ರಕಾರವಾರ : ರಾಜ್ಯದ ಅನೇಕ ಜಿಲ್ಲೆಗಳಲ್ಲಿ ಬಾರೀ ಪ್ರಮಾಣದ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಸೂಚನೆ ನೀಡಿದೆ. ಉತ್ತರಕನ್ನಡ, ದಕ್ಷಿಣ ಕನ್ನಡ, ಉಡುಪಿ, ಶಿವಮೊಗ್ಗ, ಚಿತ್ರದುರ್ಗ, ಕೊಡಗು, ಚಿಕ್ಕಮಗಳೂರು ಸೇರಿದಂತೆ ಹಲವೆಡೆ ಧಾರಾಕಾರ ಮಳೆಯಾಗಲಿದ್ದು ಆರೇಂಜ್ ಅಲರ್ಟ್ ಘೋಷಿಸಲಾಗಿದೆ.

ಇನ್ನೂ ಧಾರವಾಡ, ಹಾವೇರಿ, ವಿಜಯನಗರ, ದಾವಣಗೆರೆ,  ಗದಗ ಜಿಲ್ಲೆಯಗಾಲ್ಲಿ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ

ರಾಜ್ಯದ ಹಲವು ಜಿಲ್ಲೆಗಳಲ್ಲಿ  ಭಾರಿ ಮಳೆಯಾಗುತ್ತಿದೆ.  ಕರಾವಳಿ ಜಿಲ್ಲೆಗಳಲ್ಲಿ ಬಿರುಗಾಳಿ ಬೀಸುವ ಸಾಧ್ಯತೆ ಇದ್ದು, ಸಮುದ್ರದಲ್ಲಿ ಬಾರೀ ಅಲೆಗಳು ಏಳುವ ಸಾಧ್ಯತೆ ಇದೆ. ಹೀಗಾಗಿ ಮೀನುಗಾರರಿಗೆ, ಪ್ರವಾಸಿಗರಿಗೆ ಸಮುದ್ರಕ್ಕೆ ಇಳಿಯದಂತೆ ಆಯಾ ಜಿಲ್ಲೆಯ ಜಿಲ್ಲಾಡಳಿತದಿಂದ ಸೂಚನೆ ನೀಡಲಾಗಿದೆ. ಮೇ 24ರಿಂದ ಮಳೆ ಹೆಚ್ಚಾಗುವ ಬಗ್ಗೆ  ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.