ಇ ಸಮಾಚಾರ ಡಿಜಿಟಲ್ ನ್ಯೂಸ್ (esamachara digital news) : ನವದೆಹಲಿ (Newdelhi): ಉಗ್ರ ಚಟುವಟಿಕೆ (Terrorism) ನಿಗ್ರಹಕ್ಕೆ ಮಂಗಳೂರಿನಲ್ಲಿ ಆದಷ್ಟು ಬೇಗ ಎನ್‌ಐಎ ಘಟಕ(NIA Unit) ಸ್ಥಾಪಿಸುವಂತೆ ಕೇಂದ್ರ ಗೃಹ ಸಚಿವ ಅಮಿತ್ ಶಾ(Amit Sha) ಅವರಲ್ಲಿ ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್ ಚೌಟ(Brijesh chouta) ಮನವಿ ಸಲ್ಲಿಸಿದ್ದಾರೆ.

ನವದೆಹಲಿಯಲ್ಲಿ ಭೇಟಿ ಮಾಡಿದ  ಚೌಟ, ಕರಾವಳಿ ತೀರದ ಸುರಕ್ಷತೆ ದೃಷ್ಟಿಯಿಂದ ಭಾರತೀಯ ಕೋಸ್ಟ್ ಗಾರ್ಡ್(Indian Coast Guard) ಅಕಾಡೆಮಿ ಸ್ಥಾಪನೆ ಯೋಜನೆ ಅನುಷ್ಠಾನ, ದಕ್ಷಿಣ ಕನ್ನಡದಲ್ಲಿ ಸೈನಿಕ ಶಾಲೆ-ಮಿಲಿಟರಿ ನೆಲೆ ಸ್ಥಾಪಿಸುವುದು, ಮಂಗಳೂರು-ಬೆಂಗಳೂರು (Manglore – Banglore) ನಡುವಿನ ರೈಲು (Railway) ಹಾಗೂ ರಸ್ತೆ ಸಂಪರ್ಕ(Road Connectivity) ಮತ್ತಷ್ಟು ಸುಗಮಗೊಳಿಸುವುದು ಸೇರಿದಂತೆ ದಕ್ಷಿಣ ಕನ್ನಡ ಜಿಲ್ಲೆ (Dakshinakannada) ಸಮಗ್ರ ಅಭಿವೃದ್ಧಿ ಹಾಗೂ ಸುರಕ್ಷತೆ ಹೆಚ್ಚಳಕ್ಕೆ ಪೂರಕವಾದ ಹಲವು ಪ್ರಮುಖ ಬೇಡಿಕೆ ಒಳಗೊಂಡಿರುವ ಮನವಿಯನ್ನು ನೀಡಿದ್ದಾರೆ.

ಜಿಲ್ಲೆಯ ಅಭಿವೃದ್ಧಿ ವಿಚಾರವಾಗಿ ಮೊದಲ ಬಾರಿಗೆ ಅಧಿಕೃತವಾಗಿ ಅಮಿತ್ ಶಾ ಅವರನ್ನು ಭೇಟಿ ಮಾಡಿದ ಕ್ಯಾ. ಚೌಟ ಜಿಲ್ಲೆಯ ಪ್ರಗತಿಗೆ ಸಂಬಂಧಿಸಿದ ವಿಷಯಗಳ ಬಗ್ಗೆ ಸಮಲೋಚಿಸಿದ್ದಾರೆ.

