ಇ ಸಮಾಚಾರ ಡಿಜಿಟಲ್ ನ್ಯೂಸ್ (esamachara digital news) ತಮಿಳುನಾಡು(Tamilunadu):  ನಟ, ತಮಿಳಿಗ ವಿಟ್ರಿ ಕಳಗಂ ಪಕ್ಷದ ಮುಖ್ಯಸ್ಥ ದಳಪತಿ ವಿಜಯ್ ಅವರು ನಡೆಸಿರುವ  ರ‍್ಯಾಲಿಯಲ್ಲಿ ಕಾಲ್ತುಳಿತ (Stampede) ಸಂಭವಿಸಿದೆ.

ಸಪ್ಟೆಂಬರ್ 27 ನಿನ್ನೆ ಶನಿವಾರ ತಮಿಳುನಾಡಿನ ಕರೂರಿನಲ್ಲಿ ನಡೆದ  ಘಟನೆಯಲ್ಲಿ ಸುಮಾರು 39 ಜನರು  ಸಾವನ್ನಪ್ಪಿದ್ದಾರೆ. ಈ ಭೀಕರ ದುರಂತದಲ್ಲಿ ಮಕ್ಕಳು, ಮಹಿಳೆಯರು ಸೇರಿದ್ದಾರೆ. ತಮಿಳುನಾಡಿನ ಕರೂರಿನಲ್ಲಿ ದಳಪತಿ ವಿಜಯ್ (Thalapathy Vijay) ಅವರು ರಾಜಕೀಯ ರ‍್ಯಾಲಿ ಹಮ್ಮಿಕೊಂಡಿದ್ದರು. ನೆಚ್ಚಿನ ನಾಯಕನನ್ನು ನೋಡಲು ಅಪಾರ ಸಂಖ್ಯೆಯಲ್ಲಿ ಅಭಿಮಾನಿಗಳು ಸೇರಿದ್ದರು. ನಾಯಕ ಇರುವ ವಾಹನದತ್ತ ಜನರು ನುಗ್ಗಲು ಪ್ರಯತ್ನಿಸಿದಾಗ ಈ ಭೀಕರ ಕಾಲ್ತುಳಿತ(Stampede) ಸಂಭವಿಸಿದೆ.

ನಟ ವಿಜಯ್(Actor Vijay) ಅವರು ಪ್ರಸಿದ್ದರಾಗುತ್ತಿದ್ದು ಅವರು ನಡೆಸುವ ಸಭೆಯಲ್ಲಿ ಅಪಾರ ಪ್ರಮಾಣದ ಜನರು ಜಮಾಯಿಸುತ್ತಾರೆ. ರಾಜಕೀಯ ಪ್ರವೇಶ ಮಾಡಿರುವ ವಿಜಯ್ ಅವರು ತಮಿಳಿಗ ವಿಟ್ರಿ ಕಳಗಂ ಪಕ್ಷದ ಪ್ರಚಾರಕ್ಕೆ ಹೆಚ್ಚು ಗಮನ ನೀಡಿದ್ದಾರೆ. ನಿನ್ನೆ ಶನಿವಾರ ಕರೂರು ಜಿಲ್ಲೆಯಲ್ಲಿ ಅವರು ದೊಡ್ಡ ರ‍್ಯಾಲಿ ನಡೆಸಿದರು. ಜನರನ್ನು ನಿಯಂತ್ರಿಸಲು ಸಾಧ್ಯವಾಗದೇ ಈ ದುರ್ಘಟನೆ ಸಂಭವಿಸಿದೆ. ಕಾಲ್ತುಳಿದಲ್ಲಿ 10 ಮಕ್ಕಳು ಸೇರಿದಂತೆ ಈವರೆಗೂ ಒಟ್ಟು 39 ಜನರು ಮೃತರಾಗಿದ್ದಾರೆ. 40ಕ್ಕೂ ಅಧಿಕ ಜನರು ಗಾಯಗೊಂಡಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ರ‍್ಯಾಲಿಯಲ್ಲಿ ಅಂದಾಜು 50 ಸಾವಿರಕ್ಕೂ ಹೆಚ್ಚು ಜನರು ಸೇರಿದ್ದರು ಎನ್ನಲಾಗಿದೆ. ದಳಪತಿ ವಿಜಯ್ ಅವರನ್ನು ಹತ್ತಿರದಿಂದ ನೋಡಬೇಕು ಎಂಬ ಕಾರಣಕ್ಕೆ ಎಲ್ಲರೂ ನುಗ್ಗಿದ್ದರಿಂದ ಕಾಲ್ತುಳಿತ(Stampede) ಉಂಟಾಯಿತು.

ಕಾಲ್ತುಳಿತ ಘಟನೆಯಲ್ಲಿ ಸಾವು ನೋವು  ಸಂಭವಿಸಿದ  ಸುದ್ದಿ ತಿಳಿದ ಕೂಡಲೇ ರಾಜಕೀಯ ನಾಯಕರು ಸಂತಾಪ(Condolence) ಸೂಚಿಸಿದ್ದಾರೆ. ನರೇಂದ್ರ ಮೋದಿ,  ಎಂ.ಕೆ. ಸ್ಟಾಲಿನ್(M K Stalin) ಮುಂತಾದವರು ಮೃತರ ಕುಟುಂಬಕ್ಕೆ ಸಂತಾಪ ಸೂಚಿಸಿದ್ದಾರೆ. ಘಟನೆ ಬಗ್ಗೆ ತನಿಖೆ ನಡೆಸಲಾಗುವುದು ಎಂದು ತಮಿಳುನಾಡು ಮುಖ್ಯಮಂತ್ರಿ(Tamilunadu CM) ಎಂ ಕೆ ಸ್ಟಾಲಿನ್ ಆದೇಶಿಸಿದ್ದಾರೆ. ಮೃತರ ಕುಟುಂಬಕ್ಕೆ  ತಲಾ 10 ಲಕ್ಷ ರೂಪಾಯಿ ಪರಿಹಾರ ಘೋಷಿಸಿದ್ದಾರೆ. ಗಾಯಗೊಂಡವರಿಗೆ ತಲಾ 1 ಲಕ್ಷ ರೂಪಾಯಿ ಪರಿಹಾರ ನೀಡುವುದಾಗಿ ತಿಳಿಸಿದ್ದಾರೆ. ‘ತಮಿಳುನಾಡಿನ ಯಾವುದೇ ರಾಜಕೀಯ ರ‍್ಯಾಲಿಯಲ್ಲಿ ಇಂಥ ದೊಡ್ಡ ದುರಂತ ಎಂದಿಗೂ ಸಂಭವಿಸಿರಲಿಲ್ಲ’ ಎಂದು ಸ್ಟಾಲಿನ್ ಹೇಳಿದ್ದಾರೆ. ಘಟನೆಗೆ ಸಂಬಂಧಿಸಿದಂತೆ ತನಿಖೆ ನಡೆಸಲು ನಿವೃತ್ತ ಹೈಕೋರ್ಟ್ ಜಡ್ಜ್ ನೇತೃತ್ವದಲ್ಲಿ ತಂಡ ರಚಿಸಲಾಗಿದೆ.

ಇದನ್ನು ಓದಿ : ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಗೆ ಸಾರ್ವಜನಿಕರು ಸ್ವಯಂ ಮಾಹಿತಿ ದಾಖಲಿಸಲು ಅವಕಾಶ.

ಕಕಡಲತೀರಕ್ಕೆ ಮುಗಿ ಬಿದ್ದ ಜನ.