ಇ ಸಮಾಚಾರ ಡಿಜಿಟಲ್ ನ್ಯೂಸ್ (esamachara digital news) ಬೆಂಗಳೂರು (Bangalore):ಆರ್ಸಿಬಿ ವಿಜಯೋತ್ಸವ(RCB Celebration) ಸಂದರ್ಭದಲ್ಲಿ ಆದ ಕಾಲ್ತುಳಿತ ಪ್ರಕರಣಕ್ಕೆ ಸಂಬಂಧಿಸಿ ಕಬ್ಬನ್ ಪಾರ್ಕ್ ಪೊಲೀಸ್ ಠಾಣೆಯಲ್ಲಿ(Cubbon Park Police Station) ಎಫ್ ಐ ಆರ್ ದಾಖಲಾಗಿದೆ. ಆರ್ಸಿಬಿ, ಕರ್ನಾಟಕ ರಾಜ್ಯ ಕ್ರಿಕೆಟ್ ಅಸೋಸಿಯೇಷನ್, ಹಾಗೂ ಇವೆಂಟ್ ಆಯೋಜಿಸಿದ್ದ ಡಿಎನ್ ಎ ಕಂಪನಿ(DNA Company) ವಿರುದ್ಧ ಪ್ರಕರಣ ದಾಖಲಾಗಿರುವ ಹಿನ್ನೆಲೆಯಲ್ಲಿ ಪೊಲೀಸರು ದಾಳಿ ನಡೆಸಿದ್ದಾರೆ. ಈ ವೇಳೆ ಹಲವರು ನಾಪತ್ತೆಯಾಗಿದ್ದಾರೆ.
ಪ್ರಕರಣದಲ್ಲಿ ನಾಲ್ವರು ಆಯೋಜಕರನ್ನು ಪೊಲೀಸರು ಬಂಧಿಸಿದ್ದಾರೆ. ಸಿಬ್ಬಂದಿ ನಿಖಿಲ್ ಸೋಸಲೆ, ಸುನೀಲ್ ಮ್ಯಾಥ್ಯೂ, ಕಿರಣ್, ಸುಮಂತ್ ಸೇರಿದಂತೆ ಬಂಧಿತರಾಗಿದ್ದಾರೆ.
ಕೆಎಸ್ ಸಿಎ(KSCA) ಕಾರ್ಯದರ್ಶಿ ಶಂಕರ್, ಖಜಾಂಚಿ ಜಯರಾಮ್, ಡಿಎನ್ ಎ ಮುಖ್ಯಸ್ಥ ವೆಂಕಟ್ ವರ್ಧನ್, ಆರ್ ಸಿಬಿ(RCB) ಮುಖ್ಯಸ್ಥ ರಾಜೇಶ್ ಮನೆ ಮೇಲೆ ಪೊಲೀಸರು ದಾಳಿ ನಡೆಸಿದ್ದು ಪರಿಶೀಲನೆ ನಡೆಸಿದ್ದಾರೆ. ಪೊಲೀಸರು ದಾಳಿ ನಡೆಸುತ್ತಿದ್ದಂತೆ ತಲೆಮರೆಸಿಕೊಂಡಿದ್ದಾರೆಂದು ಗೊತ್ತಾಗಿದೆ.
ಇನ್ನೂ ಬಂಧಿತರಾದವರನ್ನು ಕಬ್ಬನ್ ಪಾರ್ಕ್ ಪೊಲೀಸರು ತೀವ್ರ ವಿಚಾರಣೆ ನಡೆಸಿದ್ದಾರೆ. ವಿಜಯೋತ್ಸವದ ವೇಳೆ ಚಿನ್ನಸ್ವಾಮಿ ಸ್ಟೇಡಿಯಂ ಬಳಿ ಉಂಟಾದ ಕಾಲ್ತುಳಿತದಲ್ಲಿ 11 ಜನ ಸಾವನ್ನಪ್ಪಿದ್ದರು.
ಇದನ್ನು ಓದಿ : ಕಾಲ್ತುಳಿತದಲ್ಲಿ ಸಿದ್ದಾಪುರದ ಮಹಿಳೆ ದುರ್ಮರಣ.