ಮಂಗಳೂರಿನಲ್ಲಿ ರಾಷ್ಟ್ರೀಯ ತನಿಖಾ ಸಂಸ್ಥೆಯಾದ(National Investigation Agency) ಎನ್‌ಐಎ ಘಟಕ ಸ್ಥಾಪಿಸಬೇಕೆಂಬ ಒತ್ತಾಯ ಹಲವು ವರ್ಷಗಳಿಂದ ಕೇಳಿಬಂದ ಕಾರಣಕ್ಕೆ  ಇಂದು ಗೃಹ ಸಚಿವ(Home Minister) ಅಮಿತ್ ಶಾ ಅವರನ್ನು ಭೇಟಿ ಮಾಡಿದ್ದಾರೆ. ಮಂಗಳೂರು ಸೇರಿ ಕರಾವಳಿಯಲ್ಲಿ ಎಸ್‌ಡಿಪಿಐ(SDPI), ಪಿಎಫ್‌ಐನಂಥ(PFI) ಮತಾಂಧ ಸಮಾಜಘಾತುಕ ಸಂಘಟನೆಗಳ ಮೂಲಕ ಸ್ಲಿಪರ್‌ಸೆಲ್‌ನಂತಿರುವ ಉಗ್ರ ಚಟುವಟಿಕೆ ಮಟ್ಟ ಹಾಕಬೇಕಾದರೆ ಕರಾವಳಿಯಲ್ಲಿ ಎನ್‌ಐಎ ಘಟಕ(NIA) ಸ್ಥಾಪಿಸುವುದು ಅತ್ಯಂತ ಅಗತ್ಯವಾಗಿದೆ. ಈ ಹಿಂದೆ ಸಿಎಎ ಪ್ರತಿಭಟನೆ ಹೆಸರಿನಲ್ಲಿ ನಡೆಸಿದ್ದ ಮೂಲಭೂತವಾದಿಗಳ ಮನೆ ಕೂಡ ಕರಾವಳಿಯ ಭದ್ರತೆಗೆ ಎದುರಾದ ಸವಾಲಿಗೆ ಸ್ಪಷ್ಟ ನಿದರ್ಶನ. ಹೀಗಿರುವಾಗ, ಮಂಗಳೂರಿನಲ್ಲಿ ಎನ್‌ಐಎ ಘಟಕ ಸ್ಥಾಪನೆಯಾದರೆ ಈ ಭಾಗದಲ್ಲಿ ಉಗ್ರ ಚಟುವಟಿಕೆಯ ಮೂಲೋತ್ಪಾಟನೆ ಜತೆಗೆ ಕರಾವಳಿಯ ಸುರಕ್ಷತೆ ಹೆಚ್ಚಿಸುವುದಕ್ಕೂ ಅನುಕೂಲವಾಗಲಿದೆ ಎಂದು ಮನವಿಯಲ್ಲಿ ಕ್ಯಾ. ಚೌಟ ತಿಳಿಸಿದ್ದಾರೆ.

ಸೈನಿಕ ಶಾಲೆ ಮತ್ತು ಮಿಲಿಟರಿ ಬೇಸ್ ಸ್ಥಾಪನೆಗೆ ಮನವಿ ಶೈಕ್ಷಣಿಕವಾಗಿ ಮಂಗಳೂರು(Manglore) ವಿಶ್ವದರ್ಜೆ ಮನ್ನಣೆ ಪಡೆದಿರುವ ಹಿನ್ನಲೆಯಲ್ಲಿ ಈ ಭಾಗದಲ್ಲಿ ದೇಶ ಸೇವೆಗೆ ಮುಂದಾಗುವ ಯುವಕರನ್ನು ಪ್ರೋತ್ಸಾಹಿಸುವುದಕ್ಕೆ ಹಾಗೂ ವಿದ್ಯಾರ್ಥಿಗಳಲ್ಲಿ ದೇಶಾಭಿಮಾನ, ಶಿಸ್ತು, ನಾಯಕತ್ವ ಗುಣ ಬೆಳೆಸುವುದಕ್ಕೆ ಸೈನಿಕ ಶಾಲೆ ಸ್ಥಾಪನೆಯಾಗಬೇಕು. ನಮ್ಮ ಕರಾವಳಿ ತೀರದ ರಕ್ಷಣಾ ಸಾಮರ್ಥ್ಯ ಹಾಗೂ ರಾಷ್ಟ್ರೀಯ ಭದ್ರತೆ ಹೆಚ್ಚಿಸುವ ದೃಷ್ಟಿಯಿಂದ ಮಿಲಿಟರಿ ಬೇಸ್ ಮಂಗಳೂರಿನಲ್ಲಿ ಸ್ಥಾಪಿಸಬೇಕು. ಸೈನಿಕ ಶಾಲೆ ಜತೆಗೆ ಮಿಲಿಟರಿ ನೆಲೆಯನ್ನೂ ಸ್ಥಾಪಿಸುವುದರಿಂದ ಕರಾವಳಿ ಭಾಗದ ಸುರಕ್ಷತೆಯ ಜತೆಗೆ ದೇಶದ ರಕ್ಷಣಾ ಮೂಲಸೌಕರ್ಯ ಮತ್ತಷ್ಟು ಬಲಗೊಳಿಸುವುದಕ್ಕೆ ವಿಪುಲ ಅವಕಾಶ-ಅನುಕೂಲತೆಗಳು ದೊರೆಯುತ್ತದೆ ಎಂದು ಚೌಟ ಅಭಿಪ್ರಾಯಪಟ್ಟಿದ್ದಾರೆ.

