ಇ ಸಮಾಚಾರ ಡಿಜಿಟಲ್ ನ್ಯೂಸ್ (esamachara digital news) ಅಂಕೋಲಾ(Ankola) : ಪೂಜಗೇರಿ ಗ್ರಾಮದಲ್ಲಿರುವ ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ(Govt. first grade College) ಉಪನ್ಯಾಸಕನೋರ್ವ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ(Sexual Harassment) ನೀಡಿದ ಆರೋಪ ಕೇಳಿ ಬಂದಿದ್ದು, ವಿದ್ಯಾರ್ಥಿಗಳ ಪಾಲಕರು ಮತ್ತು ನಾಗರಿಕರ ಆಕ್ರೋಶ ಕಂಡುಬಂದಿದೆ.
ಈ ಕಾಲೇಜಿನಲ್ಲಿರುವ ಉಪನ್ಯಾಸಕ ರಾಮಚಂದ್ರ ಅಂಕೋಲೆಕರ್ ವಿರುದ್ಧ ವಿದ್ಯಾರ್ಥಿನಿ ಅಂಕೋಲಾ ಪೊಲೀಸ್ ಠಾಣೆಗೆ(Ankola Police Station) ದೂರು ನೀಡಿದ್ದಾಳೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಲೇಜು ಪ್ರಾಚಾರ್ಯರು(College Principal) ಯಾವುದೇ ಕ್ರಮ ಕೈಗೊಳ್ಳದ ಹಿನ್ನೆಲೆಯಲ್ಲಿ ಪೋಷಕರು(Parents) ಹಾಗೂ ವಿದ್ಯಾರ್ಥಿಗಳು(Students) ಕಾಲೇಜು ಗೇಟ್ ಮುಂದೆ ಕುಳಿತು ಪ್ರತಿಭಟನೆ ನಡೆಸಿದರು.
ಕಾಲೇಜು ಪ್ರಾಚಾರ್ಯರು(College Principal) ಆರೋಪವನ್ನು ಗಂಭೀರವಾಗಿ ಪರಿಗಣಿಸದೇ ನಿರ್ಲಕ್ಷ್ಯ ವಹಿಸಿರುವುದು ಪೋಷಕರ ಆಕ್ರೋಶಕ್ಕೆ ಕಾರಣವಾಗಿದೆ. ಕಳೆದ ಕೆಲ ದಿನಗಳಿಂದ ಆರೋಪಿತ ಉಪನ್ಯಾಸಕ ರಾಮಚಂದ್ರ ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ(Sexual Harassment) ನೀಡುತ್ತಿದ್ದ ಆರೋಪವನ್ನ ಪೋಷಕರು ಮಾಡಿದ್ದಾರೆ. ಈ ಬಗ್ಗೆ ಪ್ರಾಚಾರ್ಯರ ಗಮನಕ್ಕೆ ತಂದಿದ್ದರೂ ಉಪನ್ಯಾಸಕನ ಪರವಾಗಿ ಪ್ರಾಚಾರ್ಯರು ಇದ್ದಾರೆ. ಶೋಷಿತ ವಿದ್ಯಾರ್ಥಿನಿಯರಿಗೆ ನ್ಯಾಯ ದೊರಕಿಸಲು ಪ್ರಯತ್ನಿಸಿಲ್ಲ ಎಂಬ ಆರೋಪಿಸಲಾಗಿದೆ.
ಹೀಗಾಗಿ ಪೋಷಕರು ಕಾಲೇಜು ಮುಂದೆ ಪ್ರತಿಭಟನೆ ನಡೆಸಿ ಆಡಳಿತ ಮಂಡಳಿ ಸ್ಥಳಕ್ಕೆ ಬರುವಂತೆ ಪಟ್ಟು ಹಿಡಿದರು. ಆರೋಪಿತ ಉಪನ್ಯಾಸಕನನ್ನು ಸ್ಥಳಕ್ಕೆ ಕರೆಸುವಂತೆ ಆಗ್ರಹಿಸಿದರು. “ವಿದ್ಯಾರ್ಥಿನಿಯ ಗೌರವವನ್ನು ಕಾಪಾಡುವಲ್ಲಿ ಕಾಲೇಜು ಆಡಳಿತ ವಿಫಲವಾಗಿದೆ” ಎಂದು ಪೋಷಕರು ಗಂಭಿರ ಆರೋಪ ಮಾಡಿದ್ದಾರೆ.
ಪ್ರತಿಭಟನೆ ಹಿನ್ನಲೆಯಲ್ಲಿ ಅಂಕೋಲಾ ಪೊಲೀಸರು(Ankola Police) ಸ್ಥಳಕ್ಕೆ ಆಗಮಿಸಿ ಪ್ರತಿಭಟನಾಕಾರರನ್ನು ಶಾಂತಗೊಳಿಸಲು ಪ್ರಯತ್ನಿಸಿದರು. ಈ ಪ್ರಕರಣದ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
ಇದನ್ನು ಓದಿ : ಕಾರವಾರ ರಾ. ಹೆದ್ದಾರಿಯಲ್ಲಿ ಎರಡು ಅಪಘಾತ. ಬೈಕ್ ಸವಾರರಿಗೆ ಗಾಯ.

