ಇ ಸಮಾಚಾರ ಡಿಜಿಟಲ್ ನ್ಯೂಸ್ (esamachara digital news) ಕುಮಟಾ(Kumta) : ಬಸ್ತಿಪೇಟೆಯಲ್ಲಿ ಮನೆ ಕಳವು(Bastipete House Theft) ಪ್ರಕರಣವನ್ನು ಪೊಲೀಸರು ಕೇವಲ 24 ಗಂಟೆಗಳೊಳಗೆ ಭೇದಿಸಿ ಆರೋಪಿಯನ್ನು ಬಂಧಿಸಿದ್ದಾರೆ.
ಫೆಬ್ರವರಿ 15ರ ತಡರಾತ್ರಿ ಮನೆಯವರೆಲ್ಲ ಮಲಗಿ ನಿದ್ರಿಸುತ್ತಿದ್ದ ವೇಳೆ ಚಿಲಕದ ಕೊಂಡಿಯನ್ನು ತೆಗೆದು ಸುಮಾರು 90 ಸಾವಿರ ರೂಪಾಯಿ ನಗದು ಕಳವು(Theft) ಮಾಡಲಾಗಿತ್ತು. ಘಟನೆ ಸಂಬಂಧ ಪ್ರಕರಣ ದಾಖಲಾಗುತ್ತಿದ್ದಂತೆಯೇ ಪೊಲೀಸರು ತ್ವರಿತ ಕಾರ್ಯಾಚರಣೆ ಕೈಗೊಂಡಿದ್ದರು.
ಬಂಧಿತ ಆರೋಪಿಯನ್ನು ಬಸವರಾಜ ಬಸ್ಯಾ ಶಿವಪ್ಪ ಗೌಡ (20) ಎಂದು ಗುರುತಿಸಲಾಗಿದೆ. ಬಂಧಿತ ಶಿವಮೊಗ್ಗ(Shivamogga) ಜಿಲ್ಲೆಯ ಸೊರಬ(Soraba) ತಾಲೂಕಿನ ನಿವಾಸಿಯಾಗಿದ್ದಾನೆ ಎಂದು ತಿಳಿದುಬಂದಿದೆ. ಪ್ರಕರಣ ದಾಖಲಾದ ಕೆಲವೇ ಗಂಟೆಗಳೊಳಗೆ ಆರೋಪಿಯನ್ನು ಪತ್ತೆಹಚ್ಚಿ ಬಂಧಿಸುವಲ್ಲಿ ಕುಮಟಾ ಪೊಲೀಸ್ ಠಾಣೆ(Kumta Police Station) ಸಿಬ್ಬಂದಿಗಳು ಯಶಸ್ವಿಯಾಗಿದ್ದಾರೆ. ಠಾಣೆಯ ಪಿಐ ಯೋಗೇಶ ಕೆ.ಎಂ. ಅವರ ಮಾರ್ಗದರ್ಶನದಲ್ಲಿ ಪಿಎಸ್‌ಐ ಮಯೂರ ಪಟ್ಟಣಶೆಟ್ಟಿ ಹಾಗೂ ಸಿಬ್ಬಂದಿಗಳು ಕಾರ್ಯಾಚರಣೆ ನಡೆಸಿದ್ದರು. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ದೀಪನ್ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಸ್ಥಳೀಯರು ಕೂಡ ಪೊಲೀಸರ ತ್ವರಿತ ಕ್ರಮವನ್ನು ಶ್ಲಾಘಿಸಿದ್ದಾರೆ.
ಇದನ್ನು ಓದಿ : ಮಾಜಾಳಿಯ ರಾಮನಾಥ ಕಡಲತೀರದಲ್ಲಿ ಸಮುದ್ರ ಸ್ನಾನ ವೇಳೆ ಬಾಲಕ ಸಾವು.
ಸಿಐಎಸ್ಎಫ್ ಯೋಧರಿಂದ ಕೋಸ್ಟಲ್ ಸೈಕ್ಲೋಥಾನ್ ರ‍್ಯಾಲಿ. ಮೀನುಗಾರ ಮಹಿಳೆಯರಿಂದ ತಿಲಕವಿಟ್ಟು ಸ್ವಾಗತ
