ಬೆಂಗಳೂರು(BANGLORE): ಅಂಕೋಲಾ (ANKOLA) ತಾಲೂಕಿನ ಶಿರೂರು ಗುಡ್ಡ ಕುಸಿತ (SHIRURU LANDSLIDE) ಪ್ರಕರಣಕ್ಕೆ ಸಂಬಂಧಿಸಿ ರಾಜ್ಯ ಸರ್ಕಾರ ಹೈಕೋರ್ಟ್ (HIGH COURT) ಗೆ ಸೋಮವಾರ ಮಾಹಿತಿ ಸಲ್ಲಿಸಿದೆ.

ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಭವಿಸಿದ ಘಟನೆಯಲ್ಲಿ ಒಟ್ಟು 11 ಜನರ ಪೈಕಿ 8 ಜನರ ಮೃತದೇಹಗಳನ್ನು ಪತ್ತೆ ಹಚ್ಚಿ ಹೊರತೆಗೆಯಲಾಗಿದೆ.  ಇನ್ನೂ ಮೂವರು ಪತ್ತೆಯಾಗಬೇಕಿದ್ದು, ಅವರ ಶೋಧ ಸೇರಿದಂತೆ ರಕ್ಷಣ ಕಾರ್ಯ ಮುಂದುವರಿದಿದೆ ಎಂದು ರಾಜ್ಯ ಸರಕಾರ (STATE GOVERNMENT) ಹೈಕೋರ್ಟ್‌ಗೆ ತಿಳಿಸಿದೆ.

ಘಟನೆಗೆ ಸಂಬಂಧಿಸಿ ವಕೀಲ ಸಿ. ಜಿ. ಮಲೈಯಿಲ್‌ ಹಾಗೂ ಕೆ.ಎಸ್‌. ಸುಭಾಷ್‌ ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿದರು. ಸೋಮವಾರ ಮುಖ್ಯ ನ್ಯಾಯಮೂರ್ತಿ ಎನ್‌.ವಿ. ಅಂಜಾರಿಯಾ ಹಾಗೂ ನ್ಯಾ. ಕೆ.ವಿ. ಅರವಿಂದ್‌ ಅವರಿದ್ದ ವಿಭಾಗೀಯ ನ್ಯಾಯಪೀಠದ ಮುಂದೆ  ವಿಚಾರಣೆಗೆ ಬಂದಿತ್ತು.

ಈ ಸಂದರ್ಭದಲ್ಲಿ ರಾಜ್ಯ ಸರಕಾರದ ಪರವಾಗಿ ಅಡ್ವೋಕೇಟ್‌ ಜನರಲ್‌ ಕೆ. ಶಶಿಕಿರಣ್‌ ಶೆಟ್ಟಿ ಹಾಜರಾಗಿ ಭಾರೀ ಮಳೆ (RAIN) ಕಾರಣದಿಂದಾಗಿ ಕಾರ್ಯಾಚರಣೆಗೆ ತೊಡಕಾಗಿದೆ ಎಂದು ತಿಳಿಸಿದರು. ವಿಚಾರಣೆ ನಡೆಸಿದ ನ್ಯಾಯಪೀಠ, ರಕ್ಷಣ ಕಾರ್ಯ ಮುಂದುವರಿಸಲು ಸೂಚಿಸಿತು. ಅಲ್ಲದೇ ಕೇಂದ್ರ, ರಾಜ್ಯ ಸರಕಾರಗಳ ವರದಿ ಬಗ್ಗೆ ಆಕ್ಷೇಪಣೆ ಇದ್ದರೆ ಸಲ್ಲಿಸುವಂತೆ ಅರ್ಜಿದಾರರಿಗೆ ಸೂಚನೆ ನೀಡಿತು. ಪ್ರಕರಣದಲ್ಲಿ ವಿಚಾರಣೆಯನ್ನು ಆಗಸ್ಟ್‌ 12ಕ್ಕೆ (AUGUST 12) ಮುಂದೂಡಿದೆ.

