ಇ ಸಮಾಚಾರ ಡಿಜಿಟಲ್  ನ್ಯೂಸ್ (esamachara  digital news) ಕಾರವಾರ(Karwar) : ರಾಜ್ಯಾದ್ಯಂತಮಾರ್ಚ್ 18 ರಿಂದ ಏಪ್ರಿಲ್ 2 ರ ವರೆಗೆ ಎಸ್ಎಸ್ಎಲ್ಸಿ  ಪರೀಕ್ಷೆ(SSLC Examination) ನಡೆಯಲಿದೆ. ಉತ್ತರಕನ್ನಡ(Uttarakannada) ಜಿಲ್ಲೆ ಸೇರಿ ಬೆಳಗಾವಿ(Belagavi) ವಿಭಾಗದ 9 ಶೈಕ್ಷಣಿಕ ಜಿಲ್ಲೆಗಳಲ್ಲಿ ವ್ಯಾಪಕ ಮತ್ತು ಅಗತ್ಯ ಸಿದ್ದತೆಯನ್ನು ಕೈಗೊಳ್ಳಲಾಗಿದೆ.

ಉತ್ತರಕನ್ನಡ ಜಿಲ್ಲೆಯ ಕಾರವಾರ(Karwar) ಮತ್ತು ಶಿರಸಿ(Sirsi) ಶೈಕ್ಷಣಿಕ  ಜಿಲ್ಲೆಗಳ 73 ಕೇಂದ್ರಗಳಲ್ಲಿ ಪರೀಕ್ಷೆ ನಡೆಯಲಿದೆ. ಒಟ್ಟು 19,988 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಲಿದ್ದಾರೆ. ಪರೀಕ್ಷೆ ಕುರಿತಂತೆ ವಿದ್ಯಾರ್ಥಿಗಳಿಗೆ ಈ ಬಾರಿ ಶಿಕ್ಷಣ ಇಲಾಖೆ(Education Department) ವತಿಯಿಂದ ಉತ್ತಮ ರೀತಿಯಲ್ಲಿ ತರಬೇತಿ ನೀಡಿದ್ದು, ಪರೀಕ್ಷೆಗೆ ಹಾಜರಾದ ಪ್ರತಿಯೊಬ್ಬ ವಿದ್ಯಾರ್ಥಿಯೂ ಉತ್ತೀರ್ಣರಾಗುವ ರೀತಿಯಲ್ಲಿ ಅವರನ್ನು ಸಿದ್ದಗೊಳಿಸಲಾಗಿದ್ದು, ಪರೀಕ್ಷಾ ಹಾಜರಾತಿಯು ಶೇ.100 ಆದಲ್ಲಿ ಫಲಿತಾಂಶವು ಶೇ.100 ಬರಬಹುದಾದ ಎಲ್ಲಾ ಸಾಧ್ಯತೆಗಳಿರುವ ಕಾರಣ, ಯಾವುದೇ ವಿದ್ಯಾರ್ಥಿ ಗೈರು ಹಾಜರಾಗದಂತೆ ವಿದ್ಯಾರ್ಥಿಗಳಿಗೆ ಅಗತ್ಯವಿರುವ ಮೂಲಭೂತ ಸೌಕರ್ಯಗಳನ್ನು ಒದಗಿಸುವಂತೆ ಜಿಲ್ಲಾಧಿಕಾರಿ  ಕೆ ಲಕ್ಷ್ಮೀಪ್ರಿಯಾ(DC K Lakshmipriya) ತಿಳಿಸಿದ್ದಾರೆ.

