ಇ ಸಮಾಚಾರ ಡಿಜಿಟಲ್ ನ್ಯೂಸ್ (esamachara digital news): ಕಾರವಾರ(Karwar):  ಅಂಕೋಲಾ ತಾಲೂಕಿನ ಅವರ್ಸಾ ಗ್ರಾಮದಲ್ಲಿ(Ankola Aversa village) ಆಸ್ಪತ್ರೆ ನೌಕರ ಆತ್ಮಹತ್ಯೆ ಮಾಡಿಕೊಂಡ  ಪ್ರಕರಣಕ್ಕೆ ಸಂಬಂಧಿಸಿ ಮೂವರನ್ನ ಅಂಕೋಲಾ ಪೊಲೀಸರು(Ankola Police) ಬಂಧಿಸಿದ್ದಾರೆ.

ನಿನ್ನೆ ಬೆಳಿಗ್ಗೆ ಕಾರವಾರದ ಪಿಕಳೆ ನರ್ಸಿಂಗ್ ಹೋಮ್ ನ(Pikale Nursing home) ಔಷಧ ವಿತರಕ ರಾಜೀವ ಪಿಕಳೆ ಆತ್ಮಹತ್ಯೆ ಮಾಡಿಕೊಂಡಿದ್ದರು.  ಸಾಮಾಜಿಕ ಜಾಲತಾಣದಲ್ಲಿ(Social Media) ಅವರ ವಿಡಿಯೋವನ್ನು ವೈರಲ್ ಮಾಡಿದ ಆರೋಪದ ಮೇಲೆ ಮೂವರನ್ನು  ಬಂಧಿಸಲಾಗಿದೆ.

ಬಂಧಿತರನ್ನು ಕಾರವಾರ ತಾಲೂಕಿನ ವೈಲವಾಡ ಗ್ರಾಮದ ಸುಭಾಷ್, ಹರಿಶ್ಚಂದ್ರ ಹಾಗೂ ಅನಿಲ್ ಎಂದು ಗುರುತಿಸಲಾಗಿದೆ. ಉತ್ತರಕನ್ನಡ ಜಿಲ್ಲೆಯ ಕಾರವಾರ ಜಿಲ್ಲೆಯ ಈ ಘಟನೆ ಇತ್ತೀಚಿನ ದಿನಗಳಲ್ಲಿ ವ್ಯಾಪಕ ಚರ್ಚೆಗೆ ಕಾರಣವಾಗಿತ್ತು.

ನಿನ್ನೆ ಅಂಕೋಲಾ ತಾಲೂಕಿನ ಅವರ್ಸಾ ಗ್ರಾಮದಲ್ಲಿ ರಾಜು ಪಿಕಳೆ ಶೂಟ್ ಮಾಡಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದರು. ಕೆಲ ದಿನಗಳ ಹಿಂದೆ, ರಾಜು ಪಿಕಳೆ ಆಸ್ಪತ್ರೆಯಲ್ಲಿ ಇದ್ದ ವೇಳೆ ಅವಧಿ ಮೀರಿದ ಮಾತ್ರೆ ನೀಡಲಾಗಿದೆ ಎಂದು ಪ್ರಶ್ನಿಸಿದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿತ್ತು.
ಈ ವಿಡಿಯೋ ವೈರಲ್ ಆದ ಬಳಿಕ ರಾಜು ಪಿಕಳೆ ಸಾರ್ವಜನಿಕವಾಗಿ ಕ್ಷಮೆ ಕೇಳಿದ್ದರು. ಕಣ್ತಪ್ಪಿನಿಂದ ಈ ಘಟನೆ ನಡೆದಿದೆ ಎಂದು ಹೇಳಿ ಅವರು ಕ್ಷಮೆಯಾಚನೆ ಮಾಡಿಕೊಂಡಿದ್ದರು. ಆದರೂ ಕೂಡ ವಿಡಿಯೋ ನಿರಂತರವಾಗಿ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದ್ದರಿಂದ ರಾಜು ಮಾನಸಿಕವಾಗಿ ತೀವ್ರ ಬೇಸರಕ್ಕೆ ಒಳಗಾಗಿದ್ದರು ಎಂದು ತಿಳಿದುಬಂದಿದೆ.

ಈ ಹಿನ್ನೆಲೆಯಲ್ಲಿ ಅಂಕೋಲಾ ಪೊಲೀಸ್ ಠಾಣೆಯ(Ankola Police Station) ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಿ, ವಿಡಿಯೋ ವೈರಲ್ ಮಾಡಿದ ಆರೋಪದ ಮೇಲೆ ಮೂವರನ್ನು ಬಂಧಿಸಿದ್ದಾರೆ. ಪ್ರಕರಣದ ಬಗ್ಗೆ ಹೆಚ್ಚಿನ ತನಿಖೆ ಮುಂದುವರಿದಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಇದನ್ನು ಓದಿ : ಸೋಡಿಗದ್ದೆ ಜಾತ್ರೆಗೆ ಚಾಲನೆ. ಇಂದು ಭಕ್ತರಿಂದ ಕೆಂಡ ಸೇವೆ.

ಡಬಲ್ ಬ್ಯಾರಲ್ ಗನ್‌ನಿಂದ ಶೂಟ್ ಮಾಡಿಕೊಂಡು ಪ್ರಸಿದ್ದ ಆಸ್ಪತ್ರೆ ನೌಕರ ಆತ್ಮತ್ಯೆ*