ಇ ಸಮಾಚಾರ ಡಿಜಿಟಲ್ ನ್ಯೂಸ್ (esamachara digital news) ಮಂಗಳೂರು(Mangalore) : ಹಿಂದು ಸಂಘಟನೆ ಕಾರ್ಯಕರ್ತ ಪ್ರವೀಣ್ ನೆಟ್ಟಾರು (Praveen Nettaru) ಕೊಲೆ ಪ್ರಕರಣದ ಮತ್ತೋರ್ವ ಆರೋಪಿಯನ್ನ ವಿಮಾನ ನಿಲ್ದಾಣದಲ್ಲಿ ಪೊಲೀಸರು ಬಂಧಿಸಿದ್ದಾರೆ.

ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಕೋಡಾಜೆ ನಿವಾಸಿ ಮಹಮ್ಮದ್ ಶರೀಫ್ (55) ಎಂಬಾತನನ್ನು ಪೊಲೀಸರು ಹೆಡೆ ಮುರಿ ಕಟ್ಟಿದ್ದಾರೆ. ವಿದೇಶದಿಂದ ವಾಪಸ್ ಬರುತ್ತಿದ್ದಾಗ ದೆಹಲಿ ವಿಮಾನ ನಿಲ್ದಾಣದಲ್ಲಿ(Delhi Airport) ಎನ್.ಐ.ಎ ತಂಡ(NIA Team) ಬಂಧಿಸಲು ಯಶಸ್ವಿಯಾಗಿದೆ.

ಈತನ ಪತ್ತೆಗಾಗಿ ಎನ್.ಐ.ಎ ಅಧಿಕಾರಿಗಳು 5 ಲಕ್ಷ ರಿವಾರ್ಡ್ ಘೋಷಿಸಿದ್ದರು. ಮಹಮದ್ ಶರೀಫ್ ನಿಷೇಧಿತ ಪಿಎಫ್‌ಐ ಸಂಘಟನೆಯ ಮುಖಂಡನಾಗಿದ್ದ ಎನ್ನಲಾಗಿದ್ದು ಎರಡು ಬಾರಿ ಎನ್.ಐ.ಎ ಅಧಿಕಾರಿಗಳು ಆತನ ಮನೆಗೆ ದಾಳಿ ಮಾಡಿದ್ದರು.

ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗಳ ಸಹಚರರ ಸ್ಥಳಗಳ ಮೇಲೆ ಇತ್ತೀಚೆಗೆ ಎನ್‌ಐಎ ದಾಳಿ ಮಾಡಿ ದಾಖಲೆಗಳು ಜಪ್ತಿ ಮಾಡಿಕೊಂಡಿತ್ತು. ಕರ್ನಾಟಕ (Karnataka)ಸೇರಿ ತಮಿಳುನಾಡಿನ(Tamilunadu) 16 ಕಡೆ ಎನ್‌ಐಎ ಅಧಿಕಾರಿಗಳು ದಾಳಿ ಮಾಡಿದ್ದರು.

ಜುಲೈ 26, 2022 ರಂದು ದಕ್ಷಿಣ ಕನ್ನಡ(Dakshinakannada) ಜಿಲ್ಲೆಯ ಸುಳ್ಯ(Sulya) ತಾಲೂಕಿನ ಬೆಳ್ಳಾರೆ ಗ್ರಾಮದಲ್ಲಿ(Bellare Village) ನಡೆದ ಪ್ರವೀಣ್ ಅವರ ಕೊಲೆ ರಾಜ್ಯದಲ್ಲಿ ಬೆಚ್ಚಿ ಬೀಳಿಸಿತ್ತು. ಹಿಂದೂ ಪರ ಹೋರಾಟಗಾಗರು ಸ್ವತಃ ಬಿಜೆಪಿ ವಿರುದ್ಧ ರೊಚ್ಚಿಗೇಳುವಂತೆ ಆಗಿತ್ತು. ಎನ್‌ಐಎ ಪ್ರವೀಣ್‌ ನೆಟ್ಟಾರು ಕೊಲೆ ಕೇಸ್‌ ತನಿಖೆ ನಡೆಸುತ್ತಿದ್ದು, 21 ಆರೋಪಿಗಳನ್ನು ಅರೆಸ್ಟ್ ಮಾಡಿ ಆರೋಪಿಗಳ ವಿರುದ್ದ ಚಾರ್ಶೀಟ್ ಸಲ್ಲಿಕೆ ಮಾಡಲಾಗಿತ್ತು. ಮಹಮ್ಮದ್ ಶರೀಫ್‌ ಸೇರಿದಂತೆ ಈವರೆಗೆ 20 ಜನರನ್ನು ಪ್ರಕರಣ ಸಂಬಂಧಿಸಿ ಬಂಧಿಸಲಾಗಿದೆ.

ಇದನ್ನು ಓದಿ : ಹೊನ್ನಾವರದಲ್ಲಿ ಪಲ್ಟಿಯಾದ ಕೋಲಾರ ವಿದ್ಯಾರ್ಥಿಗಳಿದ್ದ ಪ್ರವಾಸಿ ಬಸ್.

ದಣಿವರಿಯದ, ನೂರಾರು ಜನರಿಗೆ ದಾರಿ ದೀಪವಾದ ಶಿಕ್ಷಕ ನಿಧನ.

ಮನೆಯಂಗಳದಲ್ಲಿ ಚಿರತೆ. ಆತಂಕಗೊಂಡಿರುವ ಜನತೆ.