ಇ ಸಮಾಚಾರ ಡಿಜಿಟಲ್ ನ್ಯೂಸ್ (esamachara digital news)ಆಂಧ್ರಪ್ರದೇಶ(Andrapradesh) : ಕಾರ್ತಿಕ ಏಕಾದಶಿಯ ದಿನವಾದ ಇಂದು ಆಂಧ್ರಪ್ರದೇಶದ (Andrapradesh) ಶ್ರೀಕಾಕುಳಂ ದೇವಸ್ಥಾನದಲ್ಲಿ (Shrikakulam) ಭಕ್ತರ ಒತ್ತಡದಿಂದಾಗಿ ಕಾಲ್ತುಳಿತ ದುರಂತ(Stampede Tragedy) ಸಂಭವಿಸಿದೆ. ಘಟನೆಯಲ್ಲಿ ಸುಮಾರು10 ಜನರು ಮೃತಪಟ್ಟಿದ್ದಾಗಿ ತಿಳಿದುಬಂದಿದೆ.
ಬೆಳಿಗ್ಗೆ ಹನ್ನೊಂದುವರೆ ಸುಮಾರಿಗೆ ದುರಂತ ಸಂಭವಿಸಿದ್ದು, ಮಹಿಳೆಯರು, ಮಕ್ಕಳು ಸಾವನ್ನಪ್ಪಿದ್ದು ಹಲವು ಭಕ್ತರು ಗಂಭೀರವಾಗಿ ಗಾಯಗೊಂಡಿದ್ದಾರೆ. ಘಟನೆಯಿಂದಾಗಿ ಸಾವಿನ ಸಂಖ್ಯೆ ಇನ್ನಷ್ಟು ಹೆಚ್ಚಾಗುವ ಸಾಧ್ಯತೆ ಇದೆ.
ಶ್ರೀಕಾಕುಳಂನ ಕಾಶಿಬುಗ್ಗ ವೆಂಕಟೇಶ್ವರ ದೇವಸ್ಥಾನ(Kashibugga Vemkateshwar Temple) ನಿರ್ಮಾಣ ಹಂತದಲ್ಲಿದೆ. ದೇಗುಲ ನಿರ್ಮಾಣದ ನಂತರದ ಮೊದಲ ಕಾರ್ತಿಕ ಏಕಾದಶಿ ಆಗಿದ್ದರಿಂದ ಇಂದು ವಿಶೇಷ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ಹೀಗಾಗಿ ನಿರೀಕ್ಷೆಗೂ ಮೀರಿ ಭಕ್ತರು ದೇವಾಲಯಕ್ಕೆ ಆಗಮಿಸಿದ್ದಾರೆ. ದೇವಸ್ಥಾನದ ಮೆಟ್ಟಿಲುಗಳನ್ನು ಹತ್ತಿ ಮುಂದಕ್ಕೆ ಸಾಗುವಾಗ ನೂಕುನುಗ್ಗಲು ಉಂಟಾಗಿ ಕಾಲ್ತುಳಿತ ಸಂಭವಿಸಿದೆ.
ದುರಂತದ ಬಗ್ಗೆ ಸಾಮಾಜಿಕ ಜಾಲತಾಣ ‘ಎಕ್ಸ್’ನಲ್ಲಿ ಪೋಸ್ಟ್ ಮಾಡಿರುವ ಆಂಧ್ರಪ್ರದೇಶ ಮುಖ್ಯಮಂತ್ರಿ ಎನ್. ಚಂದ್ರಬಾಬು ನಾಯ್ಡು(Andrapradesh CM N Chandrababu Naidu) ಅವರು ಕಾಲ್ತುಳಿತ(Stampede) ದುರಂತ ನೋವನ್ನುಂಟು ಮಾಡಿದೆ. ಅಹಿತಕರ ಘಟನೆಯಲ್ಲಿ ಭಕ್ತಾಧಿಗಳು ಪ್ರಾಣ ಕಳೆದುಕೊಂಡಿರುವುದು ದುಃಖದ ಸಂಗತಿಯಾಗಿದೆ. ಮೃತರ ಕುಟುಂಬಗಳಿಗೆ ಸಂತಾಪ ಸೂಚಿಸುತ್ತೇನೆ’ ಎಂದಿದ್ದಾರೆ. ಕಾಲ್ತುಳಿತದಲ್ಲಿ ಗಾಯಗೊಂಡಿರುವವರಿಗೆ ಉತ್ತಮ ಚಿಕಿತ್ಸೆ ಒದಗಿಸುವ ಭರವಸೆ ನೀಡಿದ್ದಾರೆ. ಘಟನಾ ಸ್ಥಳದ ಮೇಲ್ವಿಚಾರಣೆಗೆ ಅಧಿಕಾರಿಗಳು ಹಾಗೂ ಸ್ಥಳೀಯ ನಾಯಕರಿಗೆ ಸೂಚನೆ ನೀಡಿದ್ದಾರೆ.
ಇದನ್ನು ಓದಿ : ರಾಜ್ಯೋತ್ಸವ ಸಂದರ್ಭದಲ್ಲಿ ಜಿಲ್ಲಾ ಕ್ರೀಡಾಂಗಣದಲ್ಲಿ ತಪ್ಪಿದ ಅನಾಹುತ.
ಸಂಸದ ಕಾಗೇರಿ, ಶಾಸಕ ಹೆಬ್ಬಾರ್ ನೇತೃತ್ವದಲ್ಲಿ ನಿಯೋಗ ಸಿಎಂ ಭೇಟಿ. ಶರಾವತಿ, ನದಿ ತಿರುವು ಯೋಜನೆ ಬಗ್ಗೆ ಚರ್ಚೆ.

