ಇ ಸಮಾಚಾರ ಡಿಜಿಟಲ್ ನ್ಯೂಸ್ (esamachara digital news) ಜೋಯಿಡಾ (Joida) : ಉತ್ತರ ಕನ್ನಡ(Uttarkannada) ಜಿಲ್ಲೆಯ ಕೆಲ ಕಡೆಗಳಲ್ಲಿ ಕಳೆದ ರಾತ್ರಿಯಿಂದ ನಿರಂತರವಾಗಿ ಮಳೆ(Heavy Rain) ಸುರಿಯುತ್ತಿದೆ.

ಭಾರೀ ಮಳೆ ಸುರಿಯುತ್ತಿರುವ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕಾ ಕ್ರಮವಾಗಿ ಜೋಯಿಡಾ(Joida) ತಾಲೂಕಿನ ಎಲ್ಲಾ ಅಂಗನವಾಡಿ ಕೇಂದ್ರಗಳು, ಪ್ರಾಥಮಿಕ ಹಾಗೂ ಪ್ರೌಢಶಾಲೆಗಳಿಗೆ ರಜೆ ಘೋಷಿಸಲಾಗಿದೆ.

ಜೋಯಿಡಾ ತಹಸೀಲ್ದಾರ್ ಮಂಜುನಾಥ್ ಮುನ್ನೊಳಿ ಅವರು ಈ ಕುರಿತು ಆದೇಶ ಹೊರಡಿಸಿದ್ದು, ವಿದ್ಯಾರ್ಥಿಗಳ ಸುರಕ್ಷತೆಯನ್ನು ಗಮನದಲ್ಲಿಟ್ಟುಕೊಂಡು ಈ ನಿರ್ಧಾರ ಕೈಗೊಳ್ಳಲಾಗಿದೆ.

ಕಳೆದ ರಾತ್ರಿಯಿಂದ ಸುರಿಯುತ್ತಿರುವ ಧಾರಾಕಾರ ಮಳೆಯಿಂದಾಗಿ ನದಿ, ಹಳ್ಳ-ಕೊಳ್ಳಗಳು ತುಂಬಿ ಹರಿಯುತ್ತಿದ್ದು, ರಸ್ತೆ ಸಂಚಾರಕ್ಕೂ ತೊಂದರೆಯಾಗುವ ಸಾಧ್ಯತೆ ಇದೆ. ಈ ಹಿನ್ನೆಲೆಯಲ್ಲಿ ಯಾವುದೇ ಅನಾಹುತ ಸಂಭವಿಸದಂತೆ ಮುನ್ನೆಚ್ಚರಿಕಾ ಕ್ರಮವಾಗಿ ರಜೆ ಘೋಷಿಸಲಾಗಿದೆ.

ಜಿಲ್ಲಾಡಳಿತ ಹಾಗೂ ತಾಲ್ಲೂಕು ಆಡಳಿತವು ಸಾರ್ವಜನಿಕರು ಅಗತ್ಯವಿಲ್ಲದೆ ಹೊರಗೆ ಸಂಚರಿಸದಂತೆ ಹಾಗೂ ಹವಾಮಾನ ಇಲಾಖೆ(Metrology Department) ಮತ್ತು ಆಡಳಿತದ ಸೂಚನೆಗಳನ್ನು ಪಾಲಿಸುವಂತೆ ಮನವಿ ಮಾಡಿದೆ.