ಇ ಸಮಾಚಾರ ಡಿಜಿಟಲ್ ನ್ಯೂಸ್ (esamachara digital news)ನವದೆಹಲಿ (Newdelhi): ಜಮ್ಮು ಮತ್ತು ಕಾಶ್ಮೀರದ(Jammukashmir) ಪಹಲ್ಗಾಮ್‌ನಲ್ಲಿ (Pahalgam) ನಾಗರಿಕರ ಮೇಲಿನ ಉಗ್ರ ದಾಳಿಯನ್ನು ಪ್ರಧಾನಿ ನರೇಂದ್ರ ಮೋದಿ ತೀವ್ರವಾಗಿ ಖಂಡಿಸಿದ್ದಾರೆ.

ಸಮ್ಮರ್ ಹಾಲಿಡೇ ವೇಳೆ ಈ ರೀತಿಯಾಗಿ ಬೈಸರನ್ ಕಣಿವೆಯ ಪ್ರವಾಸಿ ತಾಣದಲ್ಲಿ ಪ್ರಾಕೃತಿಕ ಸೌಂದರ್ಯವನ್ನು ಆನಂದಿಸುತ್ತಿದ್ದ ಪ್ರವಾಸಿಗರ ಮೇಲೆ ಭಯೋತ್ಪಾದಕರು ದಾಳಿ (Terror Attack) ಮಾಡಿದ್ದಕ್ಕೆ ನ್ಯಾಯ ಒದಗಿಸುವುದಾಗಿ ಮೋದಿ ಪ್ರತಿಜ್ಞೆ ಮಾಡಿದ್ದಾರೆ. ಘಟನೆ ಬಗ್ಗೆ ಟ್ವೀಟ್ ಮಾಡಿರುವ ಅವರು, “ಈ ಹೀನ ಕೃತ್ಯದ ಹಿಂದಿರುವವರನ್ನು ಯಾವುದೇ ಕಾರಣಕ್ಕೂ ಬಿಡುವುದಿಲ್ಲ, ಅವರ ದುಷ್ಟ ಉದ್ದೇಶ ಎಂದಿಗೂ ಯಶಸ್ವಿಯಾಗುವುದಿಲ್ಲ” ಎಂದು ಹೇಳಿದ್ದಾರೆ.

ಭಯೋತ್ಪಾದನೆಯ ವಿರುದ್ಧ ಹೋರಾಡುವ ನಮ್ಮ ಸಂಕಲ್ಪ ಅಚಲವಾಗಿದ್ದು ಮತ್ತು ಅದು ಇನ್ನಷ್ಟು ಬಲಗೊಳ್ಳುತ್ತದೆ ಎಂದು ಮೋದಿ ಗುಡುಗಿದ್ದಾರೆ.

ಸೌದಿಅರೇಬಿಯಾಪ್ರವಾಸಮೊಟಕು: ಜಮ್ಮು ಮತ್ತು ಕಾಶ್ಮೀರದ(Jammu kashmir) ಪಹಲ್ಗಾಮ್ ನಲ್ಲಿ(Pahalgam) ಪ್ರವಾಸಿಗರ ಮೇಲೆ ಮಂಗಳವಾರ ನಡೆದ ಭೀಕರ ಭಯೋತ್ಪಾದಕ ದಾಳಿಯ ನಂತರ ಪ್ರಧಾನಿ ನರೇಂದ್ರ ಮೋದಿ(Narendra Modi) ಅವರು ಸೌದಿ ಅರೇಬಿಯಾ (Soudi Arebia) ಭೇಟಿಯನ್ನು ಕ್ಯಾನ್ಸಲ್ ಮಾಡಿ ಭಾರತಕ್ಕೆ ವಾಪಸ್​ ಆಗಿದ್ದಾರೆ.

ಎರಡು ದಿನಗಳ ಭೇಟಿಗಾಗಿ ಮಂಗಳವಾರ ಬೆಳಿಗ್ಗೆ ಅವರು ಸೌದಿಗೆ ಪ್ರಯಾಣಿಸಿದ್ದರು. ಜೆಡ್ಡಾದಲ್ಲಿ ಸೌದಿಯ ರಾಜಕುಮಾರ ಮೊಹಮ್ಮದ್ ಬಿನ್ ಸಲ್ಮಾನ್ ಅವರೊಂದಿಗೆ ದ್ವಿಪಕ್ಷೀಯ ಮಾತುಕತೆ ನಡೆಸಿದ್ದರು. ಅದಾದ ಬಳಿಕ ಉಗ್ರ ದಾಳಿ ತಿಳಿದು, ಆಯೋಜಿಸಲಾಗಿದ್ದ ಅಧಿಕೃತ ಭೋಜನಕೂಟವನ್ನು ರದ್ದುಗೊಳಿಸಿ ಭಾರತಕ್ಕೆ ವಿಶೇಷ ವಿಮಾನದಲ್ಲಿ ಆಗಮಿಸುತ್ತಿದ್ದಾರೆ.

