚನ್ನಪಟ್ಟಣ ಹನುಮಂತ ದೇವಸ್ಥಾನದಲ್ಲಿ ಶ್ರೀ ವಿನಾಯಕಾದಿ ಶ್ರೀ ಹನುಮಂತ ದೇವರಿಗೆ ಪೂಜೆ ಸಲ್ಲಿಸಿ, ಪಟಾಕಿ ಸಿಡಿಸಿ ವಿಜಯೋತ್ಸವವನ್ನು ಆಚರಿಸಲಾಯಿತು. ಈ ಸಂದರ್ಭದಲ್ಲಿ ಬಿಜೆಪಿ ಮಂಡಲದ ಅಧ್ಯಕ್ಷರಾದ ಶ ಲಕ್ಷ್ಮಿನಾರಾಯಣ ನಾಯ್ಕ, ಪ್ರಮುಖರಾದ ಗೋವಿಂದ ನಾಯ್ಕ , ಸುಬ್ರಾಯ ದೇವಾಡಿಗ, ರಾಜೇಶ ನಾಯ್ಕ, ಮಂಡಲದ ಪದಾಧಿಕಾರಿಗಳು ಹಾಗೂ ಕಾರ್ಯಕರ್ತರು ಹಾಜರಿದ್ದರು.