ಇ ಸಮಾಚಾರ ಡಿಜಿಟಲ್ ನ್ಯೂಸ್(esamachara digital news) ನವದೆಹಲಿ (Newdelhi) : ಆಪರೇಷನ್ ಸಿಂಧೂರ(Operation Sindhur) ಕಾರ್ಯಾಚರಣೆ ಬಳಿಕ ಪ್ರಧಾನಿ ನರೇಂದ್ರ ಮೋದಿ(Narendra Modi) ಅವರು ದೇಶವನ್ನುದ್ದೇಶಿಸಿ ಮಾತನಾಡಿದ್ದಾರೆ. ಪಾಕಿಸ್ತಾನದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ ಮೋದಿ, ಪಾಕಿಸ್ತಾನ ಉಗ್ರರನ್ನು(Pakistan terror) ಮಟ್ಟಹಾಕಲು ಭಾರತಕ್ಕೆ ಸಹಕಾರ ಕೊಡುವ ಬದಲು ಭಾರತದ ಮೇಲೆ ಆಕ್ರಮಣ ಮಾಡುವ ಮೂರ್ಖತನ ಪ್ರದರ್ಶನ ಮಾಡಿದೆ ಎಂದು ಅಸಮಾಧಾನಗೊಂಡಿದ್ದಾರೆ.

ಆಪರೇಷನ್ ಸಿಂಧೂರ ಕಾರ್ಯಾಚರಣೆಯಲ್ಲಿ ಪಾಲ್ಗೊಂಡ  ಭಾರತದ ಸೈನ್ಯ(Indian Army), ವಿಜ್ಞಾನಿಗಳನ್ನ ಶ್ಲಾಘಿಸಿದ ಅವರು ಧನ್ಯವಾದ ಸಲ್ಲಿಸಿದರು.  ಭಯೋತ್ಪಾದನೆಯನ್ನು ಭಾರತ ಎಂದಿಗೂ ಸಹಿಸಲ್ಲ.  ಪಹಲ್ಗಾಮ್‌ನಲ್ಲಿ(Pehalgam) ನಡೆದ ಭೀಕರ ಭಯೋತ್ಪಾದಕ ದಾಳಿಯ ನಂತರ ಮೇ 7 ರ ಮುಂಜಾನೆ ಭಾರತವು ಪಾಕಿಸ್ತಾನದ(Pakistan) ಉಗ್ರರ ತಾಣಗಳ ಮೇಲೆ ದಾಳಿಯನ್ನು ಮಾಡಿದೆ ಎಂದು ಉಲ್ಲೇಖಿಸಿದ ಪ್ರಧಾನಿ ಮೋದಿ, ಮುರಿಡ್ಕೆಯಲ್ಲಿರುವ ಲಷ್ಕರ್-ಎ-ತೈಬಾ ಮತ್ತು ಬಹಾವಲ್ಪುರದಲ್ಲಿರುವ ಜೈಶ್-ಎ-ಮೊಹಮ್ಮದ್‌ನ ಪ್ರಧಾನ ಕಚೇರಿ ಸೇರಿದಂತೆ ಪಾಕಿಸ್ತಾನದಲ್ಲಿನ ಪ್ರಮುಖ ಭಯೋತ್ಪಾದಕ ಮೂಲಸೌಕರ್ಯ ನೆಲೆಗಳ ಮೇಲೆ ಭಾರತ ದಾಳಿ ಮಾಡಿದೆ. ಈ ಸ್ಥಳಗಳನ್ನು ಭಯೋತ್ಪಾದನೆಯ ಜಾಗತಿಕ ವಿಶ್ವವಿದ್ಯಾಲಯಗಳು ಎಂದು ಮೋದಿ ಹೇಳಿದ್ದಾರೆ.

ಆಪರೇಷನ್ ಸಿಂಧೂರ ಕಾರ್ಯಾಚರಣೆಯಲ್ಲಿ 100 ಕ್ಕೂ ಹೆಚ್ಚು ಭಯೋತ್ಪಾದಕರು ಸಾವನ್ನಪ್ಪಿದ್ದು ಭಾರತದ ವಿರುದ್ಧ ಪಿತೂರಿ ನಡೆಸುತ್ತಿದ್ದ ಅನೇಕ ಭಯೋತ್ಪಾದಕ ಮುಖ್ಯಸ್ಥರು ಪಾಕಿಸ್ತಾನದಲ್ಲಿ ಸುಮಾರು ಮೂರು ದಶಕಗಳಿಂದ ಮುಕ್ತವಾಗಿ ಸುತ್ತಾಡುತ್ತಿದ್ದರು.  ಭಾರತ ಅವರನ್ನು ಒಂದೇ ಏಟಿನಲ್ಲಿ ಮುಗಿಸಿದೆ ಎಂದು ಮೋದಿ(Modi) ಹೇಳಿದ್ದಾರೆ.