ನಿನ್ನೆ ಮಧ್ಯಾಹ್ನ ಜೆಡ್ಡಾಗೆ ಆಗಮಿಸಿದಾಗಲೇ ಪ್ರಧಾನಿಗೆ ಕಾಶ್ಮೀರದಲ್ಲಿ ನಡೆದ ಉಗ್ರ ದಾಳಿಯ ಬಗ್ಗೆ ಮಾಹಿತಿ ಲಭಿಸಿತ್ತು. ಅಲ್ಲಿಂದಲೇ ಮೇಲ್ವಿಚಾರಣೆ ನಡೆಸಿದ ಅವರು, ಸೌದಿ ರಾಜಕುಮಾರನ ಜೊತೆ ಸಂಜೆ ನಿಗದಿಯಾಗಿದ್ದ ಸಭೆಯನ್ನು ಎರಡು ಗಂಟೆಗಳ ಕಾಲ ಮುಂಡೂಡಿದ್ದರು.

ಜೆಡ್ಡಾದಲ್ಲಿನ ಹೋಟೆಲ್‌ನಲ್ಲಿ ಪ್ರಧಾನಿ ಮೋದಿ ಅವರು ತುರ್ತು ಆಂತರಿಕ ಸಭೆ ನಡೆಸಿದರು. ಇದರಲ್ಲಿ ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್ ದೋವಲ್ ಮತ್ತು ಇತರ ಹಿರಿಯ ಅಧಿಕಾರಿಗಳು ಭಾಗವಹಿಸಿದ್ದರು.

ಕಾಶ್ಮೀರ ಉಗ್ರ ದಾಳಿ ಕುರಿತು ಇಂದು  ದೆಹಲಿಯಲ್ಲಿ ನಡೆಯಲಿರುವ ಭದ್ರತೆ (Security) ಕುರಿತ ಸಂಪುಟ ಸಭೆಯ ಅಧ್ಯಕ್ಷತೆಯನ್ನು ಅವರು ವಹಿಸುವ ನಿರೀಕ್ಷೆಯಿದೆ ಎಂದು ಮೂಲಗಳು ತಿಳಿಸಿವೆ.

‘ಮಿನಿ ಸ್ವಿಟ್ಜರ್​ ಲ್ಯಾಂಡ್​’ ಎಂದೇ ಪ್ರಸಿದ್ಧವಾಗಿರುವ ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್ ಪಟ್ಟಣದ ಹುಲ್ಲುಗಾವಲು ಪ್ರದೇಶದಲ್ಲಿ ಭಯೋತ್ಪಾದಕರು ಕಂಡ ಕಂಡ ಪ್ರವಾಸಿಗರ ಮೇಲೆ ಗುಂಡು ಹಾರಿಸಿ 27 ಮಂದಿಯನ್ನು ಹತ್ಯೆ ಮಾಡಿದ್ದಾರೆ. ಇದರಲ್ಲಿ ಇಬ್ಬರು ಕನ್ನಡಿಗರು, ನೌಕಾಪಡೆ, ಗುಪ್ತಚರ ದಳ ಅಧಿಕಾರಿ ಸಾವನ್ನಪ್ಪಿದ್ದಾರೆ. 2019 ರಲ್ಲಿ ಪುಲ್ವಾಮಾ ದಾಳಿಯ ನಂತರದ ಅತ್ಯಂತ ಭೀಕರ ದಾಳಿ ಇದಾಗಿದೆ.

ಪಾಕಿಸ್ತಾನ ಮೂಲದ ಲಷ್ಕರ್-ಎ-ತೊಯ್ಬಾ (ಎಲ್‌ಇಟಿ) ಭಯೋತ್ಪಾದಕ ಸಂಘಟನೆಯ ಜೊತೆ ಗುರುತಿಸಿಕೊಂಡಿರುವ ದಿ ರೆಸಿಸ್ಟೆನ್ಸ್ ಫ್ರಂಟ್ (ಟಿಆರ್‌ಎಫ್) ಈ ದಾಳಿಯ ಹೊಣೆ ಹೊತ್ತಿದೆ.

ಇದನ್ನು ಓದಿ : ಜಮ್ಮು ಕಾಶ್ಮೀರದಲ್ಲಿ ಟೆರರ್ ಅಟ್ಯಾಕ್. 27 ಪ್ರವಾಸಿಗರ ಸಾವು.

ಮಾಜಾಳಿ ಬಳಿ ಪೈರಿಂಗ್. ಆರೋಪಿಗೆ ತಕ್ಕ ಉತ್ತರ ನೀಡಿದ ಪೊಲೀಸರು. ಘಟನೆಯಲ್ಲಿ ಮೂವರು ಪೊಲೀಸರಿಗೆ ಗಾಯ.

ಹೊನ್ನಾವರದಲ್ಲಿ ಭೀಕರ ಅಪಘಾತ. ಇಬ್ಬರ ದುರ್ಮರಣ. ಹಲವರಿಗೆ ಗಾಯ.

ಕಾರವಾರದ ಸತೀಶ್ ಹತ್ಯೆ. ಪೊಲೀಸ್ ವಶದಲ್ಲಿ ಪ್ರಮುಖ ಆರೋಪಿ.