ನವದೆಹಲಿ: ಭಾರತೀಯ ಜನತಾ ಪಕ್ಷದ (BJP ) ಹಿರಿಯ ನಾಯಕ ಎಲ್ ಕೆ ಅಡ್ವಾಣಿ ಅವರ ಆರೋಗ್ಯದಲ್ಲಿ ವ್ಯತ್ಯಾಸ ಆಗಿದ್ದರಿಂದ ನಿನ್ನೆ ರಾತ್ರಿ ದೆಹಲಿಯ ಅಪೋಲೋ(APOLLO) ಆಸ್ಪತ್ರೆಗೆ ದಾಖಲಿಸಲಾಗಿದೆ.
ಕಳೆದ ಕೆಲ ದಿನಗಳಿಂದ 96 ವರ್ಷದ ಅಡ್ವಾಣಿ ಅವರು ವಯೋಸಹಜ ಆರೋಗ್ಯ ಸಮಸ್ಯೆಗಳಿಂದ ಬಳಲುತ್ತಿದ್ದಾರೆ. ಕಳೆದು ತಿಂಗಳು ಜೂನ್ 26ರಂದು ಆರೋಗ್ಯ ಹದಗೆಟ್ಟ ಹಿನ್ನೆಲೆ ಅಡ್ವಾಣಿ ಅವರನ್ನು ದೆಹಲಿಯ ಏಮ್ಸ್ (DELHI AIMS)ಗೆ ದಾಖಲಿಸಲಾಗಿತ್ತು. ಇದೀಗ ಮತ್ತೆ ಎರಡನೇ ಬಾರಿಗೆ ಆಸ್ಪತ್ರೆಗೆ ದಾಖಳಿಸಲಾಗಿದೆ. . ಸದ್ಯ ಅವರ ಆರೋಗ್ಯ ಸ್ಥಿರವಾಗಿದ್ದು ನಿಗಾದಲ್ಲಿ ಇರಿಸಲಾಗಿದೆ ಎಂದು ಆಸ್ಪತ್ರೆಯ ಮೂಲಗಳು ತಿಳಿಸಿವೆ.
ರಾಜಕೀಯದಲ್ಲಿ ಹಿರಿಯರಾದ ಬಿಜೆಪಿ ಭೀಷ್ಮ ಎಂದೇ ಗುರುತಿಸಿಕೊಂಡಿರುವ ಅಡ್ವಾಣಿಯವರಿಗೆ ಮಾರ್ಚ್ ತಿಂಗಳಲ್ಲಿ ದೇಶದ ಅತ್ಯುನ್ನತ ನಾಗರಿಕ ಪ್ರಶಸ್ತಿಯಾದ ಭಾರತ ರತ್ನವನ್ನು (BHARAT RATNA) ನೀಡಿ ಗೌರವಿಸಲಾಗಿತ್ತು. ಅವರ ಆರೋಗ್ಯದ ಕಾರಣದಿಂದ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರೇ ಸ್ವತಃ ಅಡ್ವಾಣಿ ಅವರ ನಿವಾಸಕ್ಕೆ ಭೇಟಿ ನೀಡಿ ಪ್ರಶಸ್ತಿ (AWARD)ನೀಡಿ ಗೌರವಿಸಿದ್ದರು.
2015ರಲ್ಲಿ ಅಡ್ವಾಣಿ ಅವರಿಗೆ ದೇಶದ ಎರಡನೇ ಅತ್ಯುನ್ನತ ನಾಗರಿಕ ಪ್ರಶಸ್ತಿಯಾದ ಪದ್ಮವಿಭೂಷಣ ನೀಡಿ ಗೌರವಿಸಲಾಗಿತ್ತು. ಲಾಲ್ ಕೃಷ್ಣ ಅಡ್ವಾಣಿ ಅವರು 2002 ರಿಂದ 2004ರ ವರೆಗೆ ಭಾರತದ 7ನೇ ಉಪ ಪ್ರಧಾನ ಮಂತ್ರಿಯಾಗಿದ್ದರು. 1998 ರಿಂದ 2004ರ ವರೆಗೆ ಗೃಹ ಸಚಿವರಾಗಿಯೂ(HOME MINISTER) ಸೇವೆ ಸಲ್ಲಿಸಿದ್ದರು.
ಅಡ್ವಾಣಿಯವರು ಶೀಘ್ರ ಗುಣಮುಖರಾಗಲಿ ಎಂದು ದೇಶದಾದ್ಯಂತ ಅವರ ಅಭಿಮಾನಿಗಳು ಪ್ರಾರ್ಥಿಸಿಕೊಳ್ಳುತ್ತಿದ್ದಾರೆ.