ಇ ಸಮಾಚಾರ ಡಿಜಿಟಲ್ ನ್ಯೂಸ್ (esamachara digital news) ಬೆಂಗಳೂರು(Bangalore) : ಪ್ರಧಾನಮಂತ್ರಿ (Prime Minister) ನರೇಂದ್ರ ಮೋದಿ (Narendra Modi) ಅವರು ಇಂದು ರಾಜ್ಯ ರಾಜಧಾನಿ ಬೆಂಗಳೂರಿಗೆ ಭೇಟಿ ನೀಡಿದರು. ಇಲ್ಲಿನ ಹಳದಿ ಮೆಟ್ರೋ ಮಾರ್ಗವನ್ನು ಉದ್ಘಾಟಿಸಿದ ಬಳಿಕ ಅವರು ಮೂರು ವಂದೇ ಭಾರತ್ ರೈಲುಗಳಿಗೆ(Vande Bharat Train) ಚಾಲನೆ ನೀಡಿದರು.
ಈ ಸಂದರ್ಭದಲ್ಲಿ ಮೆಟ್ರೋ(Metro) ಮೂರನೇ ಹಂತದ ಯೋಜನೆಗೆ ಶಂಕುಸ್ಥಾಪನೆಯನ್ನ ಮೋದಿ ನೆರವೇರಿಸಿದರು. ಆಪರೇಶನ್ ಸಿಂಧೂರ್(Operation Sindoor) ಬಳಿಕ ಮೊದಲ ಬಾರಿಗೆ ಪ್ರಧಾನಿ ಮೋದಿ(PM Modi) ಅವರ ಭೇಟಿ ವಿಶೇಚವಾಗಿತ್ತು. ಭೇಟಿ ಹಿನ್ನಲೆಯಲ್ಲಿ ಬೆಂಗಳೂರು ನಗರದ ಕೆಲವೆಡೆ ಕೇಸರಿಮಯವಾಗಿತ್ತು.
ಬೆಂಗಳೂರಿಗೆ ಆಗಮಿಸಿದ ಅವರನ್ನು ಬಿಜೆಪಿ ವಿಪಕ್ಷ ನಾಯಕ ಆರ್ ಅಶೋಕ್, ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ, ಸಿಎಂ ಸಿದ್ದರಾಮಯ್ಯ ಸೇರಿ ಹಲವರು ಸ್ವಾಗತಿಸಿದರು.
ನೆಚ್ಚಿನ ನಾಯಕನನ್ನು ನೋಡಲು ಬೆಂಗಳೂರಿನ ರಸ್ತೆಯ ಇಕ್ಕೆಲಗಳಲ್ಲಿ ಜನಸಾಗರವೇ ನೆರೆದಿತ್ತು. ಬೆಂಗಳೂರಿನ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ(Sangolli Rayanna) ರೈಲು ನಿಲ್ದಾಣದಲ್ಲಿ ಪ್ರಧಾನಿ ಮೋದಿ ಮೂರು ವಂದೇ ಭಾರತ್ ರೈಲಿಗೆ ಚಾಲನೆ ನೀಡಿದರು.
ಬಳಿಕ ಬೆಂಗಳೂರಿಗರ ಸಂಚಾರ ಜೀವನಾಡಿ ನಮ್ಮ ಮೆಟ್ರೋ ಯೋಜನೆಯ ಹಳದಿ ಮಾರ್ಗವನ್ನು ಪ್ರಧಾನಿ ಮೋದಿ ಲೋಕಾರ್ಪಣೆಗೊಳಿಸಿದರು. ಈ ವೇಳೆ ಮುಖ್ಯಮಂತ್ರಿ ಸಿದ್ದರಾಮಯ್ಯ(Siddaramaiha), ಡಿಸಿಎಂ ಡಿ ಕೆ ಶಿವಕುಮಾರ್(D K Shivakumar) ಜೊತೆಗಿದ್ದರು.
ಪ್ರಧಾನಿ ಮೋದಿ(PM Modi) ಮತ್ತು ಸಿಎಂ ಸಿದ್ದರಾಮಯ್ಯ ಅಕ್ಕಪಕ್ಕದಲ್ಲಿಯೇ ಕುಳಿತು ಆರ್.ವಿ. ರೋಡ್ನಿಂದ ಬೊಮ್ಮಸಂದ್ರವರೆಗಿನ ನಮ್ಮ ಮೆಟ್ರೋ ಹಳದಿ ಮಾರ್ಗದಲ್ಲಿ ಸಂಚಾರ ಮಾಡಿರುವುದು ವಿಶೇಷವಾಗಿತ್ತು. ಎಲೆಕ್ಟ್ರಾನಿಕ್ ಸಿಟಿಯ(Electronic City) ಐಐಐಟಿ ಆಡಿಟೋರಿಯಂನಲ್ಲಿ ನಮ್ಮ ಮೆಟ್ರೋ 3ನೇ ಹಂತದ ಯೋಜನೆಗೆ ಪ್ರಧಾನಿ ಮೋದಿ ಶಂಕುಸ್ಥಾಪನೆ ನೆರವೇರಿಸಿದರು. ಈ ಸಂದರ್ಭದಲ್ಲಿ ಮೋದಿ ಅವರಿಗೆ ಸಿಎಂ ಸಿದ್ದರಾಮಯ್ಯ ಪಂಚಮುಖಿ ಗಣೇಶ ಮೂರ್ತಿ ನೀಡಿ ಗೌರವಿಸಿದರು.
