ಬೆಂಗಳೂರು(BANGLORE) : ದೇಶದ ಹಲವು ರಾಜ್ಯಗಳಲ್ಲಿ ಭಾರೀ ಮಳೆಯಾಗುತ್ತಿದ್ದು, , ರಾಜ್ಯದಲ್ಲಿ ಹಲವು ಜಿಲ್ಲೆಗಳಲ್ಲಿ ಜುಲೈ 11ರವರೆಗೆ ಬಾರೀ ಮಳೆಯಾಗುವ ನಿರೀಕ್ಷೆ ಇದೆಯೆಂದು ಹವಾಮಾನ ಇಲಾಖೆ (IMD) ತಿಳಿಸಿದೆ.

ಕಳೆದ ಕೆಲವು ದಿನಗಳಿಂದ ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ನಿರಂತರವಾಗಿ ಮಳೆ ಸುರಿಯುತ್ತಿದೆ. ಇನ್ನೂ ರಾಜ್ಯದ ಕರಾವಳಿ ಜಿಲ್ಲೆಗಳು ಸೇರಿದಂತೆ ಇತರೆಡೆ ಮಳೆಯಾಗಬಹುದು. ಜುಲೈ 11 ರವರೆಗೆ ಕರಾವಳಿ (COASTAL) ಜಿಲ್ಲೆಗಳಲ್ಲಿ ಮತ್ತು  ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಅಲ್ಲಲ್ಲಿ ಅತಿ ಭಾರಿ ಮಳೆಯಾಗುವ (heavy Rain) ಸಾಧ್ಯತೆಯಿದೆ.

ಮುಂದಿನ 24 ಗಂಟೆಗಳ ಕಾಲ ದಕ್ಷಿಣ ಕನ್ನಡ, ಉಡುಪಿ, ಉತ್ತರಕನ್ನಡ, ಶಿವಮೊಗ್ಗ, ಚಿಕ್ಕಮಂಗಳೂರು ಜಿಲ್ಲೆಗಳ ಕಬಿನಿ, ಹಾರಂಗಿ, ಶಾಂಭವಿ, ಸ್ವರ್ಣ, ಹಾಲಾಡಿ, ಅಘನಾಶಿನಿ, ನೇತ್ರಾವತಿ, ಸೀತಾ ಮತ್ತು ಸಣ್ಣ ನದಿಗಳಲ್ಲಿ ನೀರಿನ ಮಟ್ಟ ಏರಿಕೆಯಾಗುವ ನಿರೀಕ್ಷೆಯಿದೆ ಎಂದು ತಿಳಿಸಲಾಗಿದೆ.