ಕೇಂದ್ರ ಸರಕಾರದ ಸಹಕಾರದಿಂದ ಸಮಾರೋಪಾದಿಯಲ್ಲಿ ಕಾರ್ಯಾಚರಣೆ ನಡೆಸಲಾಗಿದ್ದು ಜುಲೈ 16ರಿಂದ 31ರವರೆಗೆ ಕೈಗೊಂಡ  ಕಾರ್ಯಾಚರಣೆಯ ಪ್ರತೀದಿನದ ಮಾಹಿತಿಯನ್ನು ಲಿಖಿತವಾಗಿ ರಾಜ್ಯ ಸರಕಾರದ ಪರ ಅಡ್ವೊಕೇಟ್‌ ಜನರಲ್‌(ADVOCATE GENERAL) ಕೆ. ಶಶಿಕಿರಣ್‌ ಶೆಟ್ಟಿ ನ್ಯಾಯಪೀಠಕ್ಕೆ ಸಲ್ಲಿಸಿದರು.

ಘಟನೆಯಲ್ಲಿ ಇನ್ನೂ ಮೂವರು  ಪತ್ತೆಯಾಗಿಲ್ಲ. ಕೇಂದ್ರ ಸರಕಾರದ ನೆರವಿನೊಂದಿಗೆ ರಾಜ್ಯ ಸರಕಾರ ರಕ್ಷಣ ಕಾರ್ಯ(RESCUE OPERATIONS) ನಡೆಸಿದೆ. ಮಳೆ, ಪ್ರವಾಹ ಇನ್ನಿತರ ನೈಸರ್ಗಿಕ ಕಾರಣಗಳಿಂದ ತೀರಾ ಅಸಾಧ್ಯವಾದ ಪರಿಸ್ಥಿತಿ ಹೊರತುಪಡಿಸಿ, ರಕ್ಷಣ ಕಾರ್ಯ ಮುಂದುವರಿಸಲಾಗಿದೆ. ವ್ಯಕ್ತಿಗಳು ಮತ್ತು ಯಂತ್ರಗಳನ್ನು ಬಳಸಿಕೊಂಡು ಮನುಷ್ಯಸಾಧ್ಯ ಎಲ್ಲ ಪ್ರಯತ್ನಗಳನ್ನು ಮಾಡಲಾಗುತ್ತಿದೆ ಎಂದು ಕೋರ್ಟಿಗೆ ಮಾಹಿತಿ ನೀಡಿದರು.

ಕೇಂದ್ರ ಸರಕಾರದ ಪರ ಸಹಾಯಕ ಸಾಲಿಸಿಟರ್‌ ಜನರಲ್‌ ಎಚ್‌. ಶಾಂತಿಭೂಷಣ್‌ ವಾದ ಮಂಡಿಸಿ, ರಾಜ್ಯ ಸರಕಾರಕ್ಕೆ ಕೇಂದ್ರದಿಂದ ಅಗತ್ಯ ಸಹಕಾರ ನೀಡಲಾಗಿದೆ. ಗುಡ್ಡ ಕುಸಿತ ಸಂಭವಿಸಿದ ಪ್ರದೇಶದ ಸಮೀಪ ನದಿ ಇದೆ. ಮುಂದೆ  ಆ ನದಿಯು ಸಮುದ್ರ ಸೇರುತ್ತದೆ. ನೀರಿನ ಪ್ರವಾಹ (FLOOD) ವೇಗ 2 ನಾಟ್ಸ್‌ ಇದ್ದರಷ್ಟೇ ರಕ್ಷಣ ಕಾರ್ಯ ನಡೆಸಬಹುದು. ಆದರೆ, ಪ್ರವಾಹದ ವೇಗ 7 ನಾಟ್ಸ್‌ ಇದೆ. ಹೀಗಾಗಿ, ರಕ್ಷಣಾ ಕಾರ್ಯದಲ್ಲಿ ಒಂದಿಷ್ಟು ತೊಡಕು ಆಗಿದೆ ಎಂದು ತಿಳಿಸಿದರು.

ರಾಜ್ಯ ಹಾಗೂ ಕೇಂದ್ರದ ಮಾಹಿತಿ ದಾಖಲಿಸಿದ ಪೀಠ ರಾಜ್ಯ ಹಾಗೂ ಕೇಂದ್ರ ಪರಿಹಾರ ಕಾರ್ಯ ಮುಂದುವರೆಸಲು ಸೂಚನೆ ನೀಡಿದೆ.