ಇ ಸಮಾಚಾರ ಡಿಜಿಟಲ್ ನ್ಯೂಸ್(esamachara digital news) ಕಾರವಾರ(Karwar) : ನಿವೃತ್ತ ಪೊಲೀಸ್ ಅಧಿಕಾರಿಯ ಪತ್ನಿ, ಸಾಮಾಜಿಕ ಕಾರ್ಯಕರ್ತ ಸೂರಜ್ ಕುರುಮಕರ್ ಅವರ ತಾಯಿ ಸುಮನಾ ಕುರುಮಕರ್ (70) ಅವರು ಭಾನುವಾರದಂದು ಹೃದಯಾಘಾತದಿಂದ ನಿಧನರಾದರು. ಅವರು ಇಬ್ಬರು ಪುತ್ರರು, ಓರ್ವ ಪುತ್ರಿ ಹಾಗೂ ಅಪಾರ ಬಂಧುಗಳನ್ನು ಅಗಲಿದ್ದಾರೆ.
ದೇವಳಿವಾಡಾ ಪದ್ಮನಾಭನಗರ ಸ್ವಗೃಹದಲ್ಲಿ ಭಾನುವಾರ ಬೆಳಗಿನ ಜಾವ 5 ಗಂಟೆ ಸುಮಾರಿಗೆ ಅವರಿಗೆ ಎದೆ -ನೋವು ಕಾಣಿಸಿಕೊಂಡಿತ್ತು. ತಕ್ಷಣ ಅವರನ್ನು ಕಾರವಾರ ಮೆಡಿಕಲ್ ಕಾಲೇಜು ಆಸ್ಪತ್ರೆಗೆ ದಾಖಲಿಸಲಾಯಿತು. ಆದರೆ, ಚಿಕಿತ್ಸೆ ಫಲಕಾರಿಯಾಗದೆ ಬೆಳಿಗ್ಗೆ 7.30 ಗಂಟೆಗೆ ಇಹಲೋಕ ತ್ಯಜಿಸಿದರು.
ಸುಮನಾ ಅವರ ಪತಿ ಮಧುಕರ್ ಕುರುಮ್ಕರ್ ಅವರು ಪೊಲೀಸ್ ಅಧಿಕಾರಿಯಾಗಿ ಸೇವೆ ಸಲ್ಲಿಸಿದ್ದರು. ಶಿರಸಿ ಹೊಸ ಮಾರುಕಟ್ಟೆ , ಕಾರವಾರ ಡಿ.ಸಿ.ಆರ್.ಬಿ. ಪಿಎಸ್ಐ ಆಗಿ 5 ವರ್ಷ, ಕಾರವಾರ ರೈಲ್ವೆ-ಪೊಲೀಸ್ ಠಾಣೆ ಕುಮಟಾ, ಜೊಯಿಡಾ ಸೇರಿದಂತೆ ವಿವಿಧೆಡೆ ಸೇವೆ ಸಲ್ಲಿಸಿ ನಿಷ್ಠಾವಂತ ಅಧಿಕಾರಿ ಎಂಬ ಹೆಸರು ಪಡೆದಿದ್ದರು. ಅವರು 2019 ರಲ್ಲಿ ಇಹಲೋಕ ತ್ಯಜಿಸಿದ್ದರು.
ಮೃತರ ಅಂತ್ಯಕ್ರಿಯೆಯು ಕಾರವಾರದ ದಿವೇಕರ್ ಕಾಲೇಜ್ ಸಮೀಪದ ರುದ್ರಭೂಮಿಯಲ್ಲಿ ನೆರವೇರಿತು. ಅಂತ್ಯಕ್ರಿಯೆಯಲ್ಲಿ ನೂರಾರು ಜನರು. ಪಾಲ್ಗೊಂಡು ಅಂತಿಮ ನಮನ ಸಲ್ಲಿಸಿದರು.
ಸುಮನಾ ಅವರ ನಿಧನಕ್ಕೆ ಕೊಂಕಣ ಖಾರ್ವಿ ಸಮಾಜದ ಮುಖಂಡರು ಸಂತಾಪ ವ್ಯಕ್ತಪಡಿಸಿದ್ದಾರೆ.