ಇ ಸಮಾಚಾರ ಡಿಜಿಟಲ್ ನ್ಯೂಸ್ (esamachara digital news) ಹೊನ್ನಾವರ(Honnavar) : ಮನೆಯ ಟ್ರಂಕ್ನಲ್ಲಿ ಇಟ್ಟಿದ್ದ ಚಿನ್ನಾಭರಣ(Gold Ornaments) ಹಾಗೂ ನಗದು ಕಳ್ಳತನ ಪ್ರಕರಣವನ್ನು ಹೊನ್ನಾವರ ಪೊಲೀಸರು(Honnavar Police) ಭೇದಿಸಿದ್ದು, ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ.
ಹೊನ್ನಾವರ ತಾಲೂಕಿನ(Honnavar Taluku) ಮನೆಯೊಂದರಲ್ಲಿ ಇಟ್ಟಿದ್ದ 128 ಗ್ರಾಂ ಬಂಗಾರದ ಆಭರಣ ಹಾಗೂ ನಗದು ಹಣ ಕಳ್ಳತನವಾಗಿತ್ತು. ಈ ಕುರಿತು ಹೊನ್ನಾವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.
ತನಿಖೆ ನಡೆಸಿದ ಪೊಲೀಸರು ಖಚಿತ ಮಾಹಿತಿ ಆಧರಿಸಿ ಧನುಷ್ ಶ್ರೀಧರ ಗೌಡ ಹಾಗೂ ಕಳವು ಮಾಡಿದ ಚಿನ್ನಾಭರಣವನ್ನು ವಿಲೇವಾರಿ ಮಾಡಲು ಸಹಕರಿಸಿದ ಗೌರೀಶ ಗಣಪತಿ ಗೌಡ ಎಂಬ ಇಬ್ಬರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ.
ಆರೋಪಿಗಳಿಂದ ಹೊನ್ನಾವರದ ಹಣಕಾಸು ಸಂಸ್ಥೆಗಳಲ್ಲಿ ಇಟ್ಟಿದ್ದ ಹಾಗೂ ಮಾರಾಟ ಮಾಡಿದ್ದ ಸೇರಿ ಒಟ್ಟು 17,08,300 ರೂ. ಮೌಲ್ಯದ 127.5 ಗ್ರಾಂ ಚಿನ್ನಾಭರಣವನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ಬಂಧಿತ ಆರೋಪಿಗಳನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ನ್ಯಾಯಾಂಗ ಬಂಧನ ವಿಧಿಸಲಾಗಿದೆ.
ಪ್ರಕರಣದ ಪತ್ತೆ ಕಾರ್ಯಾಚರಣೆ ಉತ್ತರಕನ್ನಡ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹಾಗೂ ಹಿರಿಯ ಪೊಲೀಸ್ ಅಧಿಕಾರಿಗಳ ಮಾರ್ಗದರ್ಶನದಲ್ಲಿ ಹೊನ್ನಾವರ ಪೊಲೀಸ್ ಠಾಣೆಯ ಅಧಿಕಾರಿಗಳು ಮತ್ತು ಸಿಬ್ಬಂದಿಗಳು ನಡೆಸಿದ್ದಾರೆ. ಕಾರ್ಯಾಚರಣೆಯಲ್ಲಿ ಭಾಗವಹಿಸಿದ ಪೊಲೀಸ್ ಸಿಬ್ಬಂದಿಯನ್ನು ಅಧಿಕಾರಿಗಳು ಅಭಿನಂದಿಸಿದ್ದಾರೆ.
ಇದನ್ನು ಓದಿ : ಭಟ್ಕಳದಲ್ಲಿ ಶುಲ್ಕ ಪಾವತಿಸಲಾಗದೇ ಕಂಗಾಲಾದ ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆ.*
