ಇ ಸಮಾಚಾರ ಡಿಜಿಟಲ್ ನ್ಯೂಸ್ (esamachara digital news)ಕಾರವಾರ(Karwar): ಕಾರವಾರ ಸಹಾಯಕ ಆಯುಕ್ತರಾಗಿ 2024ನೇ ಬ್ಯಾಚ್ನ ಐಎಎಸ್ ಅಧಿಕಾರಿ ರಮ್ಯಾ ಆರ್. ಅವರು ಅಧಿಕಾರ ಸ್ವೀಕರಿಸಿದ್ದಾರೆ.
ಕರ್ನಾಟಕ ಸರ್ಕಾರದ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆ (DPAR) ಹೊರಡಿಸಿರುವ ಐಎಎಸ್ ಹಾಗೂ ಕೆಎಎಸ್ ಅಧಿಕಾರಿಗಳ ವರ್ಗಾವಣೆ ಮತ್ತು ನೇಮಕಾತಿ ಆದೇಶದಂತೆ ಈ ಬದಲಾವಣೆ ನಡೆದಿದೆ. ಆದೇಶ ತಕ್ಷಣದಿಂದ ಜಾರಿಗೆ ಬರಲಿದ್ದು, ಮುಂದಿನ ಆದೇಶದವರೆಗೆ ಅನ್ವಯವಾಗಲಿದೆ.
ಕೆಲ ತಿಂಗಳ ಹಿಂದಷ್ಟೆ ಕಾರವಾರ ಉಪವಿಭಾಗದ ಎಸಿಯಾಗಿ ಅಧಿಕಾರ ಸ್ವೀಕರಿಸಿದ್ದ ಕೆಎಎಸ್ ಅಧಿಕಾರಿ ಶಾಲಂ ಹುಸೇನ್ ಅವರನ್ನು ಧಾರವಾಡದಲ್ಲಿರುವ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ (NHAI) ವಿಶೇಷ ಭೂಸ್ವಾಧೀನಾಧಿಕಾರಿ ಹುದ್ದೆಗೆ ವರ್ಗಾಯಿಸಲಾಗಿದೆ. ಅವರು ಜುಲೈ 2026ರಿಂದ ಕಾರವಾರ ಎಸಿಯಾಗಿ ಕಾರ್ಯನಿರ್ವಹಿಸುತ್ತಿದ್ದರು. ಇದಕ್ಕೂ ಮುನ್ನ ಧಾರವಾಡ ಉಪವಿಭಾಗಾಧಿಕಾರಿಯಾಗಿ ಸೇವೆ ಸಲ್ಲಿಸಿದ್ದರು.
ನೂತನ ಎಸಿ ರಮ್ಯಾ ಆರ್. ಅವರು ಕರ್ನಾಟಕ ಕ್ಯಾಡರ್ನ 2024ನೇ ಬ್ಯಾಚ್ನ ಐಎಎಸ್ ಅಧಿಕಾರಿಯಾಗಿದ್ದು, ಕಾರವಾರಕ್ಕೆ ವರ್ಗಾವಣೆಯಾಗುವ ಮುನ್ನ ಬೀದರ್ ಜಿಲ್ಲೆಯಲ್ಲಿ ಪ್ರೊಬೇಷನರಿ ಅಧಿಕಾರಿಯಾಗಿ ಕಾರ್ಯನಿರ್ವಹಿಸುತ್ತಿದ್ದರು.