ಇ ಸಮಾಚಾರ ಡಿಜಿಟಲ್ ನ್ಯೂಸ್ (esamachara digital news) ಹೊನ್ನಾವರ(Honnavar) : ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರದಲ್ಲಿ ಆರ್ಟಿಒ(Honnavar RTO) ಅಧಿಕಾರಿಗಳು ನಡೆಸಿದ ವಿಶೇಷ ಕಾರ್ಯಾಚರಣೆಯಲ್ಲಿ ಓವರ್ಲೋಡ್ ಮಾಡಿಕೊಂಡು ಸಂಚರಿಸುತ್ತಿದ್ದ 17 ಲಾರಿಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ.
ಮಂಗಳೂರಿನ ಪೆಣಂಬೂರಿನಿಂದ ಹೊನ್ನಾವರದ(Panamburu to honnavar) ಕಡೆಗೆ ಭಾರಿ ಗಾತ್ರದ ಶಿಲೆ ಕಲ್ಲುಗಳನ್ನು ಸಾಗಿಸುತ್ತಿದ್ದ ಲಾರಿಗಳ ಮೇಲೆ ಅಧಿಕಾರಿಗಳು ತಪಾಸಣೆ ನಡೆಸಿದರು. ಈ ವೇಳೆ ನಿಗದಿತ ಮಿತಿಗಿಂತ ಹೆಚ್ಚಿನ ಪ್ರಮಾಣದಲ್ಲಿ ಕಲ್ಲುಗಳನ್ನು ತುಂಬಿಕೊಂಡು ಸಾಗಿಸುತ್ತಿರುವುದು ಪತ್ತೆಯಾಗಿದೆ.
ವಶಕ್ಕೆ ಪಡೆದ ಲಾರಿಗಳು ಹೊನ್ನಾವರದ ಕಾಸರಕೋಡದಲ್ಲಿ(Honnavar Kasarakodu) ನಿರ್ಮಾಣ ಹಂತದಲ್ಲಿರುವ ಖಾಸಗಿ ವಾಣಿಜ್ಯ ಬಂದರಿನ ವಿಸ್ತರಣೆ ಕಾಮಗಾರಿಗೆ ಕಲ್ಲುಗಳನ್ನು ಸಾಗಿಸುತ್ತಿದ್ದವು ಎನ್ನಲಾಗಿದೆ.
ಓವರ್ಲೋಡ್ ವಾಹನಗಳ ಸಂಚಾರದಿಂದ ರಸ್ತೆ ಹಾನಿ ಹಾಗೂ ಸಾರ್ವಜನಿಕರ ಸುರಕ್ಷತೆಗೆ ಅಪಾಯ ಉಂಟಾಗುವ ಹಿನ್ನೆಲೆಯಲ್ಲಿ ಅಧಿಕಾರಿಗಳು ಕ್ರಮ ಕೈಗೊಂಡಿದ್ದು, ಸಂಬಂಧಿತ ವಾಹನ ಮಾಲೀಕರ ವಿರುದ್ಧ ಕಾನೂನು ಪ್ರಕ್ರಿಯೆ ಮುಂದುವರಿದಿದೆ.
ಇದನ್ನು ಓದಿ : ಮೀನುಗಾರಿಕಾ ಬೋಟ್ ಮುಳುಗಡೆ – ಏಳು ಜನ ಮೀನುಗಾರರ ರಕ್ಷಣೆ
