ಇ ಸಮಾಚಾರ ಡಿಜಿಟಲ್ ನ್ಯೂಸ್ (esamachara digital news) ಕಾರವಾರ(Karwar) : ಉತ್ತರ ಕನ್ನಡ ಜಿಲ್ಲೆಯಲ್ಲಿ ಭಾರತೀಯ ಹವಾಮಾನ ಇಲಾಖೆ(Indian Metrology Department) ನಾಳೆ ಆರೆಂಜ್ ಅಲರ್ಟ್(Orange Alert) ಘೋಷಿಸಿರುವ ಹಿನ್ನೆಲೆಯಲ್ಲಿ, ಜಿಲ್ಲೆಯ ಹಲವು ಭಾಗಗಳಲ್ಲಿ ಗಾಳಿಯೊಂದಿಗೆ ಭಾರೀ ಮಳೆಯಾಗುವ(Heavy Rain) ಸಾಧ್ಯತೆ ಇದೆ.

ಮಕ್ಕಳ ಸುರಕ್ಷತೆಯನ್ನು ಗಮನದಲ್ಲಿಟ್ಟುಕೊಂಡು ಜೋಯಿಡಾ(Jioda), ಶಿರಸಿ(Sirsi) ಹಾಗೂ ಸಿದ್ದಾಪುರ(Siddapur) ತಾಲೂಕುಗಳ ಎಲ್ಲಾ ಅಂಗನವಾಡಿ, ಪ್ರಾಥಮಿಕ ಮತ್ತು ಪ್ರೌಢಶಾಲೆಗಳಿಗೆ ನಾಳೆ ರಜೆ ಘೋಷಿಸಲಾಗಿದೆ.

ಈ ಕುರಿತು ಉತ್ತರ ಕನ್ನಡ ಜಿಲ್ಲಾಧಿಕಾರಿ ಕೆ. ಲಕ್ಷ್ಮೀಪ್ರಿಯಾ(Uttarkannada DC K Laksmipriya) ಆದೇಶ ಹೊರಡಿಸಿದ್ದು, ಹವಾಮಾನ ವೈಪರೀತ್ಯದ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕಾ ಕ್ರಮವಾಗಿ ರಜೆ ನೀಡಲಾಗಿದೆ ಎಂದು ತಿಳಿಸಿದ್ದಾರೆ.

ಜಿಲ್ಲಾಡಳಿತ ಸಾರ್ವಜನಿಕರು ಅಗತ್ಯವಿಲ್ಲದಿದ್ದರೆ ಹೊರಗಡೆ ಸಂಚರಿಸುವುದನ್ನು ತಪ್ಪಿಸಿ, ಹವಾಮಾನ ಇಲಾಖೆಯ ಸೂಚನೆಗಳನ್ನು ಪಾಲಿಸುವಂತೆ ಮನವಿ ಮಾಡಿದೆ.