ಇ ಸಮಾಚಾರ ಡಿಜಿಟಲ್ ನ್ಯೂಸ್ (esamachara digital news) ಕಾರವಾರ(Karwar) : ಭಾರತೀಯ ಹವಾಮಾನ ಇಲಾಖೆ (IMD) ಭಾರೀ ಮಳೆಯ ರೆಡ್ ಅಲರ್ಟ್(Red Alert) ಘೋಷಿಸಿರುವ ಹಿನ್ನೆಲೆಯಲ್ಲಿ ಉತ್ತರ ಕನ್ನಡ ಜಿಲ್ಲೆಯ ಶಿರಸಿ(Sirsi), ಸಿದ್ದಾಪುರ(Siddapur), ಯಲ್ಲಾಪುರ(Yallapur), ಜೋಯಿಡಾ(Joida) ಹಾಗೂ ದಾಂಡೇಲಿ(Dandeli) ತಾಲ್ಲೂಕುಗಳ ಎಲ್ಲಾ ಅಂಗನವಾಡಿ ಕೇಂದ್ರಗಳು, ಸರ್ಕಾರಿ, ಅನುದಾನಿತ ಹಾಗೂ ಖಾಸಗಿ ಪ್ರಾಥಮಿಕ, ಪ್ರೌಢಶಾಲೆಗಳಿಗೆ ನಾಳೆ ಜುಲೈ 7ರಂದು ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ(DC Order) ಹೊರಡಿಸಿದ್ದಾರೆ.
ವಿದ್ಯಾರ್ಥಿಗಳ ಸುರಕ್ಷತೆಯನ್ನು ಗಮನದಲ್ಲಿಟ್ಟುಕೊಂಡು ವಿಪತ್ತು ನಿರ್ವಹಣಾ ಕಾಯ್ದೆ-2005ರ ಸೆಕ್ಷನ್ 34(ಎಂ) ಅಡಿಯಲ್ಲಿ ಈ ಆದೇಶ ಜಾರಿಗೊಳಿಸಲಾಗಿದೆ. ಆದರೆ, ಪೂರ್ವನಿಗದಿತ ಪರೀಕ್ಷೆಗಳು, ಮೌಲ್ಯಮಾಪನ ಕಾರ್ಯಗಳು ಹಾಗೂ ಅಗತ್ಯ ಸರ್ಕಾರಿ ಕರ್ತವ್ಯಗಳು ಎಂದಿನಂತೆ ನಡೆಯಲಿವೆ ಎಂದು ಜಿಲ್ಲಾಧಿಕಾರಿಗಳ ಪ್ರಕಟಣೆಯಲ್ಲಿ ತಿಳಿಸಲಾಗಿದೆ.
