ನವದೆಹಲಿ : ಬಿಜೆಪಿ ನೇತೃತ್ವದ ಎನ್ ಡಿ ಎ ಒಕ್ಕೂಟದ ಹಿರಿಯ ನಾಯಕರು ಸರ್ಕಾರ ರಚನೆ ಸಂಭಂದಿಸಿ ದೆಹಲಿಯಲ್ಲಿ ನಡೆಸಿದ ಚರ್ಚೆಯಲ್ಲಿ ನರೇಂದ್ರ ಮೋದಿಯೆ ನಮ್ಮ ನಾಯಕ ಎಂದು ಘೋಷಿಸಿದ್ದಾರೆ.

ಹೀಗಾಗಿ ನರೇಂದ್ರ ಮೋದಿ ಅವರೆ ಮೂರನೆ ಅವಧಿಗೆ ಪ್ರಧಾನಿಯಾಗೋದು ಖಚಿತವಾಗಿದೆ. ಸಭೆಯಲ್ಲಿ ನರೇಂದ್ರ ಮೋದಿ ಅವರನ್ನು ಮೈತ್ರಿಕೂಟದ ನಾಯಕರನ್ನಾಗಿ ಆಯ್ಕೆ ಮಾಡಲಾಗಿದೆ. ಬಡವರು, ದೀನದಲಿತರು, ಮಹಿಳೆಯರು, ಯುವಕರು, ರೈತರು ಮತ್ತು ಸಮಾಜದ ವಂಚಿತ ವರ್ಗಗಳ ಸೇವೆಗೆ ಮೈತ್ರಿ ಸರ್ಕಾರದ ಬದ್ಧತೆಯನ್ನು ಒತ್ತಿಹೇಳುವ ನಿರ್ಣಯವನ್ನ ಉಭಯ ಪಕ್ಷಗಳ ನಾಯಕರು ಅಂಗೀಕರಿಸಿದ್ದಾರೆ.‌

ಸಭೆಯಲ್ಲಿ ಟಿಡಿಪಿ ಅಧ್ಯಕ್ಷ ಎನ್ ಚಂದ್ರಬಾಬು ನಾಯ್ಡು, ಜೆಡಿಯು ನಾಯಕ ಮತ್ತು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್, ಶಿವಸೇನಾ ನಾಯಕ ಮತ್ತು ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ್ ಶಿಂಧೆ ಮತ್ತು ಎಲ್‌ಜೆಪಿ (ರಾಮ್ ವಿಲಾಸ್) ನಾಯಕ ಚಿರಾಗ್ ಪಾಸ್ವಾನ್ ಸೇರಿದಂತೆ ಹಲವರು ಉಪಸ್ಥಿತರಿದ್ದರು. ಈ ಸಭೆಯಲ್ಲಿ ಬಿಜೆಪಿಯ ಹಿರಿಯ ನಾಯಕರೂ ಉಪಸ್ಥಿತರಿದ್ದರು.

ಸಭೆಯಲ್ಲಿ ಹಾಜರಿದ್ದರು ಪ್ರತಿ ನಾಯಕರು ತಮ್ಮ ಅಭಿಪ್ರಾಯಗಳನ್ನು ಮಂಡಿಸಿದ್ದಾರೆ.  ಮೂರನೇ ಬಾರಿಗೆ ಎನ್‌ಡಿಎಗೆ ನೀಡಿದ ಜನಾದೇಶಕ್ಕಾಗಿ ಸಾರ್ವಜನಿಕರಿಗೆ ಧನ್ಯವಾದಗಳನ್ನು ಅರ್ಪಿಸಲಾಯಿತು.  ನರೇಂದ್ರ ಮೋದಿ ನೇತೃತ್ವದ ಸರ್ಕಾರ ಶೀಘ್ರದಲ್ಲೇ ರಚನೆಯಾಗಲಿದ್ದು, ಶೀಘ್ರದಲ್ಲಿಯೇ ಎಲ್ಲ ಸಂಸದರ ಸಭೆ ನಡೆಯಲಿದೆ ನಾಯಕರು ಹೇಳಿಕೆ ನೀಡಿದ್ದಾರೆ.