ಕೇಂದ್ರ ಸರ್ಕಾರವು(Central Government) ಮಂಗಳೂರಿಗೆ 2020ರಲ್ಲಿ ಭಾರತೀಯ ಕೋಸ್ಟ್‌ಗಾರ್ಡ್ ಅಕಾಡೆಮಿ ಮಂಜೂರು ಮಾಡಿದೆ. ಆದರೆ, ನಮ್ಮ ಜಿಲ್ಲೆಗೆ ರಾಷ್ಟ್ರ ಮಟ್ಟದಲ್ಲಿ ಹೆಗ್ಗುರುತಾಗುವ ಈ ಯೋಜನೆ ಕಾರ್ಯರೂಪಕ್ಕೆ ಬರಲು ಕೆಲವು ಅನುಮತಿ ಪ್ರಕ್ರಿಯೆಗಳು ಗೃಹ ಸಚಿವಾಲಯದ ಮುಂದೆ ಬಾಕಿಯಿದೆ. ಹೀಗಾಗಿ ಆದಷ್ಟು ಬೇಗ ಅಕಾಡೆಮಿ ಸ್ಥಾಪನೆಗೆ ಕ್ರಮ ಕೈಗೊಳ್ಳಬೇಕು. 

ಮಂಗಳೂರು  ಭಾಗದಲ್ಲಿರುವ ಸಹಕಾರ ಬ್ಯಾಂಕಿಂಗ್ ವಲಯದ ಅಭಿವೃದ್ಧಿಗೂ ಹೆಚ್ಚಿನ ಒತ್ತು ನೀಡಬೇಕು. ಇದರಿಂದ ಸಣ್ಣ ಉದ್ದಿಮೆದಾರರು ಹಾಗೂ ಕೃಷಿಕರಿಗೆ ಹೆಚ್ಚಿನ ಆರ್ಥಿಕ ನೆರವು ಪಡೆಯುವುದಕ್ಕೆ ಕೋ ಆಪರೇಟಿವ್ ಬ್ಯಾಂಕ್‌ಗಳ ಉತ್ತೇಜನ ಅನುಕೂಲ ಮಾಡಲಿದೆ ಎಂದು ಸಹಕಾರಿ ಸಚಿವರೂ ಆಗಿರುವ ಅಮಿತ್ ಶಾ ಅವರಲ್ಲಿ ಕ್ಯಾ. ಚೌಟ ಮನವಿ ಮಾಡಿದ್ದಾರೆ. ಗೃಹ ಸಚಿವರ ಭೇಟಿ ಬಳಿಕ ಸಕಾರಾತ್ಮಕ ಸ್ಪಂದನೆ ಸಿಕ್ಕಿದೆ ಎನ್ನಲಾಗಿದೆ.

ಇದನ್ನು ಓದಿ : ಹ್ಯಾಟ್ರಿಕ್ ಹೀರೋ ಶಿವಣ್ಣ ಆಸ್ಪತ್ರೆಯಿಂದ ಡಿಸ್ಚಾರ್ಜ್.

ಸರ್ಕಾರದ ದುರಾಡಳಿತ ಖಂಡಿಸಿ ಭಟ್ಕಳದಲ್ಲಿ ಬಿಜೆಪಿ ಪ್ರತಿಭಟನೆ.

ಕೇಕ್ ತಿಂದು 40ಕ್ಕೂ ಹೆಚ್ಚು ಮಕ್ಕಳು ಅಸ್ವಸ್ಥ.

ಗಂಗೊಳ್ಳಿ ಪಂಚಾಯತ್ ನಲ್ಲಿ ಮೌಲ್ವಿಯಿಂದ ದುವಾ, ಅರ್ಚಕರಿಂದ ಗಣಹೋಮ.

ಕಾನಸ್ಟೇಬಲ್ ಒಬ್ಬರನ್ನ ಹನಿಟ್ರ್ಯಾಪ್ ಖೆಡ್ಡಾಕ್ಕೆ ದೂಡಿದ ಐನಾತಿ ಲೇಡಿ.

ಗೀತಾ ಪ್ರಕರಣ. ಕೊಲೆ ಆರೋಪಿಯ ಬಾಡೂಟ ಉಂಡ ದೋಸ್ತರು.