ಇ ಸಮಾಚಾರ ಡಿಜಿಟಲ್ ನ್ಯೂಸ್ (esamachara digital news) ಉಡುಪಿ(Udupi) : ಉಡುಪಿ ಜಿಲ್ಲೆಯಲ್ಲಿ ಮತ್ತೊಂದು ಶೂಟೌಟ್‌ ಘಟನೆ ನಡೆದಿದ್ದು, ಮುದರಂಗಡಿ ಗ್ರಾಮ ಪಂಚಾಯತ್‌ನ(mudarangadi GP) ಮಾಜಿ ಅಧ್ಯಕ್ಷ ಹಾಗೂ ಉದ್ಯಮಿ, ಸ್ಥಳೀಯ ಕಾಂಗ್ರೆಸ್ ಮುಖಂಡ(Congress Leader) ಡೇವಿಡ್ ಡಿಸೋಜಾ ಗುಂಡಿನ ದಾಳಿಗೆ ಬಲಿಯಾಗಿದ್ದಾರೆ.

ಶಿರ್ವ(Shirva) ವ್ಯಾಪ್ತಿಯಲ್ಲಿ ಕಾಂಗ್ರೆಸ್ ಮುಖಂಡನಾಗಿ ಗುರುತಿಸಿಕೊಂಡಿದ್ದ ಡೇವಿಡ್ ಡಿಸೋಜಾ ಮೇಲೆ ದುಷ್ಕರ್ಮಿಗಳು ಗುಂಡಿನ ದಾಳಿ ನಡೆಸಿದ್ದಾರೆ. ಗಂಭೀರವಾಗಿ ಗಾಯಗೊಂಡಿದ್ದ ಅವರನ್ನು ಆಸ್ಪತ್ರೆಗೆ ಕರೆದೊಯ್ಯುವ ಮಾರ್ಗಮಧ್ಯೆ ಮೃತಪಟ್ಟಿದ್ದಾರೆ ಎನ್ನಲಾಗಿದೆ. ಬಳಿಕ ಮೃತದೇಹವನ್ನು ಖಾಸಗಿ ಆಸ್ಪತ್ರೆಗೆ ರವಾನಿಸಲಾಗಿದೆ.

ಘಟನಾ ಸ್ಥಳಕ್ಕೆ ಪೊಲೀಸ್ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಶೂಟೌಟ್‌ಗೆ ನಿಖರ ಕಾರಣವೇನು ಎಂಬುದು ಇನ್ನೂ ಬಹಿರಂಗವಾಗಿಲ್ಲ. ವೈಯಕ್ತಿಕ ದ್ವೇಷ ಸೇರಿದಂತೆ ವಿವಿಧ ಆಯಾಮಗಳಲ್ಲಿ ಪೊಲೀಸರು ತನಿಖೆ(Police Investigation) ನಡೆಸುತ್ತಿದ್ದಾರೆ. ಹಂತಕರ ಪತ್ತೆಗಾಗಿ ಕಾರ್ಯಾಚರಣೆ ಆರಂಭಿಸಲಾಗಿದೆ.

ಡೇವಿಡ್ ಡಿಸೋಜಾ ಬಸ್ ಉದ್ಯಮ(Bus Business) ಸೇರಿದಂತೆ ಹಲವು ವ್ಯವಹಾರಗಳನ್ನು ನಡೆಸುತ್ತಿದ್ದರು. ಈ ಹಿಂದೆ ಶಿರ್ವ ಚರ್ಚ್‌ನ ಧರ್ಮಗುರು ಆತ್ಮಹತ್ಯೆ ಮಾಡಿಕೊಂಡ ಪ್ರಕರಣದಲ್ಲಿ ಆತ್ಮಹತ್ಯೆಗೆ ಪ್ರಚೋದನೆ ನೀಡಿದ ಆರೋಪದಡಿ ಡೇವಿಡ್ ಬಂಧನಕ್ಕೊಳಗಾಗಿದ್ದರು. ಹಲವು ವಿವಾದಗಳ ಹಿನ್ನೆಲೆಯಲ್ಲಿ ಈ ಹಿಂದೆ ಕೂಡ ಅವರು ಸುದ್ದಿಯಾಗಿದ್ದರು.

ಇನ್ನು, ಗುಂಡಿನ ದಾಳಿಗೂ ಮುನ್ನ ಡೇವಿಡ್ ಡಿಸೋಜಾ ಸಾಮಾಜಿಕ ಜಾಲತಾಣದಲ್ಲಿ(Social Media) ಹಲವು ವಾಟ್ಸಾಪ್ ಸ್ಟೇಟಸ್‌ಗಳನ್ನು(WhatsApp Status) ಹಾಕಿಕೊಂಡಿದ್ದರು ಎನ್ನಲಾಗಿದೆ. ಪ್ರಧಾನಿ ನರೇಂದ್ರ ಮೋದಿ(PM Narendra Modi) ಅವರನ್ನು ಟೀಕಿಸುವ ಹಾಗೂ ವ್ಯಂಗ್ಯ ಮಾಡುವ ಪೋಸ್ಟ್‌ಗಳು ಮತ್ತು ರೀಲ್ಸ್‌ಗಳನ್ನು ಅವರು ಸ್ಟೇಟಸ್‌ನಲ್ಲಿ ಹಂಚಿಕೊಂಡಿದ್ದರು ಎನ್ನಲಾಗಿದೆ.

ಘಟನೆಯ ಸುದ್ದಿ ತಿಳಿಯುತ್ತಿದ್ದಂತೆ ಮಾಜಿ ಸಚಿವ ವಿನಯ್ ಕುಮಾರ್ ಸೊರಕೆ ಸೇರಿದಂತೆ ಹಲವರು ಆಸ್ಪತ್ರೆಗೆ ಭೇಟಿ ನೀಡಿ ಡೇವಿಡ್ ಡಿಸೋಜಾ ಅವರ ಮೃತದೇಹದ ಅಂತಿಮ ದರ್ಶನ ಪಡೆದರು.

ಶೂಟೌಟ್‌ನ ಹಿಂದಿನ ನಿಖರ ಕಾರಣ, ದಾಳಿಕೋರರ ಗುರುತು ಹಾಗೂ ದಾಳಿಯ ಉದ್ದೇಶದ ಬಗ್ಗೆ ಪೊಲೀಸ್ ತನಿಖೆ ಮುಂದುವರಿದಿದೆ.