ಆಯಾ ಜಿಲ್ಲೆಗಳಲ್ಲಿ ಪರೀಕ್ಷೆಯನ್ನು ವ್ಯವಸ್ಥಿತವಾಗಿ ನಡೆಸುವಲ್ಲಿ ಉಪನಿರ್ದೇಶಕರು(ಆಡಳಿತ)ರವರು ಪರೀಕ್ಷೆಯ ಪಾವಿತ್ರ‍್ಯತೆಯನ್ನು ಕಾಪಾಡಿಕೊಂಡು ಯಾವುದೇ ರೀತಿಯ ಪರೀಕ್ಷಾ ಅವ್ಯವಹಾರ ಹಾಗೂ ಇನ್ನಿತರೆ ಅಹಿತಕರ ಘಟನೆಗಳು ನಡೆಯದಂತೆ ಸಕಲ ಸಿದ್ದತೆಗಳನ್ನು ಕೈಗೊಂಡಿದ್ದಾರೆ. ಪರೀಕ್ಷಾ ಕೇಂದ್ರಗಳಲ್ಲಿ ಶುದ್ಧ ಕುಡಿಯುವ ನೀರು, ಶೌಚಾಲಯಗಳು, ಪರೀಕ್ಷಾ ಕೊಠಡಿಗಳಿಗೆ ವಿದ್ಯಾರ್ಥಿಗಳು, ಸಿಬ್ಬಂದಿಗಳಿಗೆ ಮಾತ್ರ ಪ್ರವೇಶ ನೀಡಲಾಗಿದೆ. ಸಿಬ್ಬಂದಿ ಹೊರತುಪಡಿಸಿ ಅನ್ಯ ಅಭ್ಯರ್ಥಿಗಳಿಗೆ ಪ್ರವೇಶ ನಿಷೇಧಿಸಲಾಗಿದೆ ಹಾಗೂ ಪರೀಕ್ಷಾ ಕೇಂದ್ರಗಳ ಸುತ್ತ 200 ಮೀಟರ್ ಪ್ರದೇಶವನ್ನು ನಿಷೇಧಿತ ಪ್ರದೇಶವೆಂದು(District Area) ಪ್ರತಿಬಂಧಕಾಜ್ಞಾನೆಯನ್ನು ಜಿಲ್ಲಾಧಿಕಾರಿಗಳು ಜಾರಿಗೊಳಿಸಿರುತ್ತಾರೆ. ಪರೀಕ್ಷಾ ಸಮಯದಲ್ಲಿ ಅಕ್ರಮ ಎಸಗುವರಿಗೆ ಕಠಿಣ ಕ್ರಮ ಹಾಗೂ ಕ್ರಿಮಿನಲ್ ಕೇಸ್(Criminal Case) ದಾಖಲಿಸಲು ಅವಕಾಶ ಕಲ್ಪಿಸಲಾಗಿದೆ. ಪರೀಕ್ಷಾ ಸಮಯದಲ್ಲಿ ಅಕ್ರಮ ಎಸಗುವರಿಗೆ ಕಠಿಣ ಕ್ರಮ ಹಾಗೂ ಕ್ರಿಮಿನಲ್ ಕೇಸ್ ದಾಖಲಿಸಲು ಅವಕಾಶ ಕಲ್ಪಿಸಲಾಗಿದೆ ಎಂದು‌ ಶಾಲಾ ಶಿಕ್ಷಣ ಇಲಾಖೆಯ ಅಪರ ಆಯುಕ್ತ ಡಾ. ಈಶ್ವರ ಉಳ್ಳಾಗಡ್ಡಿ ತಿಳಿಸಿದ್ದಾರೆ.

