ಇ ಸಮಾಚಾರ ಡಿಜಿಟಲ್ ನ್ಯೂಸ್ (esamachara digital news)ಬೆಂಗಳೂರು (Bangalore): ಐಪಿಎಲ್ ಕ್ರಿಕೆಟ್ ನಲ್ಲಿ ಆರ್ಸಿಬಿ ಗೆಲುವು ಸಾಧಿಸಿದ ಹಿನ್ನಲೆಯಲ್ಲಿ ಆಯೋಜಿಸಿದ ವಿಜಯೋತ್ಸವದಲ್ಲಿ ಪಾಲ್ಗೊಳ್ಳಲು ಆಗಮಿಸಿದ್ದ ಸುಮಾರು ಏಳು ಅಭಿಮಾನಿಗಳು ಕಾಲ್ತುಳಿತದಲ್ಲಿ(Stampade) ಸಾವನ್ನಪ್ಪಿದ್ದಾರೆ.
ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂ(Bangalore Chinnaswami Stedium) ಸಮೀಪ ಈ ದುರ್ಘಟನೆ ಸಂಭವಿಸಿದೆ. ಘಟನೆಯಲ್ಲಿ ಇನ್ನೂ ಹಲವರ ಸ್ಥಿತಿ ಗಂಭೀರವಾಗಿದೆ ಎನ್ನಲಾಗಿದೆ.
ಚಾಂಪಿಯನ್ ಆರ್ಸಿಬಿ(Champion RCB) ಆಟಗಾರರನ್ನು ನೋಡಲು ಸಾವಿರಾರು ಸಂಖ್ಯೆಯಲ್ಲಿ ಅಭಿಮಾನಿಗಳು ವಿಧಾನಸೌಧದ ಮುಂದೆ ಜಮಾಯಿಸಿದ್ದಾರೆ. ಬಳಿಕ ಸೇರಿದ ಅಭಿಮಾನಿಗಳೆಲ್ಲಾ ಚಿನ್ನಸ್ವಾಮಿ ಸ್ಟೇಡಿಯಂ ಏಕಾಏಕಿ ಓಡಿ ಬಂದಿದ್ದಾರೆ. ಈ ವೇಳೆ ನೂಕು ನುಗ್ಗಲು ಉಂಟಾಗಿ ಹಲವರು ಗಂಭೀರವಾಗಿ ಗಾಯಗೊಂಡಿದ್ದರು.
ಗಾಯಾಳುಗಳನ್ನ ಬೌರಿಂಗ್ ಆಸ್ಪತ್ರೆಯಲ್ಲಿ(Bouring Hospital) ಚಿಕಿತ್ಸೆಗಾಗಿ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಿಸದೇ ಏಳು ಮಂದಿ ಅಭಿಮಾನಿಗಳು ಕಳೆದುಕೊಂಡಿದ್ದಾರೆ. ಮಾಹಿತಿ ಪ್ರಕಾರ ಸುಮಾರು ಐವತ್ತಕ್ಕೂ ಹೆಚ್ಚು ಅಭಿಮಾನಿಗಳಿಗೆ ಗಾಯಗಳಾಗಿದ್ದು, ಅವರನ್ನ ಬೌರಿಂಗ್ ಆಸ್ಪತ್ರೆಗೆ ಆಂಬುಲೆನ್ಸ್ ಮೂಲಕ ಶಿಫ್ಟ್ ಮಾಡಲಾಗಿದೆ. ಅವರಲ್ಲಿ ಮೂವರ ಸ್ಥಿತಿ ಗಂಭೀರವಾಗಿದ್ದು, ಅಸ್ವಸ್ಥರನ್ನ ಆಸ್ಪತ್ರೆಗೆ ಕರೆದೊಯ್ಯಲೂ ಕೂಡ ಪರದಾಡುವ ಸ್ಥಿತಿ ನಿರ್ಮಾಣವಾಗಿದೆ.
ವಿಜಯೋತ್ಸವದಲ್ಲಿ ರಾಜ್ಯದ ವಿವಿಧ ಭಾಗಗಳಿಂದ ಸಹಸ್ರಾರು ಸಂಖ್ಯೆಯ ಅಭಿಮಾನಿಗಳು ನೆಚ್ಚಿನ ಕ್ರೀಡಾಪಟುಗಳನ್ನ ನೋಡಲು ಆಗಮಿಸಿದ್ದರು.
ಇದನ್ನು ಓದಿ : ಈ ಸಲ ಕಪ್ ನಮ್ದು….ವಾಹ್ವ್…ಆರ್ ಸಿ ಬಿ.