ಇ ಸಮಾಚಾರ ಡಿಜಿಟಲ್ ನ್ಯೂಸ್ (esamachara digital news) ಅಂಕೋಲಾ(Ankola) : ತಾಲೂಕಿನ ಅವರ್ಸಾ ಗ್ರಾಮದಲ್ಲಿ ಆಸ್ಪತ್ರೆಯ ಔಷಧ ವಿಭಾಗದ ನೌಕರನೋರ್ವ ಆತ್ಮಹತ್ಯೆ ಮಾಡಿಕೊಂಡ ಹೃದಯವಿದ್ರಾವಕ ಘಟನೆ ನಡೆದಿದೆ.
ಕಾರವಾರದ ಪಿಕಳೆ ನರ್ಸಿಂಗ್ ಹೋಂನ(Karwar Pikle Nursing Home) ನೌಕರ ರಾಜೀವ ಪಿಕಳೆ ಅವರು ಡಬಲ್ ಬ್ಯಾರಲ್ ಗನ್‌ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಸುಮಾರು ಹದಿನೈದು ದಿನಗಳ ಹಿಂದೆ ಅವಧಿ ಮೀರಿದ ಮಾತ್ರೆ(Expired Medicine) ನೀಡಿದ ಆರೋಪಕ್ಕೆ ಸಂಬಂಧಿಸಿದ ವಿಡಿಯೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿತ್ತು. ಅಪರಿಚಿತ ರೋಗಿಯ ಸಂಬಂಧಿಯೊಬ್ಬರು ಮಾಡಿದ ಆ ವಿಡಿಯೋದಿಂದಾಗಿ ರಾಜೀವ ಪಿಕಳೆ ತೀವ್ರ ಮಾನಸಿಕ ಖಿನ್ನತೆಗೆ ಒಳಗಾಗಿದ್ದರು ಎನ್ನಲಾಗಿದೆ.
ವೈರಲ್ ವಿಡಿಯೋ ಹಿನ್ನೆಲೆಯಲ್ಲಿ ಇದು ಕಣ್ತಪ್ಪಿನಿಂದ ಉಂಟಾದ ಸಮಸ್ಯೆ ಎಂದು ರಾಜೀವ ಪಿಕಳೆ ಸಾರ್ವಜನಿಕವಾಗಿ ಕ್ಷಮೆಯಾಚಿಸಿದ್ದರು(Apology). ಆದರೂ ಮಾನಸಿಕ ಒತ್ತಡದಿಂದ ಹೊರಬರಲಾಗದೆ ಅವರು ತೀವ್ರವಾಗಿ ನೊಂದಿದ್ದರು ಎನ್ನಲಾಗಿದೆ.
ಇಂದು ಬೆಳಿಗ್ಗೆ ಅಂಕೋಲಾ ತಾಲೂಕಿನ ಹಟ್ಟಿಕೇರಿಯ(Ankola Hattikeri) ತಮ್ಮ ಮನೆಯಲ್ಲಿ ರಾಜೀವ ಪಿಕಳೆ ಆತ್ಮಹತ್ಯೆ ಮಾಡಿಕೊಂಡಿರುವುದು ಬೆಳಕಿಗೆ ಬಂದಿದೆ. ಸ್ಥಳಕ್ಕೆ ಅಂಕೋಲಾ ಪೊಲೀಸರು(Ankola Police) ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ.
