ಇ ಸಮಾಚಾರ ಡಿಜಿಟಲ್ ನ್ಯೂಸ್ (esamachara digital news)ಹುಬ್ಬಳ್ಳಿ(Hubballi):  ಐದು ವರ್ಷದ ಬಾಲಕಿಯನ್ನು ಅಪಹರಿಸಿ ಅತ್ಯಾ*ರ, ಕೊಲೆ ಮಾಡಿದ್ದ ಬಿಹಾರ ಮೂಲದ ಆರೋಪಿ ಪೊಲೀಸರ ಎನ್ಕೌಂಟರ್ ಗೆ (Police Encounter) ಬಲಿಯಾಗಿದ್ದಾನೆ.

ಬಿಹಾರ್ ಮೂಲದ(Bihar Native) ರಿತೇಶಕುಮಾರ್(36) ಸಾವನ್ನಪ್ಪಿದ ಹಂತಕ. ಬಾಲಕಿಯ ಕೊಲೆ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ ಹುಬ್ಬಳ್ಳಿ ಪೊಲೀಸರು(Hubballi Police) ಸಿಸಿಟಿವಿ ದೃಶ್ಯಾವಳಿಗಳನ್ನು ಆಧರಿಸಿ ಆರೋಪಿಯ ಪತ್ತೆಗಾಗಿ ಹಲವು ಟೀಮ್ ಗಳನ್ನ ಮಾಡಿದ್ದರು. ಇನ್ನು ತನಿಖೆಗೆ ಇಳಿದ ಪೊಲೀಸರಿಗೆ ಆರೋಪಿ ರಿತೇಶ್ ಕುಮಾರ್ ಇರುವ ಜಾಗ ಪತ್ತೆಯಾಗಿತ್ತು. ಈ ವೇಳೆ ಪೊಲೀಸರು ಆರೋಪಿಯನ್ನು ಬಂಧಿಸಲು ಮುಂದಾದರು. ಆದರೆ ಪೊಲೀಸರ ಮೇಲೆ ರಿತೇಶ್ ಕುಮಾರ್ ಹಲ್ಲೆಗೆ ಯತ್ನಿಸಿದ್ದು ಆತ್ಮರಕ್ಷಣೆಗಾಗಿ ಪೊಲೀಸರು ಮೊದಲು ಏರ್ ಪೈರ್ ಮಾಡಿದರು.  ಆರೋಪಿ ಸ್ಪಂದಿಸದೆ ಪ್ರತಿಯಾಗಿ ನಿಂತಾಗ ಗುಂಡು ಹಾರಿಸಬೇಕಾಯಿತು. ಪೊಲೀಸರು ಹಾರಿಸಿದ ಗುಂಡುಗಳು ಆರೋಪಿಯ ಕಾಲು ಮತ್ತು ಎದೆಯ ಭಾಗಕ್ಕೆ ನುಗ್ಗಿದ್ದರಿಂದ ಅಲ್ಲೆ ಕುಸಿದುಬಿದ್ದನು. ಆರೋಪಿಯನ್ನು ತಕ್ಷಣ  ಜಿಲ್ಲಾಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲು ಮುಂದಾದರು. ಆದರೆ ಆತ ಮೃತಪಟ್ಟಿರುವುದಾಗಿ ವೈದ್ಯರು ಘೋಷಿಸಿದರು.

ಬಾಲಕಿಯ ತಂದೆ ಪೇಂಟಿಂಗ್ ಕೆಲಸಕ್ಕೆ ಹೋಗಿದ್ದರು.  ತಾಯಿ ಮನೆಯೊಳಗೆ ಕೆಲಸ ಮಾಡುತ್ತಿದ್ದು ಹೊರಗೆ ಆಟವಾಡುತ್ತಿದ್ದ ಮಗುವಿಗೆ  ಚಾಕಲೇಟ್ ಕೊಡುವ ಆಸೆ ತೋರಿಸಿ ಆರೋಪಿ ಅಪಹರಿಸಿದ್ದ. ಆರೋಪಿಯ ಚಲನವಲನಗಳು ಸಿಸಿಟಿವಿಯಲ್ಲಿ ಸೆರೆಯಾಗಿತ್ತು. ಮಗಳು ಕಾಣೆಯಾಗಿದ್ದಾಳೆಂದು ತಾಯಿಗೆ ತಿಳಿದಾಗ, ಆಕೆ ಸ್ಥಳೀಯರೊಂದಿಗೆ ಸೇರಿ ಆಕೆಗಾಗಿ ಹುಡುಕಾಟ ಆರಂಭಿಸಿದರು. ಬಾಲಕಿಯ ಪೋಷಕರು ಕೊಪ್ಪಳದವರಾಗಿದ್ದು, ಪೇಂಟಿಂಗ್ ಕೆಲಸಕ್ಕಾಗಿ ಹುಬ್ಬಳ್ಳಿಗೆ ಬಂದಿದ್ದರು ಸ್ಥಳೀಯರ ಪ್ರಕಾರ, ನಿರ್ಮಾಣ ಹಂತದ ಕಟ್ಟಡದ ಬಳಕೆಯಾಗದ ಶೌಚಾಲಯದಲ್ಲಿ ಬಾಲಕಿಯ ಶವ ಪತ್ತೆಯಾಗಿತ್ತು

