ನವದೆಹಲಿ: ಲೋಕಸಭೆಯ ವಿರೋಧ ಪಕ್ಷದ ನಾಯಕನಾಗಿ  ರಾಹುಲ್ ಗಾಂಧಿ (Rahul Gandhi) ಅವರನ್ನ  ಕಾಂಗ್ರೆಸ್ ಕಾರ್ಯಕಾರಿ ಸಮಿತಿ (CWC)  ನಿರ್ಣಯದ ಮೂಲಕ ಅಂಗೀಕರಿಸಿದೆ.

ಸಂಸತ್ತಿನ ಒಳಗೆ ವಿಪಕ್ಷ ನಾಯಕ ಸ್ಥಾನಕ್ಕೆ ರಾಹುಲ್‌ ಅವರು ಅತ್ಯುತ್ತಮ ವ್ಯಕ್ತಿ ಎಂದು ಪಕ್ಷದ ಹಿರಿಯ ನಾಯಕ ಕೆ.ಸಿ.ವೇಣುಗೋಪಾಲ್  ಸುದ್ದಿಗೋಷ್ಠಿಯಲ್ಲಿ ಹೇಳಿದ್ದಾರೆ. 

ವಿಪಕ್ಷ ನಾಯಕ ಸ್ಥಾನ ವಹಿಸಿಕೊಳ್ಳುವ ಸಂಬಂಧ  ರಾಹುಲ್‌ ಗಾಂಧಿ ಅವರು ಶೀಘ್ರದಲ್ಲೇ ನಿರ್ಧಾರ ತೆಗೆದುಕೊಳ್ಳಲಿದ್ದಾರೆ. ನಮ್ಮ ನಾಯಕರು ಮತ್ತು ಕಾರ್ಯಕರ್ತರು ಹುಮ್ಮಸ್ಸಿನಿಂದ ಕಾಂಗ್ರೆಸ್ ಪುನಶ್ಚೇತನ ಕೆಲಸ ಆರಂಭಿಸಿದ್ದಾರೆ. ಸಿಡಬ್ಲ್ಯುಸಿಯಲ್ಲಿನ ವಾತಾವರಣವು ನಾಲ್ಕು ತಿಂಗಳ ಹಿಂದೆ ಇದ್ದದ್ದಕ್ಕಿಂತ ಸಂಪೂರ್ಣವಾಗಿ ಬದಲಾಗಿದೆ ಎಂದು ತಿಳಿಸಿದ್ದಾರೆ.

ರಾಹುಲ್‌ ಗಾಂಧಿ ಅವರ  ಭಾರತ್‌ ಜೋಡೋ ಯಾತ್ರೆ ನಡೆದಲ್ಲೆಲ್ಲ  ಹೆಚ್ಚು ಸ್ಥಾನ ಗೆದ್ದಿದ್ದೇವೆ. ಮಣಿಪುರದಲ್ಲೂ ಎರಡು ಸ್ಥಾನ ಗೆಲ್ಲಲು ರಾಹುಲ್‌ ಕಾರಣರು.  ಹೀಗಾಗಿ ರಾಹುಲ್‌ ಗಾಂಧಿಯೇ ವಿರೋಧ ಪಕ್ಷದ ನಾಯಕ ಆಗಬೇಕು ಎಂದು ಸಭೆಯಲ್ಲಿ ಕಾಂಗ್ರೆಸ್‌ ಹಿರಿಯ ನಾಯಕರು, ಸಿಡಬ್ಲ್ಯೂಸಿ ಸದಸ್ಯರು ಒತ್ತಾಯಿಸಿದ್ದಾರೆ.