ಇ ಸಮಾಚಾರ ಡಿಜಿಟಲ್ ನ್ಯೂಸ್ (esamachara digital news) ನವದೆಹಲಿ(Newdelhi) : ಕೃಷಿ ಮತ್ತು ಗ್ರಾಮೀಣ ಕಾರ್ಮಿಕ ಸಂಘಟನೆಗಳ ಸಹಯೋಗದೊಂದಿಗೆ 10 ಕೇಂದ್ರ ಕಾರ್ಮಿಕ ಸಂಘಗಳ ಒಕ್ಕೂಟವು ಇಂದು ಜುಲೈ 9ರಂದು ರಾಷ್ಟ್ರವ್ಯಾಪಿ ಮುಷ್ಕರ ಘೋಷಿಸಿದೆ.
ಅಂಚೆ ಸೇವೆಗಳು, ಬ್ಯಾಂಕಿಂಗ್, ಗಣಿಗಾರಿಕೆ, ನಿರ್ಮಾಣ ವಲಯ ಮತ್ತು ಸಾರಿಗೆ ಮುಂತಾದ ವಲಯಗಳ 25 ಕೋಟಿಗೂ ಹೆಚ್ಚು ಕಾರ್ಮಿಕರು ಇಂದಿನ ಭಾರತ ಬಂದ್ ನಲ್ಲಿ ಪಾಲ್ಗೊಳ್ಳಲಿದ್ದಾರೆ. ಕೇಂದ್ರ ಸರ್ಕಾರದ “ಕಾರ್ಮಿಕ ವಿರೋಧಿ, ರೈತ ವಿರೋಧಿ ಮತ್ತು ಕಾರ್ಪೊರೇಟ್ ಪರ” ನೀತಿಗಳ ವಿರುದ್ಧ ಕಾರ್ಮಿಕ ಸಂಘಗಳು ಮತ್ತು ರೈತ ಸಂಘಟನೆಗಳ ಜಂಟಿ ವೇದಿಕೆ ದೇಶವ್ಯಾಪಿ ಮುಷ್ಕರಕ್ಕೆ ಕರೆ ನೀಡಿದೆ.
ಕಾರ್ಮಿಕ ಸಂಘಟನೆಗಳ ಬೇಡಿಕೆಗಳೇನು?
ಕಾರ್ಮಿಕರ ರಕ್ಷಣೆಗೆ ಹಾನಿ ಮಾಡುವ ಕಾರ್ಮಿಕ ನೀತಿಗಳನ್ನು ಕೈಬಿಡಬೇಕು. ನೂತನ ಕಾರ್ಮಿಕ ನೀತಿಗಳನ್ನು ಹಿಂಪಡೆಯಬೇಕು. ಸಾರ್ವಜನಿಕ ವಲಯದ ಸಂಸ್ಥೆಗಳ (PSU) ಖಾಸಗೀಕರಣ ಸ್ಥಗಿತಗೊಳಿಸಬೇಕು. ಕನಿಷ್ಠ ವೇತನ ಖಾತರಿ ಮತ್ತು ಸಾರ್ವತ್ರಿಕ ಸಾಮಾಜಿಕ ಭದ್ರತೆ ನೀಡಬೇಕು. ಉದ್ಯೋಗಿಗಳನ್ನು ಕಾಯಂಗೊಳಿಸಬೇಕು. ಭಾರತೀಯ ಕಾರ್ಮಿಕ ಸಮ್ಮೇಳನದ ಪುನಃಸ್ಥಾಪನೆ, ಆರೋಗ್ಯ ರಕ್ಷಣೆ, ಶಿಕ್ಷಣ ಮತ್ತು ನಾಗರಿಕ ಸೌಲಭ್ಯಗಳಲ್ಲಿ ಕಡಿತ ಮಾಡುವುದು ಬೇಡ, ಅವುಗಳಲ್ಲಿ ಹೆಚ್ಚಿನ ಹೂಡಿಕೆ ಮಾಡಬೇಕು.ಹೆಚ್ಚುತ್ತಿರುವ ನಿರುದ್ಯೋಗ ಮತ್ತು ಹಣದುಬ್ಬರ ನಿಯಂತ್ರಣಕ್ಕೆ ಕ್ರಮ ಕೈಗೊಳ್ಳಬೇಕು ಸೇರಿದಂತೆ ಇತರ ಬೇಡಿಕೆಯನ್ನು ಮುಂದಿಟ್ಟು ಮುಷ್ಕರ ಮಾಡುತ್ತಿವೆ.
