ಶಿರಸಿ(SIRSI) : ಉತ್ತರಕನ್ನಡ ಜಿಲ್ಲೆಯ ಅಂಕೋಲಾದ ಶಿರೂರು ದುರಂತಕ್ಕೆ ಸಂಬಂಧಿಸಿ ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ ಅವರ ಪತ್ರಕ್ಕೆ ಪ್ರಧಾನಿ ನರೇಂದ್ರ ಮೋದಿ(PRIME MINISTER NARENDRA MODI) ಸ್ಪಂದಿಸಿದ್ದಾರೆ.
ಶಿರೂರು (Shiruru) ಹಾಗೂ ಉಳುವರೆ ಗ್ರಾಮಕ್ಕೆ ಭೇಟಿ ನೀಡಿದ ವಿಶ್ವೇಶ್ವರ ಹೆಗಡೆ ಕಾಗೇರಿ ಈ ಭಾಗದ ಸಂತ್ರಸ್ತರಿಗೆ ವಿಶೇಷ ಅನುದಾನ ನೀಡಬೇಕು ಎಂದು ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ ಕೋರಿದ್ದರು. ಈ ಸಂಬಂಧ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಸಲ್ಲಿಸಿದ್ದರು. ಈ ಹಿನ್ನಲೆಯಲ್ಲಿ ಪ್ರಧಾನಿ ಅವರು ಅಧಿಕಾರಿಗಳಿಂದ ವರದಿ ತರಿಸಿಕೊಂಡಿದ್ದು, ಪತ್ರಕ್ಕೆ ಪ್ರತಿಕ್ರಿಯಿಸಿದ್ದಾರೆ.
ಭಾರೀ ಪ್ರಮಾಣದ ಮಳೆಯಿಂದ ನೊಂದವರಿಗೆ ಪ್ರಧಾನ ಮಂತ್ರಿಗಳ ರಾಷ್ಟ್ರೀಯ ಪರಿಹಾರ ನಿಧಿ ಅಡಿ ಪರಿಹಾರ ಒದಗಿಸಲು ಅನುದಾನ ಮಂಜೂರಿಯಾಗಿದೆ. ಕೇಂದ್ರ ಸರ್ಕಾರ ವಿಶೇಷ ಪ್ರಕರಣ ಎಂದು ಪರಿಗಣಿಸಿದೆ. ಸಂತ್ರಸ್ತ ಕುಟುಂಬದ ಪರವಾಗಿ ಪ್ರಾರ್ಥಿಸುತ್ತೇನೆ. ಆ ಮೂಲಕ ವಿಶೇಷ ಪರಿಹಾರ ಬಿಡುಗಡೆ ಮಾಡುವ ಭರವಸೆಯನ್ನು ಅವರು ನೀಡಿದ್ದಾರೆ.
ಇದನ್ನು ಓದಿ : ಸಿಎಂ ರಾಜೀನಾಮೆಗೆ ಪ್ರತಿಭಟನೆ
I