ಕಾರವಾರ(Karwar) : ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದಿಂದ(National Highway Authority) ರಾಷ್ಟ್ರೀಯ ಹೆದ್ದಾರಿ-766 ಇ ಕುಮಟಾ-ಶಿರಸಿ ರಸ್ತೆಯಲ್ಲಿ(Kumta-Sirsi Road) ಉನ್ನತೀಕರಣ ಕಾಮಗಾರಿ ಡಿಸೆಂಬರ್ 02 ರಿಂದ ಪ್ರಾರಂಭವಾಗಲಿದೆ.
ಕಾಮಗಾರಿಯು ನಿಗದಿತ ಸಮಯದೊಳಗೆ ಮುಕ್ತಾಯಗೊಳಿಸಬೇಕಾಗಿರುವ ಹಿನ್ನಲೆಯಲ್ಲಿ ಹೆದ್ದಾರಿಯಲ್ಲಿ ವಾಹನ ಸಂಚಾರವನ್ನು ಬಂದ್ ಮಾಡಿ ಜಿಲ್ಲಾಧಿಕಾರಿಗಳು ಅದೇಶಿಸಿದ್ದಾರೆ.
ಈ ಸಂಬಂಧ ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿಗಳು ಪ್ರಕಟಣೆ ಹೊರಡಿಸಿದ್ದಾರೆ. ಬದಲಿ ಮಾರ್ಗದ ಕುರಿತು ಜಿಲ್ಲಾಧಿಕಾರಿಗಳು ಆದೇಶದಲ್ಲಿ ತಿಳಿಸಿದ್ದಾರೆ. ಕುಮಟಾ-ಶಿರಸಿ ಮೂಲಕ ಸಿದ್ದಾಪುರ ರಾಷ್ಟ್ರೀಯ ಹೆದ್ದಾರಿ(Siddapur-National Highway) 766-ಇ ಲಘು ವಾಹನಗಳು ಸಂಚರಿಸಬಹುದು.
ಅಂಕೋಲಾ-ಶಿರಸಿ(Ankola-Sirsi) ಮೂಲಕ ಯಲ್ಲಾಪುರ ರಾಷ್ಟ್ರೀಯ ಹೆದ್ದಾರಿ 63 (Yallapur National Highway)ಮತ್ತು ರಾಜ್ಯ ಹೆದ್ದಾರಿ-93(State Highway-93) ಮಾರ್ಗವಾಗಿ ಎಲ್ಲಾ ವಿಧದ ವಾಹನಗಳು ಸಂಚರಿಸಬಹುದು.
ಮಂಗಳೂರು-ಹೊನ್ನಾವರ-ಶಿರಸಿ(Manglore-Honnavar-Sirsi) ಮೂಲಕ ಸಿದ್ದಾಪುರ-ಮಾವಿನಗುಂಡಿ (Siddapur-Mavinagundi)ಮಾರ್ಗವಾಗಿ ಎಲ್ಲಾ ವಿಧದ ವಾಹನಗಳು ಸಂಚರಿಸಬಹುದು.
ಹೀಗಾಗಿ ರಾಷ್ಟ್ರೀಯ ಹೆದ್ದಾರಿ-766 ಇ ಕುಮಟಾ-ಶಿರಸಿ(Kumta -Sirsi) ರಸ್ತೆಯಲ್ಲಿ ಉನ್ನತೀಕರಣ ಕಾಮಗಾರಿ ಸಮಯದಲ್ಲಿ ಜಿಲ್ಲಾಧಿಕಾರಿಗಳ ಆದೇಶದಂತೆ ಸೂಚಿಸಿರುವ ಬದಲಿ ಮಾರ್ಗದಲ್ಲಿ ಸಂಚರಿಸಿ ಸಹಕರಿಸುವಂತೆ ಸಾರ್ವಜನಿಕರಲ್ಲಿ ಕೋರಲಾಗಿದೆ.
ಇದನ್ನು ಓದಿ : ನರ್ಸ್ ವೇಷದಲ್ಲಿ ಶಿಶು ಕಳ್ಳತನ.