ಬೆಂಗಳೂರುಕೊಂಡಾಡಿದಪ್ರಧಾನಿಮೋದಿ : ಆಪರೇಷನ್ ಸಿಂಧೂರದ ಸಫಲತೆ ಹಿಂದೆ ಮೇಕ್ ಇನ್ ಇಂಡಿಯಾದ(Make In India) ಶಕ್ತಿ ಇದೆ ಎಂದು ಹೊಗಳಿದ ಮೋದಿ ಬೆಂಗಳೂರು ಹಾಗೂ ಇಲ್ಲಿನ ಯುವ ತಂತ್ರಜ್ಞರ ಯೋಗದಾನವೂ ಇದೆ ಎಂದು ಹೇಳಿದರು. ಜಗತ್ತಿನ ಮೂರನೇ ದೊಡ್ಡ ಮೆಟ್ರೋ ಸಂಪರ್ಕ ಇರೋ ದೇಶ ಭಾರತ. 2014 ವರೆಗೆ 74 ಏರ್‌ಪೋರ್ಟ್‌ಗಳಿದ್ದವು, ಈಗ 160 ಇವೆ ಎಂದು ತಿಳಿಸಿದ ಅವರು, ಬೆಂಗಳೂರು ನ್ಯೂ ಇಂಡಿಯಾದ ಪ್ರಗತಿಯ ಸಂಕೇತವಾಗಿದೆ. ಈ ನಗರ ಗ್ಲೋಬಲ್ ಐಟಿಯಲ್ಲಿ ಭಾರತದ ಕೀರ್ತಿ ಪತಾಕೆ ಹಾರಿಸಿದೆ ಎಂದರು.
ಬೆಂಗಳೂರು ಯಶಸ್ಸಿಗೆ ಇಲ್ಲಿನ ಜನರ ಶ್ರಮ, ಪ್ರತಿಭೆ ಕಾರಣವಾಗಿದೆ. ಬೆಂಗಳೂರಿನಂಥ ನಗರಗಳನ್ನು ಭವಿಷ್ಯಕ್ಕಾಗಿ ರೂಪಿಸಬೇಕು. ಅದಕ್ಕಾಗಿ ಕೇಂದ್ರದ ಅನುದಾನ ಹರಿದು ಬರುತ್ತಿದೆ ಎಂದು ಹೇಳಿದರು.
ಮೋದಿ-ಡಿಕೆಶಿಗುಸುಗುಸುಚರ್ಚೆ: ಮೋದಿಬೆಂಗಳೂರು ಭೇಟಿ ಸಂದರ್ಭದಲ್ಲಿ ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಮುಂಚೂಣಿಯಲ್ಲಿದ್ದು ಚರ್ಚೆಗೆ ಕಾರಣವಾಗಿದೆ. ಅಲ್ಲದೇ ಕೆಲವು ಪತ್ರಗಳನ್ನ ಮೋದಿ ಅವರಿಗೆ ನೀಡಿ ಬಳಿಕ ಪ್ರತ್ಯೇಕವಾಗಿರುವ ಕಾಣಿಕೆಯೊಂದನ್ನ ನೀಡಿ ಗೌರವಿಸಿದರು. ಮೋದಿಯವರ ಇಂದಿನ ಭೇಟಿ ರಾಜಕೀಯ ಪಡಸಾಲೆಯಲ್ಲಿ ಚರ್ಚೆ ಶುರುವಾಗಿದೆ.
ಇದನ್ನು ಓದಿ : ಟೈಲ್ಸ್ ಕೆಲಸಕ್ಕೆ ಬಂದವರು ಮಾರುಕೇರಿಯಲ್ಲಿ ಅಡಿಕೆ ಕದ್ದರು.
ಪತ್ರಕರ್ತ ಸಂದೀಪ್ ಸಾಗರ್, ಭರತ್ ರಾಜ್, ದಿಲೀಪ್ ಗೆ 2025ರ ಟ್ಯಾಗೋರ್ ಪ್ರಶಸ್ತಿ.