ಇ ಸಮಾಚಾರ ಡಿಜಿಟಲ್ ನ್ಯೂಸ್ (esamachara digital news) ಕಾರವಾರ(Karwar) : ಭಾರತೀಯ ನೌಕಾ ದಿನಾಚರಣೆಯ ಪ್ರಯುಕ್ತ ಕಾರವಾರದ ಐಎನ್ಎಸ್ ಕದಂಬ(INS Kadamba) ನೌಕಾನೆಲೆಯಲ್ಲಿ ನೌಕಾ ದಿನ(Navy Day) ಆಚರಿಸಲಾಯಿತು. ಕಾರ್ಯಕ್ರಮದಲ್ಲಿ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್(Governor Thaverchand Ghelot) ಅವರು ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದರು.
1971ರಲ್ಲಿ ಪಾಕಿಸ್ತಾನ(Pakistan) ವಿರುದ್ಧ ನಡೆದ ಯುದ್ಧದಲ್ಲಿ ಡಿ.4ರಂದು ಕರಾಚಿಯ ಬಂದರಿನ(Karachi Port) ಮೇಲೆ ದಾಳಿ ನಡೆಸಿ ಭಾರತವು ವಿಜಯ ಸಾಧಿಸಿದ ನೆನಪಿಗೆ ಪ್ರತಿ ವರ್ಷವೂ ಡಿ. ನಾಲ್ಕರಂದು ಭಾರತೀಯ ನೌಕಾದಿನ ಆಚರಿಸಲಾಗುತ್ತಿದೆ.
ಕಾರ್ಯಕ್ರಮದಲ್ಲಿ ನೌಕಾ ಸಿಬ್ಬಂದಿ ವಾದ್ಯ ಪರಿಕರಗಳಲ್ಲಿ ದೇಶಭಕ್ತಿ ಗೀತೆಗಳನ್ನು ನುಡಿಸಿದರು. ಬ್ಯಾಂಡ್ ಸಿಬ್ಬಂದಿ ಬೀಟಿಂಗ್ ರಿಟ್ರೀಟ್(Beating Retreat) ಮೂಲಕ ನೌಕಾಪಡೆಯ ಸಿಬ್ಬಂದಿಯ ತ್ಯಾಗ, ಬಲಿದಾನ ಮತ್ತು ಸಾಮರ್ಥ್ಯವನ್ನು ಸ್ಮರಿಸಿದರು. ನಂತರ ನೌಕಾಪಡೆಯ ಧ್ವಜದ ಅವರೋಹಣ ಮಾಡಲಾಯಿತು.
ಸಂಭ್ರಮಾಚರಣೆಯ ಭಾಗವಾಗಿ ನೌಕಾಪಡೆಯ ನೌಕೆಗಳಿಗೆ ಆಕರ್ಷಕ ವಿದ್ಯುತ್ ದೀಪಾಲಂಕಾರ ಮಾಡಲಾಗಿದ್ದು, ನೌಕೆಗಳಿಂದ ಸಿಡಿಮದ್ದುಗಳನ್ನು ಸಿಡಿಸಲಾಯಿತು. ನೌಕಾಪಡೆಯ ಸಿಬ್ಬಂದಿಗಳು, ನೌಕಾ ಅಗ್ನಿವೀರರು, ನೌಕಾನೆಲೆ ಶಾಲೆಯ ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಿತು.
ಕರ್ನಾಟಕ ನೌಕಾ ನೆಲೆಯ ಮುಖ್ಯಸ್ಥ ಫ್ಲ್ಯಾಗ್ ಕಮಾಂಡೆoಟ್ ಆಫಿಸರ್ ರಿಯರ್ ಅಡ್ಮಿರಲ್ ವಿಕ್ರಂ ಮೆನನ್, ಜಿಲ್ಲಾಧಿಕಾರಿ ಕೆ. ಲಕ್ಷ್ಮಿ ಪ್ರಿಯಾ, ಜಿ. ಪಂ. ಸಿಇಓ ಡಾ. ದಿಲೀಷ್ ಶಶಿ, ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿ ದೀಪನ್ ಎಂ. ಎನ್. , ಉಪ ಅರಣ್ಯ ಸಂರಕ್ಷಣಾಧಿಕಾರಿ ರವಿಶಂಕರ್ ಹಾಗೂ ನೌಕಾಪಡೆಯ ಅಧಿಕಾರಿಗಳು ಮತ್ತಿತರರು ಇದ್ದರು.
ಇದನ್ನು ಓದಿ : ಶಾಲೆಗೆ ಕಳಪೆ ತೊಗರಿಬೇಳೆ ಪೂರೈಕೆ. ಆಕ್ರೋಶಗೊಂಡ ಎಸ್ಡಿಎಂಸಿ, ಪಾಲಕರು.
ಭಟ್ಕಳದಲ್ಲಿ ಅರಣ್ಯವಾಸಿಗಳ ಬೃಹತ್ ಕಾನೂನು ಜಾಥಾ. ಮೂರು ತಲೆಮಾರಿನ ದಾಖಲೆ ಒತ್ತಾಯಿಸತಕ್ಕದಲ್ಲ : ರವೀಂದ್ರ ನಾಯ್ಕ