ಪಾಕಿಸ್ತಾನವು(Pakistan) ನಮ್ಮ ಶಾಲೆಗಳು, ಕಾಲೇಜುಗಳು, ಗುರುದ್ವಾರಗಳು, ಮಿಲಿಟರಿ ನೆಲೆಗಳು, ದೇವಾಲಯಗಳು ಮತ್ತು ನಾಗರಿಕರ ಮನೆಗಳನ್ನು ಗುರಿಯಾಗಿಸಿಕೊಂಡು ದಾಳಿ ಮಾಡಿದೆ. ಆದರೆ ಪಾಕಿಸ್ತಾನದ ಡ್ರೋನ್‌ಗಳು ಮತ್ತು ಕ್ಷಿಪಣಿಗಳು ಒಣಹುಲ್ಲಿನಂತೆ ಚದುರಿಹೋಗಿರುವುದನ್ನು ಇಡೀ ಜಗತ್ತು ನೋಡಿದೆ ಎಂದು ಪ್ರಸ್ತಾಪಿಸಿದ ಮೋದಿ,  ಭಾರತದ ವಾಯು ರಕ್ಷಣಾ ವ್ಯವಸ್ಥೆಯು ಅವುಗಳನ್ನು ಆಕಾಶದಲ್ಲಿ ನಾಶಪಡಿಸಿತು. ಪಾಕಿಸ್ತಾನ ತನ್ನ ಗಡಿಯಲ್ಲಿ ಭಾರತದ ಮೇಲೆ ದಾಳಿ ಮಾಡಲು ಸಿದ್ಧವಾಗಿತ್ತು, ಆದರೆ ಭಾರತ ಪಾಕಿಸ್ತಾನದ ಹೃದಯ ಭಾಗದ ಮೇಲೆ ದಾಳಿ ಮಾಡಿದೆ. ಭಾರತದ ಕ್ಷಿಪಣಿಗಳು ಮತ್ತು ಡ್ರೋನ್‌ಗಳು ಪಾಕಿಸ್ತಾನವು ಹೆಮ್ಮೆಪಡುವ ವಾಯುನೆಲೆಗಳಿಗೆ ಹಾನಿ ಮಾಡಿವೆ ಎಂದರು.

ಆಪರೇಷನ್ ಸಿಂಧೂರ್‌ಗೆ(Operation Sindur) ವಿರಾಮ ನೀಡಲಾಗಿದೆ, ಆದ್ರೆ ಮುಕ್ತಾಯಗೊಳಿಸಿಲ್ಲ ಎಂದು ಮೋದಿ ಹೇಳಿದ್ದಾರೆ. ಮುಂದಿನ ದಿನಗಳಲ್ಲಿ ಪಾಕಿಸ್ತಾನ ಯಾವ ರೀತಿ ವರ್ತನೆ ತೋರುತ್ತದೆ ಅದಕ್ಕೆ ತಕ್ಕ ಪ್ರತಿಕ್ರಿಯೆ ನಮ್ಮಿಂದ ಪಡೆಯುತ್ತದೆ ಎನ್ನುವ ಮೂಲಕ ಪ್ರಧಾನಿ, ಆಪರೇಷನ್‌ ಸಿಂಧೂರ 3.0 ಎಚ್ಚರಿಕೆ ನೀಡಿದ್ದಾರೆ.

ಪಾಕಿಸ್ತಾನದ ಪರಮಾಣು ಬೆದರಿಕೆಯನ್ನು ಭಾರತ ಸಹಿಸಲ್ಲ. ಪಾಕಿಸ್ತಾನ ವಿರುದ್ಧದ ಸೇನಾ ಕಾರ್ಯಾಚರಣೆ ಸ್ಥಗಿತಗೊಳಿಸಲಾಗಿದೆ. ಭವಿಷ್ಯದಲ್ಲಿ ಪಾಕ್ ನಡವಳಿಕೆಯ ಮೇಲೆ ನಮ್ಮ ನಡೆ ನಿರ್ಧಾರವಾಗುತ್ತದೆ ಎಂದು ಮೋದಿ ಎಚ್ಚರಿಸಿದ್ದಾರೆ.

ಪಾಕಿಸ್ತಾನವು ಸೇನಾ ಕಾರ್ಯಾಚರಣೆಯನ್ನು ನಿಲ್ಲಿಸುವಂತೆ ಭಾರತವನ್ನು ಬೇಡಿಕೊಂಡ ಬಳಿಕವಷ್ಟೇ ಕಾರ್ಯಾಚರಣೆಯನ್ನು ಸ್ಥಗಿತಗೊಳಿಸಲಾಗಿದೆ. ಮುಂದೆ ಕಾಲು ಕೆರೆದು ಬಂದರೆ ನಾವು ಸುಮ್ಮನಿರಲ್ಲ ಎಂದು ಪ್ರಧಾನಿ ಮೋದಿ ಎಚ್ಚರಿಸಿದ್ದಾರೆ.

ಇದನ್ನು ಓದಿ: ಟೆಸ್ಟ್ ಕ್ರಿಕೆಟ್ ಗೆ ವಿರಾಟ್ ಕೊಹ್ಲಿ ಗುಡ್ ಬಾಯ್.