ಶವ ಪತ್ತೆಯಾದ ಸುದ್ದಿ ಕೇಳಿದ ಸ್ಥಳೀಯರು  ಅಶೋಕ್ ನಗರ ಪೊಲೀಸ್ ಠಾಣೆಯ ಮುಂದೆ ಬೃಹತ್ ಪ್ರತಿಭಟನೆ ನಡೆಸಿದರು. ನಗರ ಪೊಲೀಸ್ ಆಯುಕ್ತ ಎನ್. ಶಶಿ ಕುಮಾರ್ ಸೇರಿದಂತೆ ಹಿರಿಯ ಪೊಲೀಸ್ ಅಧಿಕಾರಿಗಳು ಠಾಣೆಗೆ ಭೇಟಿ ನೀಡಿ ಪ್ರತಿಭಟನಾ ನಿರತ ಜನರನ್ನು ಸಮಾಧಾನಪಡಿಸಲು ಪ್ರಯತ್ನಿಸಿದರು. ಇನ್ನು ಸಿಸಿಟಿವಿ ದೃಶ್ಯಾವಳಿಗಳ ಮೂಲಕ ಸ್ಥಳೀಯರು ಆರೋಪಿಯನ್ನು ಗುರುತಿಸಿದ್ದರು. ಇದರ ಆಧಾರದ ಮೇಲೆ ಪೊಲೀಸರು ಕಾರ್ಯಾಚರಣೆಗೆ ಇಳಿದ್ದರು.

ಈ ವೇಳೆ ಹುಬ್ಬಳ್ಳಿ ಕಿಮ್ಸ್ ಮುಂಭಾಗದಲ್ಲಿ ಮಾತನಾಡಿದ ಪೊಲೀಸ್ ಆಯುಕ್ತ ಎನ್ ಶಶಿಕುಮಾರ್, ಬಿಹಾರದ ಪಾಟ್ನಾ ನಿವಾಸಿ ರಿತೇಶ್ ಕುಮಾರ್ (35) ಎರಡ್ಮೂರು ತಿಂಗಳ ಹಿಂದೆ ಬಂದಿದ್ದ. ತಾರಿಹಾಳ ಸೇತುವೆ ಬಳಿಯಿರೋ ಮನೆಯಲ್ಲಿ ವಾಸವಾಗಿದ್ದ ಬಗ್ಗೆ ಮಾಹಿತಿ ಲಭಿಸಿದೆ. ಮಾಹಿತಿ ಪರಿಶೀಲಿಸಲು ಹೋದಾಗ ಪೊಲೀಸರ ಮೇಲೆ ಕಲ್ಲು ತೂರಿ ಪರಾರಿ ಯತ್ನಿಸಿದ್ದಾನೆ. ಮಹಿಳಾ ಪಿಎಸ್ ಐ ಅನ್ನಪೂರ್ಣ ಏರ್ ಪೈರ್ ಮಾಡಿದ್ದಾಳೆ. ಆದ್ರು ಕೇಳದೆ ಇದ್ದಾಗ ಆತನ ಕಾಲಿಗೆ ಮತ್ತು ಬೆನ್ನಿಗೆ ಗುಂಡು ತಗುಲಿದೆ. ಆತನ ಜೀವ ಉಳಿಸಲು ಕಿಮ್ಸ್ ಗೆ ರವಾನೆ ಮಾಡಲಾಗಿತ್ತು. ಘಟನೆಯಲ್ಲಿ ಮೂವರು ಪೊಲೀಸ್ ಸಿಬ್ಬಂದಿ ಗಾಯಗೊಂಡಿದ್ದಾರೆ ಎಂದು ಹೇಳಿದ್ದಾರೆ.

ಮೃತ ಬಾಲಕಿ ಕುಟುಂಬಕ್ಕೆ ರಾಜ್ಯ ಸರ್ಕಾರದಿಂದ 10 ಲಕ್ಷ ರೂ ಪರಿಹಾರ ಘೋಷಣೆ ಮಾಡಲಾಗಿದೆ ಎಂದು ವಿಧಾನ‌ ಪರಿಷತ್ ಮುಖ್ಯ ಸಚೇತಕ ಸಲೀಂ‌ ಅಹ್ಮದ್ ಹೇಳಿದ್ದಾರೆ.

ಸಿಎಂ ನಿರ್ದೇಶನದ‌ ಮೇರೆಗೆ ಹತ್ತು ಲಕ್ಷ ರೂಪಾಯಿ ಪರಿಹಾರ ಘೋಷಣೆ ಮಾಡಲಾಗಿದೆ.  ಜೊತೆಗೆ ಸ್ಲಂ ಬೋರ್ಡ್ ನಿಂದ ಒಂದು ಮನೆ ಹಸ್ತಾಂತರಕ್ಕೆ ನಿರ್ಧರಿಸಲಾಗಿದೆ ಎಂದು ಹೇಳಿದ್ದಾರೆ.
ಇದನ್ನು ಓದಿ : ವಿದ್ಯುತ್ ಶಾಕ್ ತಗುಲಿ ವ್ಯಕ್ತಿ ಸಾವು

ಗರಿಗೆದರಿದ ಕರಾವಳಿ ಉತ್ಸವ. ಸಚಿವರಿಂದ 5 ಕೋಟಿ ರೂ. ಘೋಷಣೆ