ಭಾರತ ಬಂದ್‌ನಲ್ಲಿ ಭಾಗವಹಿಸುವ ಕಾರ್ಮಿಕ ಸಂಘಟನೆಗಳು.
ಅಖಿಲ ಭಾರತ ಟ್ರೇಡ್ ಯೂನಿಯನ್ ಕಾಂಗ್ರೆಸ್ (AITUC),
ಭಾರತೀಯ ರಾಷ್ಟ್ರೀಯ ಟ್ರೇಡ್ ಯೂನಿಯನ್ ಕಾಂಗ್ರೆಸ್ (INTUC), ಸೆಂಟರ್ ಆಫ್ ಇಂಡಿಯನ್ ಟ್ರೇಡ್ ಯೂನಿಯನ್ಸ್ (CITU), ಹಿಂದ್ ಮನ್ಸೂರ್ ಸಭಾ (HMS)., ಸ್ವಯಂ ಉದ್ಯೋಗಿ ಮಹಿಳಾ ಸಂಘ (SEWA)., ಲೇಬರ್ ಪ್ರೋಗ್ರೆಸಿವ್ ಫೆಡರೇಶನ್ (LPF). ಯುನೈಟೆಡ್ ಟ್ರೇಡ್ ಯೂನಿಯನ್ ಕಾಂಗ್ರೆಸ್ (UTUC).
ಹಲವು ಸಂಘಟನೆಗಳಿಂದಬೆಂಬಲ.
ಸಂಯುಕ್ತ ಕಿಸಾನ್ ಮೋರ್ಚಾ ಗ್ರಾಮೀಣ ಕಾರ್ಮಿಕರ ಸಂಘಗಳು., ರೈಲ್ವೆ, ಎನ್‌ಎಂಡಿಸಿ (NMDC) ಲಿಮಿಟೆಡ್ ಮತ್ತು ಉಕ್ಕಿನ ಕೈಗಾರಿಕೆಗಳ ಸಾರ್ವಜನಿಕ ವಲಯದ ಸಿಬ್ಬಂದಿಗಳು,
ಭಾರತ್ ಬಂದ್ ವೇಳೆ ಭಾರತದಾದ್ಯಂತ ಹಲವಾರು ಸೇವೆಗಳಿಗೆ ತೊಂದರೆಯಾಗುವ ಸಾಧ್ಯತೆಯಿದೆ. ವಿಶೇಷವಾಗಿ ಬ್ಯಾಂಕಿಂಗ್ ಮತ್ತು ವಿಮಾ ಸೇವೆಗಳು, ಅಂಚೆ ಕಾರ್ಯಾಚರಣೆಗಳು, ಕಲ್ಲಿದ್ದಲು ಗಣಿಗಾರಿಕೆ, ಸರ್ಕಾರಿ-ಚಾಲಿತ ಸಾರ್ವಜನಿಕ ಸಾರಿಗೆ ಸರ್ಕಾರಿ ಕಚೇರಿಗಳು ಮತ್ತು ಸಾರ್ವಜನಿಕ ವಲಯದ ಘಟಕಗಳು ಮತ್ತು ಕೈಗಾರಿಕೆಗಳ ಮೇಲೆ ಪರಿಣಾಮ ಬೀರಬಹುದು
ಇದನ್ನು ಓದಿ : ಒಂದು ದಿನ ಕೆಲಸ ಮಾಡಿಲ್ಲ. 35 ಲಕ್ಷ ರೂ. ವೇತನ ಪಡೆದ ಕಾನಸ್ಟೇಬಲ್.
ರೈಲ್ವೆ ಪ್ಲಾಟ್ ಫಾರ್ಮ್ ನಲ್ಲಿಯೇ ಮಹಿಳೆಗೆ ಹೆರಿಗೆ ಮಾಡಿಸಿದ ಸೇನಾ ವೈದ್ಯ.