ಪರೀಕ್ಷಾ ಕೇಂದ್ರಗಳಲ್ಲಿ ವೆಬ್ಕಾಸ್ಟಿಂಗನ್ನು(Webcasting) ಕಡ್ಡಾಯಗೊಳಿಸಲಾಗಿದ್ದು, ಪರೀಕ್ಷಾ ಕೇಂದ್ರದ ಎಲ್ಲಾ ಕೊಠಡಿಗಳಲ್ಲಿ ಸಿಸಿಟಿವಿಯನ್ನು ಅಳವಡಿಸಲಾಗಿದ್ದು, ಆಯಾ ಜಿಲ್ಲೆಯಲ್ಲಿ ಜಿಲ್ಲಾಧಿಕಾರಿಗಳು/ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳ ಕಚೇರಿಯಲ್ಲಿ ಪ್ರತಿ ಕೇಂದ್ರದ ವೀಕ್ಷಣೆ ನಡೆಯುತ್ತದೆ. ಪ್ರತಿ ಪರೀಕ್ಷಾ ಕೇಂದ್ರದಲ್ಲಿ ಪರೀಕ್ಷೆಯನ್ನು ಪಾರದರ್ಶಕವಾಗಿ ನಡೆಸಲು ಮೊಬೈಲ್ ಫೋನ್ ಸ್ವಾಧಿನಾಧಿಕಾರಿಯನ್ನು ನೇಮಿಸಲಾಗಿದೆ. ಪರೀಕ್ಷಾ ಅವಧಿಯಲ್ಲಿ ಅಭ್ಯರ್ಥಿಯ ಮೊಬೈಲ್ ನಿಂದ ವಾಟ್ಸಪ್ ಅಥವಾ ಇತರೆ ಯಾವುದೇ ಸಾಮಾಜಿಕ ಜಾಣತಾಣಗಳ(Social Media) ಮುಖಾಂತರ ಪ್ರಶ್ನೆಪತ್ರಿಕೆ ಬಹಿರಂಗಗೊಂಡಲ್ಲಿ ಸಂಬಂಧಿಸಿದ ಪರೀಕ್ಷಾ ಕೊಠಡಿಯ ಮೇಲ್ವಿಚಾರಕರು, ಮುಖ್ಯ ಅಧೀಕ್ಷಕರು ಜವಾಬ್ದಾರನ್ನಾಗಿ ಮಾಡಲಾಗುವುದು.

ಪರೀಕ್ಷಾ ಕೇಂದ್ರಗಳಿಗೆ ಬರುವ ವಿದ್ಯಾರ್ಥಿಗಳಿಗೆ ರಾಜ್ಯ ಸಾರಿಗೆ ಸಂಸ್ಥೆಯು(,KSRTC) ಪ್ರಯಾಣದಲ್ಲಿ ಉಚಿತ ಪ್ರಯಾಣದ ವ್ಯವಸ್ಥೆ ಕಲ್ಪಿಸಲಾಗಿದ್ದು, ಪ್ರಶ್ನೆ ಪತ್ರಿಕೆಗಳ ವಿತರಣೆ, ಪ್ರತಿ ಕೊಠಡಿಯಲ್ಲಿ ಸಿಸಿಟಿವಿ ವೀಕ್ಷಣೆ ಹಾಗೂ ಜಿಲ್ಲಾ, ರಾಜ್ಯ ಹಂತದಿಂದ ಪ್ರತಿ ಕೇಂದ್ರದ ಮೇಲೆ ಕಣ್ಣಗಾವಲು ಇರುತ್ತದೆ.

ಇದನ್ನು ಓದಿ ‌: ಕಾರವಾರ ಮೆಡಿಕಲ್ ವಿದ್ಯಾರ್ಥಿಗಳ ಸರಣಿ ಸಾವು. ಬೈಕ್‌ ಅಪಘಾತದಲ್ಲಿ ಓರ್ವ ಸಾವು, ಇನ್ನೋರ್ವ ಗಂಭೀರ.

ಇಲೆಕ್ಟ್ರಿಕ್ ವಸ್ತುಗಳನ್ನು ‌ಕದ್ದ ಕಳ್ಳರಿಗೆ ಪೊಲೀಸರ ಶಾಕ್.

ಮಿಸ್ ಕಾರವಾರ’ ಆಗಿ ಕಾಂಚನಾ ಗೌಡ. ಕೋಲ್ಕತ್ತಾ ಮೂಲದ ಸುತಪಾ ರನ್ನರ್ ಅಪ್.