ಕಾರವಾರ (KARWAR): ಪ್ರಧಾನಮಂತ್ರಿ ನರೇಂದ್ರ ಮೋದಿ(NARENDRA MODI) ಅವರ 74 ನೇ ಜನ್ಮ ದಿನದ ಪ್ರಯುಕ್ತ ಇಂದು ಉತ್ತರಕನ್ನಡ ಜಿಲ್ಲೆಯ ವಿವಿಧ ಭಾಗಗಳಲ್ಲಿ ದೇವಾಲಯದಲ್ಲಿ ಪೂಜೆ ಸಲ್ಲಿಸಲಾಯಿತು.
ಮೋದಿಯವರ ಆರೋಗ್ಯ, ಆಯುಷ್ಯ ವೃದ್ಧಿಸುವಂತೆ ಕಾರವಾರದ ಶ್ರೀ ಸಿದ್ದಿವಿನಾಯಕ ದೇವಾಲಯದಲ್ಲಿ ಬಿಜೆಪಿ(BJP) ಕಾರ್ಯಕರ್ತರು ಪ್ರಾರ್ಥಿಸಿದರು. ರಾಜ್ಯ ಬಿಜೆಪಿ ಉಪಾಧ್ಯಕ್ಷೆ ರೂಪಾಲಿ ನಾಯ್ಕ (ROOPALI NAIK) ನೇತೃತ್ವದಲ್ಲಿ ದೇವರಿಗೆ ವಿಶೇಷ ಸಂಕಲ್ಪದೊಂದಿಗೆ ಪೂಜೆ ನೀಡಲಾಯಿತು. ಈ ಸಂದರ್ಭದಲ್ಲಿ ವಿಧಾನ ಪರಿಷತ್ ಸದಸ್ಯ ಗಣಪತಿ ಉಳ್ವೆಕರ್, ನಗರಸಭೆ ಅಧ್ಯಕ್ಷ ರವಿರಾಜ್ ಅಂಕೋಲೆಕರ್ ಸೇರಿದಂತೆ ಇತರರು ಉಪಸ್ಥಿತರಿದ್ದರು.
ದಕ್ಷ ಆಡಳಿತಗಾರ, ಸಮರ್ಥ ನಾಯಕತ್ವ, ಸ್ಪಂದನಶೀಲ ಪ್ರಧಾನಿಯಾಗಿ ಜಗತ್ತೇ ಮೆಚ್ಚಿದ ವಿಶ್ವನಾಯಕನಾಗಿ, ದಣಿವರಿಯದೆ ದೇಶದ ಅಭಿವೃದ್ಧಿಗಾಗಿ ಶ್ರಮಿಸುತ್ತಿರುವ ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟು ಹಬ್ಬದ ಪ್ರಯುಕ್ತ ಬಿಜೆಪಿ ಭಟ್ಕಳ ಮಂಡಲದ ವತಿಯಿಂದ ಶ್ರೀ ಚನ್ನಪಟ್ಟಣ(CHENNAPATTANA) ಹನುಮಂತ ದೇವಸ್ಥಾನದಲ್ಲಿ ಶ್ರೀ ದೇವರಿಗೆ ಪೂಜೆಯನ್ನು ಸಲ್ಲಿಸಲಾಯಿತು. ದೇಶದ ಅಭಿವೃದ್ಧಿಯ ಹರಿಕಾರ ಮೋದಿಜಿಯವರ ಉನ್ನತಿಗಾಗಿ, ಆಯುರಾರೋಗ್ಯ, ಶ್ರೇಯೋಭಿವೃದ್ಧಿಗಾಗಿ ಪ್ರಾರ್ಥನೆ ಸಲ್ಲಿಸಲಾಯಿತು.
ಈ ಸಂದರ್ಭದಲ್ಲಿ ಬಿಜೆಪಿ ಮಂಡಲ ಅಧ್ಯಕ್ಷ ಲಕ್ಷ್ಮೀನಾರಾಯಣ ನಾಯ್ಕ, ಹಿಂದುಳಿದ ಮೋರ್ಚಾ ರಾಜ್ಯ ಉಪಾಧ್ಯಕ್ಷ ಈಶ್ವರ ನಾಯ್ಕ, ಜಿಲ್ಲಾ ಕಾರ್ಯದರ್ಶಿ ಶ್ರೀಕಾಂತ್ ನಾಯ್ಕ ಹಾಗೂ ಸುಬ್ರಾಯ ದೇವಾಡಿಗ, ಮಂಡಲ ಹಿಂದುಳಿದ ಮೋರ್ಚಾ ಅಧ್ಯಕ್ಷ ಉಮೇಶ್ ನಾಯ್ಕ, ಯುವ ಮೋರ್ಚಾ ಅಧ್ಯಕ್ಷ ಸುನೀಲ್ ಕಾಮತ್, ಮಂಡಲ ಪ್ರಧಾನ ಕಾರ್ಯದರ್ಶಿ ಶ್ರೀನಿವಾಸ ನಾಯ್ಕ, ಶ್ರೀಧರ ನಾಯ್ಕ, ಪಕ್ಷದ ಪ್ರಮುಖರಾದ ರವಿ ನಾಯ್ಕ ಜಾಲಿ, ಸುರೇಶ ನಾಯ್ಕ, ಮೋಹನ್ ನಾಯ್ಕ, ಗಣಪತಿ ದೇವಾಡಿಗ ಮೊದಲಾದವರು. ಉಪಸ್ಥಿತರಿದ್ದರು.
ಇದನ್ನು ಓದಿ : ಪತಿಯ ಸಂಬಂಧಿಯ ಪ್ರಾಣಕ್ಕೆ ಪ್ರಾಣ ಕೊಟ್ಟ ಮಹಿಳೆ