ಇ ಸಮಾಚಾರ ಡಿಜಿಟಲ್ ನ್ಯೂಸ್ (esamachara  digital news) ಪುತ್ತೂರು : ಶಬರಿಮಲೆ ಕ್ಷೇತ್ರದಲ್ಲಿ ಪವಾಡ ನಡೆಯುತ್ತಲೇ ಇದೆ. ನಲವತ್ತೆಂಟು ದಿನಗಳ ಕಾಲ ಕಠಿಣ ವೃತಾಚರಣೆ ನಡೆಸಿದ ಬಾಲಕನೋರ್ವ ಅಯ್ಯಪ್ಪ ಸ್ವಾಮಿ ದರ್ಶನ ಬಳಿಕ ಮಾತನಾಡಲು ಆರಂಭಿಸಿದ್ದಾನೆ.

ಅಯ್ಯಪ್ಪ ಸ್ವಾಮಿಯ  ಮಹಿಮೆಯಿಂದಾಗಿ  ಶಬರಿಮಲೆಗೆ ಭೇಟಿ ನೀಡುವ ಭಕ್ತರ ಸಂಖ್ಯೆ ವರ್ಷದಿಂದ ವರ್ಷಕ್ಕೆ ಹೆಚ್ಚಾಗುತ್ತಿದೆ. ಹೀಗೊಂದು  ಪವಾಡ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರಿನಲ್ಲಿ ಬೆಳಕಿಗೆ ಬಂದಿದೆ.  ಮಾತನಾಡಲೂ ಬಾರದ ಬಾಲಕನೊಬ್ಬ ಮಾತನಾಡಲು ಶುರು ಮಾಡಿದ್ದಾನೆ. ಪುತ್ತೂರಿನ ಸಾಮೆತ್ತಡ್ಕ ನಿವಾಸಿ ಪ್ರಸನ್ನ  ಮಾತನಾಡುವ ಮೂಲಕ ಅಯ್ಯಪ್ಪ ಮಾಲಾಧಾರಿಗಳಿಗೆ ಅಚ್ಚರಿ ತಂದಿದ್ದಾರೆ. ಚಿಕ್ಕ ಮಕ್ಕಳು ಹೇಗೆ  ತೊದಲು ನುಡಿ ಆಡುತ್ತಾರೋ ಹಾಗೆಯೇ  ಈ ಬಾಲಕ ಮಾತನಾಡುತ್ತಿದ್ದಾನೆ.

ಪ್ರಸನ್ನ ಒಂದು ವರ್ಷದ ಹಿಂದೆ ಶಬರಿಮಲೆಗೆ ಹೋಗಿದ್ದ . ಈ ಬಾರಿಯು ಮತ್ತೆ ಮಾಲೆ ಧರಿಸಿ ನಲವತ್ತೆಂಟು ದಿನಗಳ ಕಾಲ ಕಠಿಣ ವೃತಾಚರಣೆ ನಡೆಸುತ್ತಿರುವ  ಬಾಲಕನ ಬಾಳಲ್ಲಿ ಅಚ್ಚರಿ ಮೂಡಿದೆ.

ಒಂದು ಶಬ್ದ ಮಾತನಾಡಲೂ ಕಷ್ಟಪಡುತ್ತಿದ್ದ ಬಾಲಕ  ಇಂದು ಅಯ್ಯಪ್ಪ ಸ್ವಾಮಿಯ ಶರಣು ಕರೆಯುತ್ತಾನೆ. ಮಾತು ಬಾಯಿಯಿಂದ ಬರುತ್ತಿದ್ದು, ಎಂಟು ಶರಣನ್ನು ಪ್ರಸನ್ನ ಯಾವುದೇ ತೊಂದರೆಯಿಲ್ಲದೆ ಕರೆಯುತ್ತಾರೆ. ಬಳಿಕದ ಶಬ್ದಗಳಲ್ಲಿ ಅಷ್ಟು ಸ್ಪಷ್ಟವಾಗಿಲ್ಲದಿದ್ದರೂ, ಅರ್ಥವಾಗುತ್ತಿದೆ.  ಮೊದಲ ಬಾರಿಗೆ ಮಾಲೆ ಧರಿಸಲು ಬಂದಾಗ ಕೇಳಲು ಮತ್ತು ಮಾತನಾಡಲು ಆಗದ ಸ್ಥಿತಿಯಲ್ಲಿದ್ದ ಪ್ರಸನ್ನನಿಗೆ ಇದೀಗ ಎಲ್ಲವೂ ಕಿವಿಯಲ್ಲಿ ಕೇಳಿಸುತ್ತಿದೆ,  ಮಾತನಾಡಲು ಶಬ್ದಗಳು ಹೊರಡುತ್ತಿದೆ ಎಂದು ಇತರ ಮಾಲಾಧಾರಿಗಳು ಹೇಳುತ್ತಾರೆ.

ಕಳೆದ ವರ್ಷ ಮಾಲೆ ಹಾಕಲು ಬಂದ ಸಂದರ್ಭದಲ್ಲಿ ಕೈ ಸನ್ನೆಯ ಮೂಲಕ ತನ್ನ ಅಭಿಪ್ರಾಯಗಳನ್ನು ವ್ಯಕ್ತಪಡಿಸುತ್ತಿದ್ದ ಪ್ರಸನ್ನ ಬಾಯಲ್ಲಿ ಮಾತನಾಡಲಾರಂಭಿಸಿರುವುದು ಗುರು ಸ್ವಾಮಿಗಳು ಸಂತಸಗೊಂಡಿದ್ದಾರೆ. ಇಂತಹ ಹಲವು ಉದಾಹರಣೆಗಳನ್ನು ಹಿರಿಯ ಅಯ್ಯಪ್ಪ ಮಾಲಾಧಾರಿಗಳು ಉದಾಹರಣೆಯ ಸಹಿತ ನೀಡುತ್ತಾರೆ. ಈ ಸಾಲಿಗೆ ಪ್ರಸನ್ನ ಕೂಡಾ ಸೇರಿದ್ದು, ಅಯ್ಯಪ್ಪನ ಮಹಿಮೆಯಿಂದ ಎಲ್ಲವೂ ಸಾಧ್ಯ ಎನ್ನುವುದು ಮತ್ತೊಮ್ಮೆ  ಗೊತ್ತಾಗಿದೆ.

ಪುತ್ತೂರಿನ ಮಹಾಲಿಂಗೇಶ್ವರ ಐಟಿಐ ಕಾಲೇಜಿನಲ್ಲಿ ಎರಡನೇ ವರ್ಷದ ಸಿವಿಲ್‌ ಡಿಪ್ಲೊಮಾ ಮಾಡುತ್ತಿರುವ ಪ್ರಸನ್ನನ  ಸ್ವಭಾವದಲ್ಲಾದ ಬದಲಾವಣೆ ಆತನ ಮೇಲೆ ಅಯ್ಯಪ್ಪ ಸ್ವಾಮಿ ದಯೆ ತೋರಿದ್ದಾನೆ ಎಂದು ಹಿರಿಯ ಅಯ್ಯಪ್ಪ ಮಾಲಾಧಾರಿಗಳ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ಇದನ್ನು ಓದಿ : ಶಿಕ್ಷಕರಿದ್ದ ಕಾರು ಪಲ್ಟಿ. ಓರ್ವ ಚಿತ್ರಕಲಾ ಶಿಕ್ಷಕ ಸಾವು.

ಮುರ್ಡೇಶ್ವರ ಘಟನೆಗೆ ಸಿಎಂ ಸಂತಾಪ. ಶಿಕ್ಷಕರ ಅಮಾನತ್.