ಇ ಸಮಾಚಾರ ಡಿಜಿಟಲ್ ನ್ಯೂಸ್ (esamachara digital news): ಹಳಿಯಾಳ(Haliyal) : ಖಾನಾಪುರ- ತಾಳಗುಪ್ಪ ರಾಜ್ಯ ಹೆದ್ದಾರಿಯಲ್ಲಿ(Khanaur-Talaguppa State Hughway) ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಘಟನೆಯಲ್ಲಿ ಐವರು ಕಾರು ಸವಾರರು ಗಂಭೀರವಾಗಿ ಗಾಯಗೊಂಡಿದ್ದಾರೆ.
ಉತ್ತರಕನ್ನಡ(Uttarakannada) ಜಿಲ್ಲೆಯ ಹಳಿಯಾಳ(Haliyal) ತಾಲೂಕಿನ ಅಂಚಿನ ಮದ್ನಳ್ಳಿ ಗ್ರಾಮದ(Madnalli Village) ಬಳಿ ನಡೆದಿದೆ. ಅಳ್ನಾವರ(Alnavar) ಕಡೆಗೆ ತೆರಳುತ್ತಿದ್ದ ಕಾರು ಚಾಲಕನ ನಿಯಂತ್ರಣ ತಪ್ಪಿ ಹಳಿಯಾಳದತ್ತ(Haliyal) ಬರುತ್ತಿದ್ದ ಟ್ರಕ್‌ಗೆ ಡಿಕ್ಕಿ ಹೊಡೆದ ಪರಿಣಾಮ ಅಪಘಾತ ಸಂಭವಿಸಿದೆ ಎಂದು ತಿಳಿದುಬಂದಿದೆ.
ಅಪಘಾತದ ತೀವ್ರತೆಗೆ ಕಾರು ಸಂಪೂರ್ಣ ಜಖಂಗೊಂಡಿದ್ದು, ಕಾರಿನಲ್ಲಿದ್ದ ಐವರು ಸವಾರರು ಗಂಭೀರವಾಗಿ ಗಾಯಗೊಂಡಿದ್ದಾರೆ. ಸ್ಥಳೀಯರು ಹಾಗೂ ತುರ್ತು ಸೇವಾ ಸಿಬ್ಬಂದಿಗಳ ಸಹಾಯದಿಂದ ಗಾಯಾಳುಗಳನ್ನು ಹಳಿಯಾಳ ತಾಲೂಕು ಆಸ್ಪತ್ರೆಗೆ(Haliyal Taluku Hospital) ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ಘಟನಾ ಸ್ಥಳಕ್ಕೆ 112 ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದರು. ಅಪಘಾತದಿಂದ ಕೆಲಕಾಲ ಖಾನಾಪುರ–ತಾಳಗುಪ್ಪ ರಾಜ್ಯ ಹೆದ್ದಾರಿಯಲ್ಲಿ(Khanaur-Talaguppa State Hughway) ವಾಹನ ಸಂಚಾರ ಅಸ್ತವ್ಯಸ್ತಗೊಂಡು ಟ್ರಾಫಿಕ್ ಜಾಮ್ ಉಂಟಾಯಿತು. ಹಳಿಯಾಳ ಪೊಲೀಸರು(Haliyal Police) ಪ್ರಕರಣ ದಾಖಲಿಸಿಕೊಂಡು ಮುಂದಿನ ತನಿಖೆ ಕೈಗೊಂಡಿದ್ದಾರೆ.
ಇದನ್ನು ಓದಿ : ಖೈದಿಯ ಜೊತೆ ಜೈಲು ಅಧಿಕಾರಿ ಲವ್ ಮ್ಯಾರೇಜ್. ಅಡ್ಡ ಬಂದ ಜಾತಿಗೆ ಗೋಡೆಯಾಗಿ ನಿಂತ ವಿಶ್ವ ಹಿಂದು ಪರಿಷತ್.
