ಶಿರಸಿ : ಉತ್ತರಕನ್ನಡ ಜಿಲ್ಲೆಯ ಮಲೆನಾಡು ತಾಲೂಕುಗಳಲ್ಲಿ ಇಂದು ಮಳೆಯಾಗಿದೆ. ಶಿರಸಿ ಹಾಗೂ ಸಿದ್ದಾಪುರ ಭಾಗದಲ್ಲಿ ವರುಣ ಆರ್ಭಟಿಸಿದ್ದಾನೆ
ಮಧ್ಯಾಹ್ನ ವೇಳೆ ಗುಡುಗು ಸಹಿತ ಮಳೆ ಸುರಿದಿದ್ದು ಇಳೆ ತಂಪಾಗಿದೆ. ಶಿರಸಿ ನಗರದ ಸಹ್ಯಾದ್ರಿ ಕಾಲೋನಿಯಲ್ಲಿ ಮರ ಹಾಗು ವಿದ್ಯುತ್ ಕಂಬ ಮುರಿದು ಬಿದ್ದಿದೆ. ಪರಿಣಾಮವಾಗಿ ರಸ್ತೆ ಸಂಪೂರ್ಣ ಬ್ಲಾಕ್ ಆಗಿದೆ. 10 ಕ್ಕೂ ಹೆಚ್ಚಿನ ಮರ ಮತ್ತು ವಿದ್ಯುತ್ ಕಂಬ ನೆಲಕ್ಕುರುಳಿದೆ.
ಕುಮಟಾದಲ್ಲೂ ಗುಡುಗು ಸಹಿತ ಮಳೆಯಾಗಿದ್ದು ಜನಜೀವನ ಅಸ್ತವ್ಯಸ್ತವಾಗಿದೆ. ಇನ್ನೂ ಭಟ್ಕಳ, ಹೊನ್ನಾವರ, ಅಂಕೋಲಾ, ಕಾರವಾರ ಭಾಗದಲ್ಲಿ ಮೋಡ ಕವಿದ ವಾತಾವರಣವಿದ್ದು ಮಳೆ ಸುರಿಯುವ ಸಾಧ್ಯತೆ ಇದೆ. ಮೋಡದ ವಾತಾವರಣ ಇದ್ದುದರಿಂದ ಸೆಕೆಯಿಂದ ಬೇಸತ್ತಿದ್ದ ಜನರು ನಿಟ್ಟುಸಿರು ಬಿಟ್ಟಿದ್ದಾರೆ. ರಾತ್ರಿ ಮಳೆ ಬರುವಿಕೆಗಾಗಿ ಕಾಯುತ್ತಿದ್ದಾರೆ.